ಕಾರವಾರ: ಡಿಸಿಎಂ ಡಿ.ಕೆ.ಶಿವಕುಮಾರ್ ಸಂವಿಧಾನ ಬದಲಿಸುವ ಮಾತನಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿಗರು ಜಿಲ್ಲಾದ್ಯಂತ ಮಂಗಳವಾರ ಪ್ರತಿಭಟನೆ ನಡೆಸಿದರು.
ಕಾರವಾರದ ಅಂಬೇಡ್ಕರ್ ಸರ್ಕಲ್‌ನಲ್ಲಿ ಸೇರಿದ ಬಿಜೆಪಿ ಪ್ರಮುಖರು ಡಿ.ಕೆ.ಶಿವಕುಮಾರ್ ವಿರುದ್ಧ ಘೋಷಣೆಗಳನ್ನು ಕೂಗಿದರು.ನಂತರ ಅವರ ಪ್ರತಿಕೃತಿಗೆ ಬೆಂಕಿ ಹಚ್ಚುವ ಯತ್ನ ನಡೆಸಿದರು.
ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನ ಬದಲಿಸಲು ಹೊರಟಿರುವ ಕಾಂಗ್ರೆಸ್ಸಿಗರ ನಡೆ ಖಂಡನೀಯ. ಸಂವಿಧಾನಕ್ಕೆ ಅಪಚಾರ ಎಸಗಿರುವ ಡಿ.ಕೆ.ಶಿವಕುಮಾರ್ ಅವರನ್ನು ಸಂಪುಟದಿAದ ಕೈಬಿಡಬೇಕು. ಕಾಂಗ್ರೆಸ್ ಮುಸ್ಲಿಂ ಸಮುದಾಯವನ್ನು ಅಭಿವೃದ್ಧಿ ಮಾಡುವ ಬದಲು ಕೇವಲ ಮತ ಬ್ಯಾಂಕ್‌ಗೋಸ್ಕರ ಅವರನ್ನು ಬಳಸಿಕೊಳ್ಳುತ್ತಿದೆ ಎಂದು ದೂರಿದರು.
ನಗರಸಭೆಯ ಅಧ್ಯಕ್ಷ ರವಿರಾಜ ಅಂಕೋಲೆಕರ್,ಬಿಜೆಪಿ ನಗರ ಮಂಡಲದ ಅಧ್ಯಕ್ಷ ನಾಗೆಶ ಕುರ್ಡೇಕರ್, ಗ್ರಾಮೀಣ ಮಂಡಲ ಅಧ್ಯಕ್ಷ ಸುಭಾಷ ಗುನಗಿ ಇತರರು ಇದ್ದರು.
ಮಾತಿನ ಚಕಮಕಿ
ಬಿಜೆಪಿಗರು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಭಾವಚಿತ್ರವಿರುವ ಪ್ರತಿಕೃತಿಗೆ ಬೆಂಕಿ ಹಚ್ಚಲು ಯತ್ನಿಸಿದರು. ಎರಡು ಬಾರಿ ಪೊಲೀಸರು ಅದನ್ನು ತಪ್ಪಿಸಿದರು. ನಂತರ ಪ್ರತಿಕೃತಿಯನ್ನು ವಶಕ್ಕೆ ಪಡೆದರು. ಅದನ್ನು ಮಾಜಿ ಶಾಸಕಿ ರೂಪಾಲಿ ನಾಯ್ಕ ವಿರೋಽಸಿದರು. ಈ ಸಂದರ್ಭದಲ್ಲಿ ಪೊಲೀಸರು ಹಾಗೂ ಬಿಜೆಪಿ ಪ್ರಮುಖರ ನಡುವೆ ಮಾತಿನ ಚಕಮಕಿ ನಡೆಯಿತು.
ಡಿಸಿಎಂ ಡಿ.ಕೆ.ಶಿವಕುಮಾರ್ ರಾಜೀನಾಮೆಗೆ ಒತ್ತಾಯ

You Might Also Like
Oil Food: ಎಣ್ಣೆ ಪದಾರ್ಥ ಆಹಾರ ತಿಂದ ನಂತರ ಈ ಕೆಲಸಗಳನ್ನು ಮಾಡಿ ಆರೋಗ್ಯಕ್ಕೆ ಒಳ್ಳೆಯದು
Oil Food: ನಮ್ಮಲ್ಲಿ ಹಲವರಿಗೆ ಯಾವಾಗಲೂ ಎಣ್ಣೆಯುಕ್ತ ಆಹಾರವನ್ನು ಸೇವಿಸಬೇಕು ಎಂದು ಅನಿಸುತ್ತದೆ. ಅಂದರೆ ನಾವು…
ಬೇಸಿಗೆಯಲ್ಲಿ ಜಿಮ್ಗೆ ಹೋಗುವ ಮೊದಲು ಸುಸ್ತಾಗುತ್ತೀದ್ರೆ ಈ ಜ್ಯೂಸ್ಗಳನ್ನು ಒಮ್ಮೆ ಟ್ರೈ ಮಾಡಿ, ದಣಿವು ದೂರವಾಗುವುದು ಖಂಡಿತ!Pre Workout Drinks
Pre Workout Drinks: ಬೇಸಿಗೆಯ ಬಿಸಿಲಿನಲ್ಲಿ ಸ್ವಲ್ಪ ದೂರ ನಡೆದರೂ ಸಹ ದೇಹವು ದಣಿಯುತ್ತದೆ, ಬಾಯಾರಿಕೆ…
ಬೇಸಿಗೆಯಲ್ಲಿ ಬೇವಿನ ನೀರಿನಿಂದ ಸ್ನಾನ ಮಾಡಿದರೆ ಏನೆಲ್ಲಾ ಲಾಭಗಳಿವೆ ಗೊತ್ತಾ? Neem
Neem: ಬೇವು ಎಂದರೆ ಮೂಗು ಮುರಿಯುವ ಜನರೇ ಹೆಚ್ಚು. ಆದರೆ ಈ ಬೇವಿನಲ್ಲಿ ಎಷ್ಟೆಲ್ಲಾ ಪ್ರಯೋಜನಗಳಿವೆ…