Monday, 17th December 2018  

Vijayavani

ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣ-ಆರೋಗ್ಯ ಸಚಿವರ ಉಡಾಫೆ ಹೇಳಿಕೆ ಪ್ರಸ್ತಾಪ-ಪರಿಷತ್​ನಲ್ಲಿ ಬಿಜೆಪಿಯಿಂದ ನಿಲುವಳಿ ಸೂಚನೆ        ಶುರುವಾಯ್ತು ಪೆಥಾಯ್ ಪ್ರತಾಪ-ಆಂಧ್ರ, ತಮಿಳುನಾಡು ಕರಾವಳಿಯಲ್ಲಿ ಅಲೆಗಳ ಅಬ್ಬರ-ಚೆನ್ನೈ ಸೇರಿ ಹಲವೆಡೆ ಭಾರಿ ಮಳೆ ಸಾಧ್ಯತೆ        ಒಂದೇ ರಸ್ತೆ, ಎರಡು ಇಲಾಖೆ ಬಿಲ್-ಭೂಸೇನೆ, ಪಿಡಬ್ಲ್ಯೂಡಿ ಇಲಾಖೆ ಬಿಲ್​​ಗಾಗಿ ಪೈಪೋಟಿ-ಮುಗಿದ ರಸ್ತೆಗೆ ಗುದ್ದಲಿ ಪೂಜೆ ನೆರವೇರಿಸಿದ ಕೈ ಶಾಸಕ        ಇನ್ನೂ ನಿಂತಿಲ್ಲ ‘ವಿಷ’ಪ್ರಸಾದದ ಎಫೆಕ್ಟ್-ಚಿಕಿತ್ಸೆ ಪಡೀತಿರೋ 30 ಜನ್ರ ಸ್ಥಿತಿ ಗಂಭೀರ-ಆರೋಪಿತರ ಪರ ವಕಾಲತ್ತು ವಹಿಸದಿರಲು ವಕೀಲರ ನಿರ್ಧಾರ        ಇಂದು 3 ರಾಜ್ಯ ಸಿಎಂಗಳ ಪದಗ್ರಹಣ-ರಾಜ್ಯದಿಂದ ಸಿಎಂ ಎಚ್​ಡಿಕೆ, ಸಿದ್ದುಗೆ ವಿಶೇಷ ಆಹ್ವಾನ-ಕೈ ಸಮಾರಂಭದಲ್ಲಿ ತೃತೀಯ ಶಕ್ತಿ ಪ್ರದರ್ಶನ        37ನೇ ವಸಂತಕ್ಕೆ ‘ಉಗ್ರಂ’ ಸ್ಟಾರ್ ಮುರಳಿ-37ನೇ ಬರ್ತಡೇ.. 37 ಕೆಜಿ ಕೇಕ್ ಕಟ್-ಫ್ಯಾನ್ಸ್​​ಗೆ ಭರಾಟೆ ಟೀಸರ್, ಮದಗಜ ಫಸ್ಟ್ ಪೋಸ್ಟರ್ ಗಿಫ್ಟ್       
Breaking News

ರಾಮನಗರದಲ್ಲಿ ಮತದಾರರು ಸೂಚಿಸಿದವರಿಗೆ ಬಿಜೆಪಿ ಟಿಕೆಟ್​

Friday, 12.10.2018, 6:35 PM       No Comments

<< ಅಭ್ಯರ್ಥಿಯೇ ಇಲ್ಲದೆಯೂ ಪ್ರಚಾರ ಆರಂಭಿಸಿದ ಕಾರ್ಯಕರ್ತರು >>

ರಾಮನಗರ: ರಾಮನಗರ ವಿಧಾನಸಭೆ ಕ್ಷೇತ್ರದ ಅಭ್ಯರ್ಥಿ ಯಾರಾಗಬೇಕೆಂಬ ವಿಚಾರದಲ್ಲಿ ಬಿಜೆಪಿಗೆ ಎದುರಾಗಿರುವ ಕಗ್ಗಂಟು ಇನ್ನೂ ಮುಂದುವರಿದಿದೆ. ಹೀಗಾಗಿ ಮತದಾರರ ಅಭಿಪ್ರಾಯ ಸಂಗ್ರಹಿಸಿ ಟಿಕೆಟ್​ ನೀಡಲು ಪಕ್ಷ ನಿರ್ಧರಿಸಿದೆ. ಈ ನಡುವೆ ಅಭ್ಯರ್ಥಿ ಯಾರೆಂಬುದೇ ಅಂತಿಮವಾಗದೆ ಕಮಲ ಪಾಳಯ ರಾಮನಗರದಲ್ಲಿ ಪ್ರಚಾರ ಶುರುವಿಟ್ಟುಕೊಂಡಿದೆ.

ಯಾರು ಚುನಾವಣೆ ಕಣಕ್ಕಿಳಿಯಬೇಕೆಂಬುದನ್ನು ನಿರ್ಧರಿಸಲು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಅವರ ನೇತೃತ್ವದಲ್ಲಿ ಇಂದು ರಾಮನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ರುದ್ರೇಶ್​ ಅವರ ನಿವಾಸದಲ್ಲಿ ಸ್ಥಳೀಯ ಮುಖಂಡರ ಸಭೆ ನಡೆಸಲಾಯಿತು.

ಅಭ್ಯರ್ಥಿಯ ಆಯ್ಕೆಗಾಗಿ ಇಂದಿನಿಂದಲೇ ಕ್ಷೇತ್ರಾದ್ಯಂತ ಬೂತ್​ ಮಟ್ಟದಲ್ಲಿ ಸರ್ವೆ ನಡೆಸಲು ಸದಾನಂದಗೌಡರು ಕಾರ್ಯಕರ್ತರಿಗೆ ಸೂಚಿಸಿದರು. ಮತದಾರರ ಹೇಳಿಕೆಗಳನ್ನು ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರ ಗಮನಕ್ಕೆ ತರಲು ನಿರ್ಧರಿಸಲಾಯಿತು. ಮತದಾರರು ಯಾರ ಹೆಸರು ಸೂಚಿಸುತ್ತಾರೆ ಅವರಿಗೆ ಟಿಕೆಟ್ ಹಂಚಿಕೆಯಾಗಲಿದೆ. ಬಳಿಕ ಸೋಮವಾರ ಬೆಳಗ್ಗೆಯೊಳಗೆ ಅಭ್ಯರ್ಥಿಗೆ ಟಿಕೆಟ್ ನೀಡಲಾಗುವುದು ಎಂದು ಸದಾನಂದಗೌಡರು ಸಭೆಯಲ್ಲಿ ತಿಳಿಸಿದ್ದಾರೆ.

ಯಾರಿಗೇ ಟಿಕೆಟ್ ಸಿಕ್ಕರೂ ಪಕ್ಷಕ್ಕಾಗಿ ದುಡಿಯಬೇಕು. ಸಿ.ಪಿ.ಯೋಗೇಶ್ವರ್ ಟಿಕೆಟ್ ಆಕಾಂಕ್ಷಿಯಲ್ಲ ಎಂದೂ ಅವರು ಸಭೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Back To Top