More

    ವಿಧಾನಸೌಧ ಕೊಠಡಿಯಿಂದ ಸಿದ್ಧಗಂಗಾ ಶ್ರೀಗಳ ಫೋಟೋ ಹೊರಕ್ಕೆ; ಬಿಜೆಪಿ ಕೆಂಡ!

    ಬೆಂಗಳೂರು: ವಿಧಾನಸೌಧದ ಕೊಠಡಿಯಲ್ಲಿ ಅಳವಡಿಸಲಾಗಿದ್ದ ಡಾ| ಶಿವಕುಮಾರ ಸ್ವಾಮೀಜಿ, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಹಾಗೂ ಎಚ್​.ಡಿ.ಕುಮಾರಸ್ವಾಮಿ ಅವರ ಭಾವಚಿತ್ರವನ್ನು ತೆರವುಗೊಳಿಸಿ, ಪಡಸಾಲೆಯಲ್ಲಿ ರಾಶಿ ಹಾಕಿರುವುದನ್ನು ರಾಜ್ಯ ಬಿಜೆಪಿ ಟ್ವೀಟ್ ಮಾಡಿ ಖಂಡಿಸಿದೆ.

    ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ಟ್ವೀಟ್ ಮಾಡಿ, ‘ಇದು ಅಹಂಕಾರದ ಅಹಂಕಾರದ ಪರಮಾವಧಿ’ ಎಂದು ಆಕ್ರೋಶ ವ್ಯಕ್ತಪಡಿಸಿದೆ.

    ಇದನ್ನೂ ಓದಿ: ಸಿದ್ದಗಂಗಾ ಮಠದ ವಸತಿ ನಿಲಯ ಟೆಂಡರ್ ಪ್ರಕ್ರಿಯೆ ಮುಂದುವರೆಸಲು ಸಿಎಂ ಸೂಚನೆ 

    ಆಡಳಿತ ಪಕ್ಷ ಕಾಂಗ್ರೆಸ್​ ಸರಕಾರಕ್ಕೆ ಕೇಸರಿ ಎಂದರೆ ದ್ವೇಷ ಮತ್ತು ಶತ್ರುಭಾವ. ಇಂದು ನಡೆದಾಡುವ ದೇವರು, ಕಾಯಕಯೋಗಿ, ತ್ರಿವಿಧದಾಸೋಹಿ ಪರಮ ಪೂಜನೀಯ ಡಾ। ಶಿವಕುಮಾರ ಮಹಾಸ್ವಾಮೀಜಿಯವರ ಭಾವಚಿತ್ರವನ್ನು ವಿಧಾನಸೌಧದ ಕೊಠಡಿಯಿಂದ ತೆರವುಗೊಳಿಸಿ ಪಡಸಾಲೆಯಲ್ಲಿ ಉರುಳಾಡುವಂತೆ ಮಾಡಿ ಅಪಮಾನಿಸಿರುವುದು ಅಕ್ಷಮ್ಯ ಅಪರಾಧ ಎಂದು ಬಿಜೆಪಿ ಟೀಕಿಸಿದೆ.

    ಈ ಬಗ್ಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ರಾಜ್ಯದ ಜನತೆಯ ಕ್ಷಮೆ ಕೋರಬೇಕು. ಜತೆಗೆ ಡಾ। ಶಿವಕುಮಾರ ಮಹಾಸ್ವಾಮೀಜಿಯವರ ಭಾವಚಿತ್ರವನ್ನು ಸಕಲ ಗೌರವಗಳೊಂದಿಗೆ ಪುನಃ ಕೊಠಡಿಯೊಳಗೆ ಲಗತ್ತಿಸಬೇಕು ಎಂದು ರಾಜ್ಯ ಬಿಜೆಪಿ ಆಗ್ರಹಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts