More

    ಭ್ರಷ್ಟಾಚಾರದಲ್ಲಿ ತೊಡಗಿದ ಕಾಂಗ್ರೆಸ್ ಸರ್ಕಾರ- ಶಾಸಕಿ ರೂಪಾಲಿ ನಾಯ್ಕ ಆರೋಪ


    ಕಾರವಾರ: ಪ್ರತಿ ಹಂತದಲ್ಲಿ ಕಾಂಗ್ರೆಸ್ ಭ್ರಷ್ಟಾಚಾರ ನಡೆಸುತ್ತಿದೆ ಎಂದು ಮಾಜಿ ಶಾಸಕಿ ರೂಪಾಲಿ ನಾಯ್ಕ ಆರೋಪಿಸಿದರು.‌

    ಜಿಲ್ಲಾಧಿಕಾರಿ ಕಚೇರಿಯ ಎದುರು ಬಿಜೆಪಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ವಿರುದ್ದ ಆರೋಪ ಮಾಡುತ್ತಿದ್ದ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷನ ಮನೆಯಲ್ಲಿ ಕೋಟ್ಯಂತರ ನಗದು ಪತ್ತೆಯಾಗಿದೆ. ಇದು ಕಾಂಗ್ರೆಸ್ ಭ್ರಷ್ಟಾಚಾರದ ಹಣ ಎಂದು ಆರೋಪಿಸಿದರು.

    ಇದನ್ನೂ ಓದಿ: ಕೇಂದ್ರದ ದ್ವಂದ್ವ ನಿಲುವುಗಳಿಂದ ಮಾಧ್ಯಮಗಳಿಗೆ ಸಂಕಷ್ಟ: ಡಾ. ವಿಜಯ ಸಂಕೇಶ್ವರ ಅಭಿಪ್ರಾಯ; ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಮೀಡಿಯಾ ಸ್ಕೂಲ್ ಉದ್ಘಾಟನೆ

    ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಶೇ.40 ಕಮೀಷನ್ ಸುಳ್ಳು ಆರೋಪ ಮಾಡುತ್ತಿದ್ದ ಕಾಂಗ್ರೆಸ್ ಈಗ ತಾನೇ ಶೇ.80 ಕಮೀಷನ್ ಪಡೆದು ಭ್ರಷ್ಟಾಚಾರ ನಡೆಸುತ್ತಿದೆ’ ಎಂದು ಆರೋಪಿಸಿದರು.

    .ಕಾರವಾರ ಶಾಸಕರು ಬಿಜೆಪಿ ಸರ್ಕಾರದ ಅವಧಿಯ ಕಾಮಗಾರಿಗಳನ್ನು ಸ್ಥಗಿತಗೊಳಿಸಿಟ್ಟಿದ್ದಾರೆ. ದೇವಾಲಯಗಳಿಗೆ ಮಂಜೂರಾದ ಅನುದಾನವನ್ನೂ ಸರ್ಕಾರ ನೀಡುತ್ತಿಲ್ಲ ಎಂದರು ದೂರಿದರು.

    ಹೋಬಳಿ ಮಟ್ಟದಲ್ಲಿ ಮದ್ಯ ಮಾರಾಟಕ್ಕೆ ಈಗಿನ ಸರ್ಕಾರ ದಾರಿ ಮಾಡಿಕೊಟ್ಟಿದೆ. ಅಧಿಕಾರಿಗಳ ವರ್ಗಾವಣೆಯಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ. ಅಕ್ರಮವಾಗಿ ಕ್ವಾರಿಗಳು ನಡೆಸುತ್ತಿದೆ ಎಂದು ಜಿಲ್ಲಾ ಘಟಕದ ವಕ್ತಾರ ನಾಗರಾಜ ನಾಯಕ ಹೇಳಿದರು.

    ‘ರಾಜ್ಯ ಸರ್ಕಾರವನ್ನು ವಜಾಗೊಳಿಸಲು ರಾಜ್ಯಪಾಲರು ಮುಂದಾಗಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಅವರಿಗೆ ಮನವಿ ಸಲ್ಲಿಸಲಾಯಿತು.

    ಬಿಜೆಪಿ ನಗರ ಅಧ್ಯಕ್ಷ ನಾಗೇಶ ಕುರ್ಡೇಕರ್, ಗ್ರಾಮೀಣ ಘಟಕದ ಅಧ್ಯಕ್ಷ ಸುಭಾಷ ಗುನಗಿ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಮನೋಜ್ ಬಾಂದೇಕರ್, ಸಂಜಯ ಸಾಳುಂಕೆ, ಪ್ರಕಾಶ ನಾಯ್ಕ, ನಗರಸಭೆ ಸದಸ್ಯರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts