More

    ಬಿಜೆಪಿಯಿಂದ ಸಂಸ್ಕೃತಿ, ಧರ್ಮ ರಕ್ಷಣೆ: ಉಪಮುಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ್

    ಪುತ್ತೂರು/ಬಂಟ್ವಾಳ: ಸಂಸ್ಕೃತಿ ಹಾಗೂ ಆಚಾರ ವಿಚಾರಗಳನ್ನು ನಾಶ ಮಾಡುವುದು ಕಾಂಗ್ರೆಸ್‌ನ ಕೆಲಸವಾಗಿದ್ದರೆ, ಸಂಸ್ಕೃತಿ, ಧರ್ಮವನ್ನು ಕಾಪಾಡುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಈ ನಿಟ್ಟಿನಲ್ಲಿ ಕಾರ್ಯಕರ್ತರ ಶ್ರಮ ಶ್ಲಾಘನೀಯ ಎಂದು ಉಪ ಮುಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ ಹೇಳಿದರು.

    ಬಂಟ್ವಾಳ ಹಾಗೂ ಪುತ್ತೂರಿನಲ್ಲಿ ಶನಿವಾರ ದ.ಕ. ಜಿಲ್ಲಾ ಬಿಜೆಪಿ ಆಯೋಜಿಸಿದ್ದ ಗ್ರಾಮ ಸ್ವರಾಜ್ಯ ಸಮಾವೇಶದಲ್ಲಿ ಮಾತನಾಡಿದ ಅವರು, ತುಷ್ಟೀಕರಣದ ರಾಜಕಾರಣ ಕಾಂಗ್ರೆಸ್ ಸಂಸ್ಕ ೃತಿ; ಅದು ಅಭಿವೃದ್ಧಿಯಲ್ಲೂ ಸೋತು ಮೂಲೆಗುಂಪಾಗಿದೆ. ಮುಂದಿನ ಚುನಾವಣೆಯಲ್ಲಿ ಗ್ರಾಮ ಸ್ವರಾಜ್ಯದ ಪರಿಕಲ್ಪನೆಯಲ್ಲಿ ಪ್ರತೀ ಗ್ರಾಮ ಪಂಚಾಯಿತಿಗಳಲ್ಲಿ ಬಿಜೆಪಿ ಬೆಂಬಲಿತ ಕಾರ್ಯಕರ್ತರ ಗೆಲುವಿಗಾಗಿ ತಕ್ಷಣದಿಂದಲೇ ಶ್ರಮಿಸಬೇಕಾಗಿದೆ ಎಂದರು.
    ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ, ಕಾರ್ಯಕರ್ತರು ಗ್ರಾಮಮಟ್ಟದಲ್ಲಿ ಹೆಮ್ಮೆ ಪಡುವಂತಹ ಕಾರ್ಯಕ್ರಮಗಳನ್ನು ಬಿಜೆಪಿ ಸರ್ಕಾರ ಜಾರಿಗೊಳಿಸಿದೆ. ಅಟಲ್‌ಜಿ ಹಾಗೂ ನರೇಂದ್ರ ಮೋದಿಗೆ ಹೋಲಿಸಿದರೆ ಮನಮೋಹನ್ ಸಿಂಗ್ ನೇತೃತ್ವದ ಕಾಂಗ್ರೆಸ್ ಸರ್ಕಾರದ್ದು ಶೂನ್ಯ ಸಾಧನೆ ಎಂದು ಟೀಕಿಸಿದರು.

    ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ, ಕೋಲಾರ ಸಂಸದ ಮುನಿಸ್ವಾಮಿ, ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಎಸ್.ಅಂಗಾರ, ರಾಜೇಶ್ ನಾಯ್ಕ ಉಳಿಪ್ಪಾಡಿಗುತ್ತು, ಉಮಾನಾಥ ಕೋಟ್ಯಾನ್, ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಸಂಜೀವ ಮಠಂದೂರು, ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಗೀತಾ ವಿವೇಕಾನಂದ, ಪಕ್ಷದ ಜಿಲ್ಲಾಧ್ಯಕ್ಷ ಸುದರ್ಶನ ಎಂ. ಮತ್ತಿತರರಿದ್ದರು.

    ಗಾಂಧಿ ಟೋಪಿ ಧರಿಸಿ ಜನರನ್ನು ಮಂಗ ಮಾಡಿದ್ದೇ ಕಾಂಗ್ರೆಸ್ ಸಾಧನೆ: ಗಾಂಧಿ ಹೆಸರಲ್ಲಿ ರಾಜಕಾರಣ ನಡೆಸಿದ ಕಾಂಗ್ರೆಸ್ ಗಾಂಧಿ ವಿಚಾರಧಾರೆಯನ್ನು ಮರೆತು, ಕೇವಲ ಗಾಂಧಿ ಟೋಪಿ ಧರಿಸಿ ಜನರನ್ನು ಮಂಗಗಳನ್ನಾಗಿ ಮಾಡಿತು. ಆದರೆ ಪ್ರಧಾನಿ ಮೋದಿ ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಪರಿಕಲ್ಪನೆಯಂತೆಯೇ ಮುನ್ನಡೆದಿದ್ದಾರೆ ಎಂದು ಕೇಂದ್ರ ಸರ್ಕಾರದ ಯೋಜನೆಗಳನ್ನು ನೆನಪಿಸುತ್ತ ಕಾಂಗ್ರೆಸ್‌ನತ್ತ ಮಾತಿನ ಚಾಟಿ ಬೀಸಿದವರು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನುದಾನ ಹಾಗೂ ನೈತಿಕ ಬೆಂಬಲದಿಂದ ಗ್ರಾಮ ಪಂಚಾಯತಿ ಅಧ್ಯಕ್ಷರು ಪ್ರಧಾನಿಯಷ್ಟೇ ಪವರ್‌ಫುಲ್ ಆಗಲಿದ್ದಾರೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts