More

  ಕಾಂಗ್ರೆಸ್ ಸರ್ಕಾರದಿಂದ ಅಸಮರ್ಥ ಆಡಳಿತ: ಬಿಜೆಪಿ ರಾಜ್ಯ ವಕ್ತಾರ ಎಂ.ಜಿ.ಮಹೇಶ್ ಟೀಕೆ

  ಮಂಡ್ಯ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು ಒಂದು ವರ್ಷವಾಗಿದ್ದು, ಇಷ್ಟು ದಿನ ಅಸಮರ್ಥ ಆಡಳಿತ ನೀಡುತ್ತಿದೆ ಎಂದು ರಾಜ್ಯ ವಕ್ತಾರ ಎಂ.ಜಿ.ಮಹೇಶ್ ಆರೋಪಿಸಿದರು.
  ಜನಾದೇಶಕ್ಕೆ ಅಪಹಾಸ್ಯ ಮಾಡುವ ನಿಟ್ಟಿನಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ತೆಲಂಗಾಣದ ಚುನಾವಣಾ ಖರ್ಚಿಗಾಗಿ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ತೆರಿಗೆ ಹೆಚ್ಚಿಸಿ ರಾಜ್ಯದ ಜನರಿಗೆ ಬರೆ ಎಳೆಯುವ ಕೆಲಸ ಮಾಡಿದ್ದಾರೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.
  ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಾದಾಗ ಪ್ರಧಾನಮಂತ್ರಿ ನರೇಂದ್ರಮೋದಿ ಅವರೇ ಇಂಧನ ಮೇಲಿನ ತೆರಿಗೆ ಕಡಿಮೆ ಮಾಡಿ ಎಲ್ಲ ರಾಜ್ಯಗಳಿಗೂ ತೆರಿಗೆ ಕಡಿಮೆ ಮಾಡಿ ಜನರಿಗೆ ಆಗುವಂತಹ ಹೊರೆ ಇಳಿಸಬೇಕು ಎಂದು ಮನವಿ ಮಾಡಿದ್ದರು. ಅದರಂತೆ ಅಂದು ರಾಜ್ಯದ ಸಿಎಂ ಆಗಿದ್ದ ಬಸವರಾಜ ಬೊಮ್ಮಾಯಿ ಅವರು 3 ರೂ ಇಳಿಕೆ ಮಾಡಿದ್ದರು. ದಕ್ಷಿಣ ಭಾರತದ ಎಲ್ಲ ರಾಜ್ಯಗಳಿಗಿಂತಲೂ ಕಡಿಮೆ ದರ ಕರ್ನಾಟಕದಲ್ಲಿತ್ತು. ಆದರೆ. ಸಿದ್ದರಾಮಯ್ಯ ಸರ್ಕಾರ ಹೆಚ್ಚಳ ಮಾಡುವ ಮೂಲಕ ರಾಜ್ಯದ ಜನರಿಗೆ ಮತ್ತಷ್ಟು ಸಂಕಷ್ಟ ಉಂಟುಮಾಡಿದ್ದಾರೆ ಎಂದು ದೂರಿದರು.
  ರಾಜ್ಯದ ಜನತೆ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ನೀಡಿದ್ದಾರೆ. ಆದರೂ ಪದೇ ಪದೇ ಯಾವುದಾದರೂ ರೂಪದಲ್ಲಿ ಬೆಲೆ ಹೆಚ್ಚಳ ಮಾಡುತ್ತಲೇ ಇದ್ದಾರೆ. ವಿದ್ಯುತ್, ನೋಂದಣಿ ಶುಲ್ಕ, ಸ್ಟ್ಯಾಂಪ್ ಡ್ಯೂಟಿ ಸೇರಿದಂತೆ ಎಲ್ಲೆಲ್ಲಿ ಹೆಚ್ಚಳ ಮಾಡಬಹುದೋ ಅಲ್ಲೆಲ್ಲೆ ಹೆಚ್ಚಳ ಮಾಡುತ್ತಿದ್ದಾರೆ. ಎಲ್ಲ ವಿಚಾರಗಳಿಗೂ ಪ್ರತಿಕ್ರಿಯೆ ನೀಡುವ ಪ್ರಿಯಾಂಕಾ ಖರ್ಗೆ ಅವರ ಇಲಾಖೆ ಗ್ರಾಮೀಣ ಜನರಿಗೆ ಶುದ್ಧ ಕುಡಿಯುವ ನೀರೊದಗಿಸಿದೆ ಒಂದು ತಿಂಗಳಲ್ಲಿ 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಕಲುಬುರಗಿಯ ಜಯದೇವ ಆಸ್ಪತ್ರೆಯಲ್ಲಿ ರೋಗಿಗಳಿಗೆ ಕುಡಿಯುವ ನೀರು ಇಲ್ಲ. ಆದರೆ 2ನೇ ಹಂತದ ಜಯದೇವ ಆಸ್ಪತ್ರೆ ತೆರೆಯಲು ಮುಂದಾಗಿದ್ದಾರೆ ಎಂದು ಟೀಕಿಸಿದರು.
  ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ತಾಕತ್ತು ಇಲ್ಲದ ಗೃಹ ಸಚಿವರಿಂದ ಖಾತೆಯನ್ನು ಸರಿಯಾಗಿ ನಿರ್ವಹಣೆ ಮಾಡಲು ಸಾಧ್ಯವಾಗುತ್ತಿಲ್ಲ. ಪೊಲೀಸ್ ಠಾಣೆಗೆ ನುಗ್ಗಿ ಪೊಲೀಸರ ಮೇಲೆ ಹಲ್ಲೆ ನಡೆಸುಂತಹ ಪ್ರಕ್ರಿಯೆ ಹೆಚ್ಚಾಗಿದೆ. ಪೊಲೀಸರಿಗೆ ಈಗಾದರೆ ಇನ್ನು ಜನಸಾಮಾನ್ಯರ ಪಾಡೇನು ಎಂದು ಪ್ರಶ್ನಿಸಿದ ಅವರು, ನಾಲ್ಕೈದು ತಿಂಗಳಲ್ಲಿ ಗ್ಯಾರಂಟಿ ಯೋಜನೆಗಳ ಅವಧಿ ಮುಗಿಯುತ್ತದೆ. ಜನರ ತೆರಿಗೆಯನ್ನು ವಾಪಸ್ ತೆರಿಗೆ ಕೊಟ್ಟು ಗ್ಯಾರಂಟಿ ಯೋಜನೆ ಎನ್ನುತ್ತಾರೆ. ಮುಖ್ಯಮಂತ್ರಿ ಅಥವಾ ಮಂತ್ರಿಗಳು ಅವರ ಮನೆಯಿಂದ ತಂದು ಕೊಡುತ್ತಾರೆಯೇ?. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿದ್ದ 11,500 ಕೋಟಿ ರೂಗಳನ್ನು ಹಿಂಪಡೆದು ಗ್ಯಾರಂಟಿ ಯೋಜನೆಗೆ ಬಳಸಿಕೊಂಡಿದ್ದೀರಿ. ಇಷ್ಟು ಸಾಲದೆಂಬಂತೆ ಲಕ್ಷಾಂತರ ರೂ ಸಾಲ ಮಾಡಿದ್ದೀರಿ. ಈ ಹಣ ಎಲ್ಲಿಗೆ ಹೋಗಿದೆ. ಲೂಟಿ ಹೊಡೆದಿದ್ದೀರಾ ಎಂದು ಪ್ರಶ್ನಿಸಿದರು.
  ಜಿಲ್ಲಾ ಬಿಜೆಪಿ ವಕ್ತಾರ ಸಿ.ಟಿ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ವಿವೇಕ್, ಕಚೇರಿ ಕಾರ್ಯದರ್ಶಿ ಚಂದ್ರು, ಮಾಧ್ಯಮ ಸಂಚಾಲಕ ನಾಗಾನಂದ್ ಇದ್ದರು.

  See also  ಹಣ ವಾಪಸ್ ಕೊಡಿ ಎಂದಿದ್ದ ಪ್ರಕರಣ: ಮಾಜಿ ಸಚಿವ ಕೆ.ಸಿ.ನಾರಾಯಣಗೌಡ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ

  ಇಂದು ರಸ್ತೆ ಸಂಚಾರ ತಡೆ
  ರಾಜ್ಯ ಸರ್ಕಾರದ ಆಡಳಿತ ವೈಫಲ್ಯ, ಪೆಟ್ರೋಲ್ ಮತ್ತು ಡೀಸೆಲ್ ತೆರಿಗೆ ಹೆಚ್ಚಳ ವಿರೋಧಿಸಿ ಜೂ.20ರಂದು ರಾಜ್ಯಾದ್ಯಂತ ಬಿಜೆಪಿ ವತಿಯಿಂದ ರಸ್ತೆ ತಡೆ ನಡೆಸಲಾಗುತ್ತದೆ ಎಂದು ರಾಜ್ಯ ವಕ್ತಾರ ಎಂ.ಜಿ.ಮಹೇಶ್ ತಿಳಿಸಿದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts