More

    ಮುಸ್ಲಿಂ ಮಹಿಳೆಯರ ಮತ ಸೆಳೆಯಲು ಮುಂದಾದ ಬಿಜೆಪಿ; ಏನಿದು ಶುಕ್ರಿಯಾ ಮೋದಿ ಅಂದೋಲನ

    ನವದೆಹಲಿ: ಮುಂದಿನ ಕೆಲವೇ ತಿಂಗಳುಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿ ನಡೆಸಿದ್ದು, ಮುಸ್ಲಿಂ ಮಹಿಳೆಯರನ್ನು ಪಕ್ಷದತ್ತ ಸೆಳೆಯಲು ಅಲ್ಪಸಂಖ್ಯಾತ ಮೋರ್ಚಾವು ವಿಭಿನ್ನ ಕಾರ್ಯಕ್ರಮವನ್ನು ಆಯೋಜಿಸಿದೆ. ಇದರ ಅಂಗವಾಗಿ ಶುಕ್ರಿಯಾ ಮೋದಿ ಭಾಯಿಜಾನ್‌ ಅಭಿಯಾನವನ್ನು ಆರಂಭಿಸಲು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಸಿದ್ಧತೆ ಆರಂಭಿಸಿದೆ.

    ನಮ್ಮ ನಡುವೆ ಅಂತರವಿಲ್ಲ, ನಮ್ಮ ನಡುವೆ ಕಂದಕವಿಲ್ಲ, ಮೋದಿ ನಮ್ಮ ಸಹೋದರ ಎಂಬ ಘೋಷವಾಕ್ಯದೊಂದಿಗೆ ಅಭಿಯಾನ ನಡೆಯಲಿದ್ದು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮುಸ್ಲಿಂ ಮಹಿಳೆಯರ ಮತವನ್ನು ಸೆಳೆಯಲು ಬಿಜೆಪಿ ಭರ್ಜರಿ ಪ್ಲ್ಯಾನ್​ ರೂಪಿಸಿದೆ.

    ಈ ಕುರಿತು ಮಾತನಾಡಿರುವ ಹಿರಿಯ ನಾಯಕರೊಬ್ಬರು, ಜನವರಿ 2ರಿಂದ ಜನವರಿ 20ರವರೆಗೆ ನಡೆಯಲಿರುವ ಅಭಿಯಾನದಲ್ಲಿ ನರೇಂದ್ರ ಮೋದಿ ಸರ್ಕಾರ ಮುಸ್ಲಿಂ ಮಹಿಳೆಯರಿಗೆ ನೀಡಿರುವ ಸವಲತ್ತುಗಳ ಬಗ್ಗೆ ಮನೆಮನೆಗೆ ತೆರಳಿ ಬಿಜೆಪಿಗೆ ಮತ ನೀಡುವಂತೆ ಕೋರಲಾಗುವುದು. ವಿವಿಧ ಯೋಜನೆಗಳಲ್ಲಿ ಮುಸ್ಲಿಂ ಮಹಿಳೆಯರಿಗೆ ಆದ್ಯತೆ ನೀಡುವ ಸಂಬಂಧ, ಈ ಅಭಿಯಾನಕ್ಕೆ ಶುಕ್ರಿಯಾ ಮೋದಿ ಭಾಯಿಜಾನ್ ಎಂದು ಹೆಸರಿಸಲಾಗಿದೆ.

    BJP Minority

    ಇದನ್ನೂ ಓದಿ: ಹೊಸ ವರ್ಷಾಷರಣೆ 2024; ನ್ಯೂ ಇಯರ್​ ವೆಲ್​ಕಮ್ ಮಾಡಿದ ಮೊದಲ ರಾಷ್ಟ್ರ ಯಾವುದು ಗೊತ್ತಾ?

    ಈ ಅಭಿಯಾನದ ಅಡಿಯಲ್ಲಿ, ಮುಸ್ಲಿಂ ಮಹಿಳೆಯರು ಉಜ್ವಲ ಯೋಜನೆ, ಪ್ರಧಾನ ಮಂತ್ರಿ ಆವಾಸ್ ಯೋಜನೆ, ಆಯುಷ್ಮಾನ್ ಭಾರತ್ ಯೋಜನೆ ಮತ್ತು ಇತರ ಯೋಜನೆಗಳ ಪ್ರಯೋಜನಗಳನ್ನು ವಿವಿಧ ಕಾರ್ಯಕ್ರಮಗಳ ಮೂಲಕ ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ಪ್ರಯತ್ನಿಸಲಾಗುವುದು. ಇತ್ತೀಚೆಗೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಮುಸ್ಲಿಂ ಮಹಿಳೆಯರು ಮೋದಿ ಸರಕಾರದ ಯೋಜನೆಗಳಿಗೆ ಜಿಲ್ಲಾಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ, ಈ ಒಲವನ್ನು ಮುಂದಕ್ಕೆ ಕೊಂಡೊಯ್ಯಲು ರಾಜ್ಯದ ಪ್ರತಿ ಲೋಕಸಭಾ ಕ್ಷೇತ್ರದಲ್ಲಿ ಶುಕ್ರಿಯಾ ಮೋದಿ ಭಾಯಿಜಾನ್ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

    ಕರ್ನಾಟಕದಲ್ಲಿ ಜನವರಿ 03 ರಂದು ಅಭಿಯಾನಕ್ಕೆ ಚಾಲನೆ ನೀಡಲಾಗುವುದು. ಕಾರ್ಯಕ್ರಮದಲ್ಲಿ ವಿವಿಧ ಮೋರ್ಚಾದ ಮುಖ್ಯಸ್ಥರು ಭಾಗಿಯಾಗಲಿದ್ದಾರೆ. ಅಲ್ಪಸಂಖ್ಯಾತ ಮೋರ್ಚಾ ನಾಯಕರು ಮನೆ ಮನೆಗೆ ತೆರಳಿ ಪ್ರಚಾರ ನಡೆಸಲಿದ್ದಾರೆ ಎಂದು ಹಿರಿಯ ಬಿಜೆಪಿ ನಾಯಕರೊಬ್ಬರು ಮಾಹಿತಿ ನೀಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts