More

    ಮೈಸೂರಿನಲ್ಲಿ ಮಾ.24 ರಂದು ಬಿಜೆಪಿ ಎಸ್ಟಿ ಮೋರ್ಚಾ ಸಮಾವೇಶ

    ಮೈಸೂರು: ಬಿಜೆಪಿ ನಗರ ಮತ್ತು ಗ್ರಾಮಾಂತರ ಎಸ್ಟಿ ಮೋರ್ಚಾ ವತಿಯಿಂದ ಮಾ.24 ರಂದು ಬೆಳಗ್ಗೆ 11ಕ್ಕೆ ನಗರದ ನಂಜುಮಳಿಗೆ ವೃತ್ತದ ಬಳಿಯ ನೇರಂಬಳ್ಳಿ ಸುಬ್ಬರಾವ್ ಕಲ್ಯಾಣ ಮಂಟಪದಲ್ಲಿ ಎಸ್ಟಿ ಮೋರ್ಚಾ ಮುನ್ನಡೆ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಮೇಯರ್ ಶಿವಕುಮರ್ ಹೇಳಿದರು.

    ಸಮಾವೇಶದಲ್ಲಿ ಒಂದು ಸಾವಿರಕ್ಕೂ ಹೆಚ್ಚಿನ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಸಮಾವೇಶದಲ್ಲಿ ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ್, ಮಾಜಿ ಸಚಿವ ಎಸ್.ಎ. ರಾಮದಾಸ್, ಪಕ್ಷದ ನಗರಾಧ್ಯಕ್ಷ ಎಲ್.ನಾಗೇಂದ್ರ, ಜಿಲ್ಲಾಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ, ಎಸ್ಟಿ ಮೋರ್ಚಾ ರಾಜ್ಯಾಧ್ಯಕ್ಷ ಬಂಗಾರು ಹನುಮಂತ, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

    ಕಾನೂನು ಬದ್ಧವಾಗಿ ಎಸ್ಸಿ, ಎಸ್ಟಿ ಸಮುದಾಯಗಳ ಅಭಿವೃದ್ಧಿಗೆ ಮೀಸಲಿಟ್ಟಿದ್ದ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಿಸಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಎಸ್ಸಿ, ಎಸ್ಟಿ ಸಮುದಾಯಗಳಿಗೆ ಅನ್ಯಾಯ ಮಾಡಿದ್ದಾರೆ. ಎಸ್ಸಿ,ಎಸ್ಟಿ ಅನುದಾನ ಕಸಿದಿರುವ ಸಿದ್ದರಾಮಯ್ಯ ಮತ್ತೊಂದೆಡೆ ಅಲ್ಪಸಂಖ್ಯಾತರ ಅಭಿವೃದ್ಧಿಗೆ 10 ಸಾವಿರ ಕೋಟಿ ರೂ. ಅನುದಾನ ಘೋಷಿಸಿದ್ದು, ಅದರಲ್ಲಿ ಮೊದಲ ಕಂತಾಗಿ ಒಂದೂವರೆ ಸಾವಿರ ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದಾರೆ. ಇದು ಸಿದ್ದರಾಮಯ್ಯ ಎಸ್ಸಿ, ಎಸ್ಟಿ ಸಮುದಾಯಗಳ ಬಗ್ಗೆ ಅನುಸರಿಸುತ್ತಿರುವ ತಾತ್ಸಾರ ಧೋರಣೆಗೆ ಉದಾಹರಣೆಯಾಗಿದೆ ಎಂದರು.

    ಬಿಜೆಪಿಯಿಂದ ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ ಹಲವಾರು ಕೊಡುಗೆಗಳನ್ನು ನೀಡಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಎಸ್ಸಿ, ಎಸ್ಟಿ ಮೀಸಲಾತಿ ಪ್ರಮಾಣ ಹೆಚ್ಚಿಸಲಾಯಿತು. ಪರಿವಾರ ಮತ್ತು ತಳವಾರ ಸಮುದಾಯವನ್ನು ಎಸ್ಟಿ ಪಟ್ಟಿಗೆ ಸೇರ್ಪಡೆಗೊಳಿಸುವ ಮಹತ್ವದ ತೀರ್ಮಾನವನ್ನು ಕೇಂದ್ರದ ಬಿಜೆಪಿ ಸರ್ಕಾರ ಕೈಗೊಂಡಿತ್ತು ಎಂದು ಹೇಳಿದರು.

    ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಎಸ್ಟಿ ಮೋರ್ಚಾ ಜಿಲ್ಲಾಧ್ಯಕ್ಷ ಮುದ್ದುಕೃಷ್ಣ, ಪ್ರಧಾನ ಕಾರ್ಯದರ್ಶಿಗಳಾದ ನಾರಾಯಣ್ ಲೋಲಪ್ಪ, ಸುಣ್ಣದಕೇರಿ ಕೃಷ್ಣ ನಾಯಕ, ನಗರಾಧ್ಯಕ್ಷ ಪಡುವಾರಹಳ್ಳಿ ರಾಮಕೃಷ್ಣ ಹಾಗೂ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts