More

    ರಾಜ್ಯದಲ್ಲಿ ಕಮಲ ಅರಳುವ ದಿನಾಂಕ ನಿಶ್ಚಯವಾಗಿದೆ! ಚುನಾವಣಾ ದಿನಾಂಕ ಘೋಷಣೆಯಾಗುತ್ತಿದ್ದಂತೆ ಬಿಜೆಪಿ ಟ್ವೀಟ್

    ಬೆಂಗಳೂರು: ಕರ್ನಾಟಕದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣಾ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ಮೇ 10ರಂದು ಮತದಾನ ನಡೆಯಲಿದ್ದು, ಮೇ 13ರಂದು ಮತ ಎಣಿಕೆ ನಡೆಯಲಿದೆ. ಇದೀಗ ಚುನಾವಾಣಾ ದಿನಾಂಕ ಘೋಷಣೆಯಾಗುತ್ತಿದ್ದಂತೆ ರಾಜ್ಯದಲ್ಲಿ ಚುನಾವಣೆಯ ಕಾವು ಮತ್ತಷ್ಟು ರಂಗೇರಿದೆ.

    ಇದೀಗ ರಾಜ್ಯ ಬಿಜೆಪಿ ಅಧಿಕೃತ ಖಾತೆಯಲ್ಲಿ ಟ್ವೀಟ್ ಮಾಡಿ, ರಾಜ್ಯದಲ್ಲಿ ಕಮಲ ಅರಳುವ ದಿನಾಂಕ ನಿಶ್ಚಯವಾಗಿದೆ ಎಂದು ಹೇಳಿಕೊಂಡಿದೆ. ಬಿಜೆಪಿ ಪಕ್ಷಕ್ಕೆ ಸ್ಪಷ್ಟ ಬಹುಮತದೊಂದಿಗೆ ಆಶೀರ್ವಾದ ಮಾಡಲು ಕನ್ನಡಿಗರು ಉತ್ಸುಕರಾಗಿದ್ದಾರೆ. ಪಕ್ಷವನ್ನು ಅಧಿಕಾರಕ್ಕೆ ತರಲು ಇಂದಿನಿಂದ ಹಗಲಿರುಳು ಶ್ರಮಿಸಲು ಕಾರ್ಯಕರ್ತರ ಪಡೆ ಸಜ್ಜಾಗಿದೆ. ಬಿಜೆಪಿ ಚುನಾವಣೆಯಲ್ಲಿ ಗೆಲುವು ಸಾಧಿಸುವುದರಿಂದ ಕರ್ನಾಟಕ ಗೆಲ್ಲಲಿದೆ ಎಂದು ಬಿಜೆಪಿ ಟ್ವೀಟ್ ಮಾಡಿದೆ. ಇದನ್ನೂ ಓದಿ: ದಕ್ಷಿಣ ರೈಲ್ವೇ ಫೇಸ್​ಬುಕ್ ಪೇಜ್ ಹ್ಯಾಕ್! ಕಾರ್ಟೂನ್ ಫೋಟೋ ಅಪ್ಲೋಡ್ ಮಾಡಿದ ಸೈಬರ್ ಕಳ್ಳರು

    ಬಿಜೆಪಿ ಟ್ವೀಟ್ ಮಾಡುತ್ತಿದ್ದಂತೆ ರಾಜ್ಯ ಕಾಂಗ್ರೆಸ್ ಚುನಾವಣಾ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ವಿಡಿಯೋವೊಂದನ್ನು ಹರಿಬಿಟ್ಟು, ಜನರ ಕನಸಿನ ಕರ್ನಾಟಕ, ಬ್ರ್ಯಾಂಡ್ ಕರ್ನಾಟಕವನ್ನ ಪುನರ್ ನಿರ್ಮಾಣ ಮಾಡೋಣ. ದುರ್ಗಾಷ್ಟಮಿಯ ಪುಣ್ಯ ದಿನದಂದು ಚುನಾವಣಾ ಆಯೋಗ ಕರ್ನಾಟಕ ಚುನಾವಣೆಯನ್ನು ಘೋಷಿಸಿದೆ. 40% ಸರ್ಕಾರವನ್ನು ಮತ್ತು ಅದರ ಲಜ್ಜೆಗೆಟ್ಟ ಲೂಟಿಯಿಂದ ರಾಜ್ಯವನ್ನು ಮುಕ್ತಗೊಳಿಸಲು ಕಾಂಗ್ರೆಸ್ ಹಾಗೂ ಜನ ಸಂಕಲ್ಪ ಮಾಡಿದೆ. ಕನ್ನಡಿಗರ ಅಭಿಮಾನ ಬೆಳೆಯಲಿ. 6.5 ಕೋಟಿ ಕನ್ನಡಿಗರೇ ಕಾಂಗ್ರೆಸ್ ನ ಕೇಂದ್ರಬಿಂದು. ಕಾಂಗ್ರೆಸ್‌ ಜನರ ಭರವಸೆಗಳನ್ನು ಜಾರಿಗೆ ತರುತ್ತೇವೆ. ಕಾಂಗ್ರೆಸ್ ಸರ್ಕಾರ ಜನರಿಗಾಗಿ ಬದ್ಧತೆಯಿಂದ ಕೆಲಸ ಮಾಡುತ್ತದೆ. ಕನ್ನಡಿಗರ ಪ್ರೌಢಿಮೆಯನ್ನು ಕಾಂಗ್ರೆಸ್ ‌ನಿರ್ಮಾಣ ಮಾಡುತ್ತದೆ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಒಂದೇ ಹಂತದಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ; ಮೇ 10 ಮತದಾನ, 13ರಂದು ಫಲಿತಾಂಶ

    ಚುನಾವಣಾ ದಿನಾಂಕ ಘೋಷಣೆಯಾದ ಹಿನ್ನಲೆ ಬಿಜೆಪಿ ತನ್ನ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲು ಸಜ್ಜಾಗಿದೆ. ನಾಮಪತ್ರ ಸಲ್ಲಿಕೆಗೆ 21 ದಿನ ಮಾತ್ರ ಬಾಕಿ ಹಿನ್ನೆಲೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೆ ತಯಾರಿ ನಡೆಸಿದೆ. ಮುಂದಿನ ನಾಲ್ಕೈದು ದಿನಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿ ಬಿಡುಗಡೆಯಾಗಲಿದೆ ಎಂದು ಅಂದಾಜಿಸಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts