ಮತದಾರರು ಮತ್ತೆ ಜಾಗೃತರಾಗುವುದು ಅನಿವಾರ್ಯ - ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಎಚ್ಚರಿಕೆ

PTR_28 OCT_4
Published on

ದಕ್ಷಿಣ ಕನ್ನಡದ ಜನರು ಕಳೆದ ಚುನಾವಣೆಯಲ್ಲಿ ಮತ ಮಾರಲಿಲ್ಲವಾದರೂ ರಾಜ್ಯದ ಇತರ ಕಡೆ ಆಮಿಷಗಳನ್ನು ನೀಡಿ ಕಾಂಗ್ರೆಸ್ ಅಽಕಾರಕ್ಕೆ ಬಂತು. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತದಾರರು ಮತ್ತೆ ಜಾಗೃತರಾಗುವ ಅನಿವಾರ್ಯತೆ ಇದೆ ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಹೇಳಿದರು.

ದೇಶದಲ್ಲಿ ಮತದಾರರ ಪಟ್ಟಿ ಸ್ಪೆಷಲ್ ಇಂಟೆನ್ಸಿವ್ ರಿವಿಶನ್(ಎಸ್‌ಐಆರ್- ವಿಶೇಷ ಪರಿಷ್ಕರಣೆ) ಅಭಿಯಾನ ಹಿನ್ನೆಲೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಜೆಪಿ ಬೂತ್ ಏಜೆಂಟ್‌ರಿಗೆ ಮಂಗಳವಾರ ಜೈನ ಭವನದಲ್ಲಿ ಆಯೋಜಿಸಲಾಗಿದ್ದ ಬಿಎಲ್‌ಎ-೨ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಮಾಜಿ ಶಾಸಕ ಸಂಜೀವ ಮಠಂದೂರು, ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ ಪುತ್ತೂರು ಮಂಡಲದ ಪ್ರಭಾರಿ ಸುನೀಲ್ ಆಳ್ವ ಎಸ್‌ಐಆರ್ ಬಗ್ಗೆ ಬೂತ್ ಏಜೆಂಟರಿಗೆ ತರಬೇತಿ ಕಾರ್ಯಾಗಾರ ನಡೆಸಿಕೊಟ್ಟರು.

ನಗರಸಭೆ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ, ಪುತ್ತೂರು ನಗರ ಮಂಡಲ ಬಿಜೆಪಿ ಅಧ್ಯಕ್ಷ ಶಿವಕುಮಾರ್ ಪಿ.ಬಿ.ಕಲ್ಲಿಮಾರ್, ಎಸ್‌ಟಿ ಮೋರ್ಚಾ ಜಿಲ್ಲಾಧ್ಯಕ್ಷ ಹರೀಶ್ ಬಿಜತ್ರೆ ಇದ್ದರು. ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರ್ ಸ್ವಾಗತಿಸಿದರು. ಹರಿಪ್ರಸಾದ್ ಯಾದವ್ ಮತ್ತು ಯುವರಾಜ್ ಪೆರಿಯತ್ತೋಡಿ ಕಾರ್ಯಕ್ರಮ ನಿರ್ವಹಿಸಿದರು.

ಈಶಾನ್ಯ ರಾಜ್ಯಗಳಲ್ಲಿ ಶೇ.೪೦ ಮತದಾರರು ಬಾಂಗ್ಲಾದೇಶದ ನುಸುಳುಕೋರರೇ ಆಗಿದ್ದು, ಅವರನ್ನು ತಡೆದು ನೈಜವಾಗಿರುವ ದೇಶದ ಪ್ರಜೆಗಳನ್ನು ಮಾತ್ರ ಮತದಾರರ ಪಟ್ಟಿಯಲ್ಲಿ ಉಳಿಸಿಕೊಳ್ಳಲು ಎಸ್‌ಐಆರ್(ಸ್ಪೆಷಲ್ ಇಂಟೆನ್ಸಿವ್ ರಿವಿಶನ್) ಮಾಡಲು ಚುನಾವಣಾ ಆಯೋಗ ಮುಂದಾಗಿದೆ. ಇದರ ಯಶಸ್ವಿಗೆ ಪಕ್ಷ ಸಕ್ರಿಯವಾಗಿ ತೊಡಗಿಸಿಕೊಂಡು ಆಯೋಗದ ಕಾರ್ಯಕ್ಕೆ ನೆರವು ನೀಡಬೇಕು.

| ಕಿಶೋರ್ ಕುಮಾರ್ ಬೊಟ್ಯಾಡಿ

ವಿಧಾನ ಪರಿಷತ್ ಸದಸ್ಯ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net