More

    ಲೋಕಸಭೆ ಚುನಾವಣೆ 2024; ದೇಶಾದ್ಯಂತ ಕಾಲ್​ ಸೆಂಟರ್​ ತೆರೆಯಲು ಮುಂದಾದ ಬಿಜೆಪಿ

    ನವದೆಹಲಿ: ಮುಂಬರುವ ಪಂಚರಾಜ್ಯ, ಲೋಕಸಭೆ ಚುನಾವಣೆಯ ದೃಷ್ಟಿಯಿಂದ ಹೆಚ್ಚು ಮತದಾರರನ್ನು ಸೆಳೆಯಲು ಮುಂದಾಗಿರುವ ಬಿಜೆಪಿ ದೇಶಾದ್ಯಂತ 200ಕ್ಕೂ ಹೆಚ್ಚು ಕಾಲ್ ​​ಸೆಂಟರ್​ಗಳನ್ನು ತೆರೆಯಲು ಸಿದ್ದತೆ ನಡೆಸಿದೆ. ಈ ಮೂಲಕ ರಾಷ್ಟ್ರಮಟ್ಟದಲ್ಲಿ ಮತದಾರರೊಂದಿಗೆ ಸಂಪರ್ಕ ಸಾಧಿಸಲು ಮುಂದಾಗಿದೆ.

    ಇದರ ಹೊಣೆಯನ್ನು ಕೇಂದ್ರ ಗೃಹ ಸಚಿವ ಅಮಿತ್​ ಷಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್​ ಹಾಗೂ ಸುನೀಲ್​ ಬನ್ಸಾಲ್​ ಹೊತ್ತಿದ್ದಾರೆ ಎಂದು ಪಕ್ಷದ ಆಂತರಿಕ ಮೂಲಗಳು ತಿಳಿಸಿವೆ.

    ಕಾಲ್ ​ಸೆಂಟರ್​ಗಳನ್ನು ಪ್ರಾರಂಭಿಸುವ ಕುರಿತು ಪಕ್ಷದ ಕಚೇರಿಯಲ್ಲಿ ಸಭೆ ಕರೆಯಲಾಗಿದ್ದು, ಮುಂಬರುವ ಪಂಚರಾಜ್ಯ ಹಾಗೂ ಲೋಕಸಭೆ ಚುನಾವಣೆ ಮೇಲೆ ಬಿಜೆಪಿ ನಾಯಕರು ಹೆಚ್ಚು ಕೇಂದ್ರಿಕರಿಸಿದ್ದಾರೆ ಎಂದು ಹೇಳಲಾಗಿದೆ. ಈ ನಿಟ್ಟಿನಲ್ಲಿ ಕಾಲ್ ​ಸೆಂಟರ್​ ತೆರೆಯಲು ಉದ್ದೇಶಿಸಲಾಗಿದ್ದು, ಏಕಕಾಲದಲ್ಲಿ 200ಕ್ಕೂ ಹೆಚ್ಚು ಕಡೆ ಪ್ರಾರಂಭಿಸಲು ಯೋಜನೆ ರೂಪಿಸಲಾಗಿದೆ.

    BJP call Centre

    ಇದನ್ನೂ ಓದಿ: ನಮ್ಮ ಸಿದ್ದಾಂತಕ್ಕೆ ವಿಶ್ವದಾದ್ಯಂತ ಹೆಚ್ಚಿನ ಬೇಡಿಕೆ ಇದೆ: ಮೋಹನ್​ ಭಾಗವತ್​

    30 ರಾಜ್ಯಗಳನ್ನು ಒಳಗೊಂಡಂತೆ ಏಕಕಾಲದಲ್ಲಿ 200ಕ್ಕೂ ಹೆಚ್ಚು ಕಾಲ್​ಸೆಂಟರ್​ಗಳನ್ನು ತೆರೆಯಲು ಉದ್ಧೇಶಿಸಲಾಗಿದ್ದು, 20 ಸಾವಿರಕ್ಕೂ ಅಧಿಕ ಮಂದಿ ಕಾರ್ಯನಿರ್ವಹಿಸಲಿದ್ದಾರೆ. ದಿನದ 24 ಘಂಟೆಯೂ ಕಾಲ್​ ಸೆಂಟರ್​ ಕಾರ್ಯನಿರ್ವಹಿಸಲಿದ್ದು, ಪಕ್ಷದ ವತಿಯಿಂದ ಇದಕ್ಕಾಗಿ ವಿಶೇಷ ವರ್ಕ್​ಶಾಪ್​ ಒಂದನ್ನು ಹಮ್ಮಿಕೊಳ್ಳಲಾಗಿದೆ.

    ಈ ಕಾಲ್​ ಸೆಂಟರ್​ಗಳು ನವೆಂಬರ್​ 1ರಿಂದ ಆರಂಭವಾಗಲಿದ್ದು, ಪ್ರತಿ ಕೇಂದ್ರದಲ್ಲಿ 20-22ಮಂದಿ ಕೆಲಸ ಮಾಡಲಿದ್ದಾರೆ. ಈ ಕಾಲ್ ಸೆಂಟರ್‌ಗಳ ಪ್ರಮುಖ ಗುರಿ ರಾಷ್ಟ್ರೀಯ ಮಟ್ಟದಲ್ಲಿ ಮತದಾರರೊಂದಿಗೆ ಸಂಪರ್ಕ ಸಾಧಿಸುವುದು ಎಂದು ಹೇಳಲಾಗಿದೆ. 2018ರಲ್ಲೂ ಬಿಜೆಪಿ ಈ ರೀತಿಯ ಕಾರ್ಯತಂತರ ಅನುಸರಿಸಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts