More

    ಮೂರು ರಾಜ್ಯಗಳಲ್ಲಿ ಯಾರಾಗಲಿದ್ದಾರೆ ಸಿಎಂ?: ವೀಕ್ಷಕರ ನೇಮಕಕ್ಕೆ ಬಿಜೆಪಿ ಸಜ್ಜು

    ನವದೆಹಲಿ: ಈಗಷ್ಟೇ ಜರುಗಿದ ವಿಧಾನಸಭೆ ಚುನಾವಣೆಯಲ್ಲಿ ತಾನು ಜಯ ಗಳಿಸಿದ ಮೂರು ರಾಜ್ಯಗಳಲ್ಲಿ ಮುಖ್ಯಮಂತ್ರಿಯನ್ನಾಗಿ ಯಾರನ್ನು ಬಿಜೆಪಿ ಆಯ್ಕೆ ಮಾಡಲಿದೆ ಎಂಬ ಕುತೂಹಲ ಎಲ್ಲೆಡೆ ಗರಿಗೆದರಿದೆ. ಏಕೆಂದರೆ, ಈ ರಾಜ್ಯಗಳಲ್ಲಿ ಬಿಜೆಪಿ ಯಾವುದೇ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಪ್ರಕಟಿಸದೆಯೇ ಚುನಾವಣೆ ಎದುರಿಸಿದೆ.

    ಅಂತಿಮವಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ಹೆಸರುಗಳನ್ನು ಆಯ್ಕೆ ಮಾಡಲು ಪಕ್ಷವು ಶುಕ್ರವಾರ (ಡಿ. 7) ಮೂರು ರಾಜ್ಯಗಳಿಗೆ ವೀಕ್ಷಕರನ್ನು ನೇಮಿಸುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

    ರಾಜಸ್ಥಾನ, ಛತ್ತೀಸ್‌ಗಢ ಮತ್ತು ಮಧ್ಯಪ್ರದೇಶ- ಈ ಮೂರು ರಾಜ್ಯಗಳಲ್ಲಿ ಮುಖ್ಯಮಂತ್ರಿ ಹುದ್ದೆಗೆ ಸಂಭಾವ್ಯರ ಪಟ್ಟಿಯಲ್ಲಿ ಬೆರಳೆಣಿಕೆಯ ಹೆಸರುಗಳಿವೆ ಎಂದು ಹೇಳಲಾಗಿದೆ.

    ಈ ರಾಜ್ಯಗಳಲ್ಲಿ ಮುಖ್ಯಮಂತ್ರಿ ಹುದ್ದೆಗೆ ಹೊಸ ಮುಖಗಳನ್ನು ಆಯ್ಕೆ ಮಾಡಬಹುದು. 2024ರ ಸಾರ್ವತ್ರಿಕ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಆಯ್ಕೆ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

    ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದಲ್ಲಿ ನಾಲ್ಕೂವರೆ ಗಂಟೆಗಳ ಕಾಲ ಸಭೆ ನಡೆಸಲಾಗಿದ್ದು, ಮೂರು ರಾಜ್ಯಗಳಲ್ಲಿ ಸಿಎಂ ರೇಸ್​ನಲ್ಲಿ ಮುಂಚೂಣಿಯಲ್ಲಿರುವವರನ್ನು ಪರಿಗಣಿಸಲಾಗಿದೆ. ಸಭೆಯಲ್ಲಿ ಪ್ರಧಾನಿ, ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಉಪಸ್ಥಿತರಿದ್ದರು.

    ಮಧ್ಯಪ್ರದೇಶದಲ್ಲಿ, ಹಾಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಕೇಂದ್ರ ಸಚಿವರಾದ ಪ್ರಹ್ಲಾದ್ ಪಟೇಲ್, ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ನರೇಂದ್ರ ಸಿಂಗ್ ತೋಮರ್ ಮತ್ತು ಹಿರಿಯ ರಾಜ್ಯ ನಾಯಕ ಕೈಲಾಶ್ ವಿಜಯವರ್ಗಿಯಾ ಅವರೊಂದಿಗೆ ಉನ್ನತ ಹುದ್ದೆಗೆ ಆಕಾಂಕ್ಷಿಯಾಗಿದ್ದಾರೆ.

    ರಾಜಸ್ಥಾನದ ಉನ್ನತ ಹುದ್ದೆಗೂ ಹಲವಾರು ಹೆಸರುಗಳು ಹರಿದಾಡುತ್ತಿವೆ. ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಶಾಸಕರಾಗಿ ಆಯ್ಕೆಯಾಗಿದ್ದರೆ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಕೇಂದ್ರ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಮತ್ತು ಅರ್ಜುನ್ ರಾಮ್ ಮೇಘವಾಲ್, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸಿಪಿ ಜೋಶಿ, ಪ್ರಮುಖ ನಾಯಕರಾದ ದಿಯಾ ಕುಮಾರಿ ಮತ್ತು ಮಹಂತ್ ಬಾಲಕನಾಥ್ ಅವರನ್ನು ಸಂಭಾವ್ಯ ಎಂದು ಪರಿಗಣಿಸಲಾಗಿದೆ.

    ಛತ್ತೀಸ್‌ಗಢದಲ್ಲಿ ಮಾಜಿ ಮುಖ್ಯಮಂತ್ರಿ ರಮಣ್ ಸಿಂಗ್ ಸ್ಪರ್ಧಿಸಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ಅರುಣ್ ಕುಮಾರ್ ಸಾವೊ, ವಿರೋಧ ಪಕ್ಷದ ನಾಯಕ ಧರ್ಮಲಾಲ್ ಕೌಶಿಕ್ ಮತ್ತು ಮಾಜಿ ಐಎಎಸ್ ಅಧಿಕಾರಿ ಓ ಪಿ ಚೌಧರಿ ಕೂಡ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ.

    ಈ ಎಲ್ಲ ಹೆಸರುಗಳ ನಡುವೆಯೇ ಬಿಜೆಪಿ ನಾಯಕತ್ವವು ಅಚ್ಚರಿಯ ಆಯ್ಕೆಗಳನ್ನು ಮಾಡುವ ಸಾಧ್ಯತೆಗಳನ್ನು ಅಲ್ಲಗಳೆಯಲಾಗದು.

    ಮೈಚಾಂಗ್ ಚಂಡಮಾರುತ: ಆಂಧ್ರಕ್ಕೆ ರೂ. 493 ಕೋಟಿ; ತಮಿಳುನಾಡಿಗೆ ರೂ. 450 ಕೋಟಿ ಕೇಂದ್ರ ನೆರವು

    ಸಂಸದೆ ಮಹುವಾ ಮೊಯಿತ್ರಾ ಉಚ್ಚಾಟನೆ ವರದಿ: ಲೋಕಸಭೆಯಲ್ಲಿ ಸೃಷ್ಟಿಯಾಗಬಹುದು ಕೋಲಾಹಲ

    ಪಿಒಕೆಯಿಂದ ಕನಿಷ್ಠ ಒಂದು ಆ್ಯಪಲ್​ ತನ್ನಿ: ಅಮಿತ್ ಶಾಗೆ ಕಾಂಗ್ರೆಸ್​ ನಾಯಕ ಅಧೀರ್ ಸವಾಲು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts