21 C
Bengaluru
Thursday, January 23, 2020

ತುಮಕೂರು ಮಹಾನಗರ ಪಾಲಿಕೇಲಿ ಬಿಜೆಪಿ ಮೀಸಲು ತಂತ್ರ

Latest News

ಮೊಕದ್ದಮೆ ಹಿಂಪಡೆಯಲು ಒತ್ತಾಯ

ಮೈಸೂರು: ಮಾನಸಗಂಗೋತ್ರಿಯಲ್ಲಿ ಎನ್‌ಆರ್‌ಸಿ, ಸಿಎಎ ವಿರೋಧಿಸಿ ನಡೆದ ಪ್ರತಿಭಟನೆ ಸಂದರ್ಭ ‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶನಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮೇಲೆ ಹೂಡಿರುವ ಮೊಕದ್ದಮೆ...

ವಿದ್ಯಾಭ್ಯಾಸದ ಸಂದರ್ಭ ಪ್ರತಿಭಟನೆ ಬೇಡ

ಮೈಸೂರು: ಶಿಕ್ಷಣಕ್ಕೆ ಸಂಬಂಧಿಸಿದ ಸಮಸ್ಯೆಗಳಿದ್ದಲ್ಲಿ ವಿಶ್ವವಿದ್ಯಾಲಯಗಳ ಒಳಗೆ ಬಗೆಹರಿಸಿಕೊಳ್ಳಬೇಕೇ ಹೊರತು, ವಿದ್ಯಾಭ್ಯಾಸದ ಸಂದರ್ಭದಲ್ಲಿ ಪ್ರತಿಭಟನೆಗಳಿಗೆ ಮುಂದಾಗಬಾರದು ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್...

ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಜಾರಿಗೊಳಿಸಿ

ಮೈಸೂರು: ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಮೀಸಲಾತಿ ಜಾರಿಗೊಳಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು. ಕರ್ನಾಟಕ ಪ್ರದೇಶ ಮಹಿಳಾ...

ಕೇಂದ್ರದ ಬಿಜೆಪಿ ಸರ್ಕಾರ ಬಿದ್ದ ದಿನ ಪೌರತ್ವ ತಿದ್ದುಪಡಿ ಕಾಯ್ದೆಯೂ ರದ್ದಾಗುತ್ತದೆ: ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​ ಗೋಪಿನಾಥನ್​

ಧಾರವಾಡ: ಪೌರತ್ವ ತಿದ್ದುಪಡಿ ಕಾಯ್ದೆ ಇಡೀ ರಾಷ್ಟ್ರಕ್ಕೆ ಸಂಬಂಧಿಸಿದ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಲ್ಲೂ ಹೋರಾಟ ತೀವ್ರಗೊಂಡಿದೆ ಎಂದು ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​...

ಕಾಲೇಜ್ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ

ಹಾವೇರಿ: ಇಲ್ಲಿನ ಪಿಬಿ ರಸ್ತೆಯಲ್ಲಿರುವ ಜಿಎಚ್ ಕಾಲೇಜ್​ನಲ್ಲಿ ಹೆಜ್ಜೇನು ದಾಳಿಯಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ.

ತುಮಕೂರು: ಮಹಾನಗರ ಪಾಲಿಕೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಗೆ ಕೊಕ್ ಕೊಟ್ಟು ಅಧಿಕಾರ ಗದ್ದುಗೆಗೇರಲು ಅತೀ ದೊಡ್ಡ ಪಕ್ಷವಾಗಿರುವ ಬಿಜೆಪಿ ಮೀಸಲು ‘ತಂತ್ರ’ಗಾರಿಕೆ ಪ್ರಯೋಗಕ್ಕೆ ಮುಂದಾಗಿದೆ.
ಹಾಲಿ ಮೇಯರ್, ಉಪಮೇಯರ್ ಅವಧಿ ಜ.30ಕ್ಕೆ ಅಂತ್ಯಗೊಳ್ಳುವ ಹಿನ್ನೆಲೆಯಲ್ಲಿ 2ನೇ ಅವಧಿ ಮೇಯರ್, ಉಪಮೇಯರ್ ಸ್ಥಾನದ ಚುನಾವಣೆಗೆ ಮೀಸಲು ಘೋಷಣೆಗೆ ಮುನ್ನವೇ ಪಾಲಿಕೆಯಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿವೆ. 2018ರ ಪಾಲಿಕೆ ಚುನಾವಣೆಯಲ್ಲಿ 12 ಸ್ಥಾನ ಗೆದ್ದು ಅತಿ ದೊಡ್ಡ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿದರೂ ಅಧಿಕಾರ ಹಿಡಿಯಲು ಸಾಧ್ಯವಾಗಿರಲಿಲ್ಲ. ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದ್ದವು.

ರಾಜ್ಯ ರಾಜಕಾರಣದಲ್ಲಿ ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಪತನಗೊಂಡು ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದು 4 ತಿಂಗಳಾಗುತ್ತ ಬಂದಿದೆ. ಈ ಹಿನ್ನೆಲೆಯಲ್ಲಿ ನಗರ ಶಾಸಕರು ಹಾಗೂ ತುಮಕೂರು ಕ್ಷೇತ್ರದ ಲೋಕಸಭಾ ಸದಸ್ಯರನ್ನು ಹೊಂದಿರುವ ಬಿಜೆಪಿ ಶತಾಯಗತಾಯ ಪಾಲಿಕೆಯಲ್ಲಿ ಅಧಿಕಾರ ಹಿಡಿಯಲು ತೆರೆಯಮರೆಯಲ್ಲಿ ರಾಜಕೀಯ ತಂತ್ರಗಾರಿಕೆಯಲ್ಲಿ ತೊಡಗಿದೆ.

ಮೀಸಲು ‘ಅಸ್ತ್ರ’ : ಪಾಲಿಕೆಯ ಒಟ್ಟು 35 ಸ್ಥಾನಗಳ ಬಲಾಬಲದಲ್ಲಿ ಬಿಜೆಪಿ-12, ಜೆಡಿಎಸ್-10, ಕಾಂಗ್ರೆಸ್-10, ಪಕ್ಷೇತರರು-03 ಸದಸ್ಯರಿದ್ದು ಸರಳ ಬಹುಮತಕ್ಕೆ 18 ಸ್ಥಾನಗಳ ಅಗತ್ಯವಿದೆ. ಜೆಡಿಎಸ್ ಹಾಗೂ ಕಾಂಗ್ರೆಸ್ ಜತೆಗೂಡಿ 20 ಸ್ಥಾನಗಳನ್ನು ಹೊಂದಿದ್ದು ಮೈತ್ರಿಗೆ ಇಬ್ಬರು ಪಕ್ಷೇತರ ಹಾಗೂ ಓರ್ವ ಎಂಎಲ್ಸಿ ಬೆಂಬಲ ಕೂಡ ಇದೆ.

ಹಾಗಾಗಿ, ಜೆಡಿಎಸ್-ಕಾಂಗ್ರೆಸ್ ಅನ್ನು ಅಧಿಕಾರದಿಂದ ದೂರವಿಡಲು ರಾಜ್ಯ ಸರ್ಕಾರವನ್ನು ಬಳಸಿಕೊಂಡು ಬಿಜೆಪಿ ಮೀಸಲು ‘ಅಸ್ತ್ರ’ ಪ್ರಯೋಗಿಸಲು ಸಿದ್ಧತೆ ನಡೆಸಿದ್ದು 2ನೇ ಅವಧಿಗೆ ಮೇಯರ್ ಸ್ಥಾನವನ್ನು ಪರಿಶಿಷ್ಟ ಪಂಗಡಕ್ಕೆ ಮೀಸಲು ಮಾಡಿಸುವ ಮೂಲಕ ರಾಜಕೀಯ ಚದುರಂಗದಾಟಕ್ಕೆ ಅಡಿಯಿಟ್ಟಿದೆ.

35 ಸದಸ್ಯರ ಪೈಕಿ ಪರಿಶಿಷ್ಟ ಪಂಗಡದ ಏಕೈಕ ಸದಸ್ಯರಿದ್ದು, ಈ ಕಾರ್ಡನ್ನು ಬಿಜೆಪಿ ಬಳಸಲಿದೆ. 32ನೇ ವಾರ್ಡ್‌ನ ಎಸ್ಟಿ ಮೀಸಲು ಕ್ಷೇತ್ರದಿಂದ ಚುನಾಯಿತರಾಗಿರುವ ಬಿಜೆಪಿಯ ಬಿ.ಜಿ.ಕೃಷ್ಣಪ್ಪಗೆ ಅನಾಯಾಸವಾಗಿ ಮೇಯರ್ ಪಟ್ಟ ಒಲಿಯಲಿದೆ. ಈ ಮಧ್ಯೆ ಜೆಡಿಎಸ್‌ನ ಒಂದು ಬಣ ಬಿಜೆಪಿ ಬೆಂಬಲಿಸಲು ಮುಂದಾಗಿರುವುದು ರಹಸ್ಯವಾಗೇನೂ ಉಳಿದಿಲ್ಲ. ಮೊದಲ ಅವಧಿಗೆ ಲಲಿತಾ ರವೀಶ್‌ಗೆ ಮೇಯರ್ ಪಟ್ಟ ಬಿಟ್ಟುಕೊಡದಿದ್ದರೆ ಜೆಡಿಎಸ್ ಇಬ್ಭಾಗವಾಗುವ ಸಾಧ್ಯತೆ ಇತ್ತು. ರಾತ್ರೋ ರಾತ್ರಿ ಈ ಹೈಡ್ರಾಮಾ ಕೂಡ ನಡೆದಿತ್ತು. ಕೊನೆಗಳಿಗೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಕಾಂಗ್ರೆಸ್ ಅಧಿಕಾರ ತ್ಯಾಗ ಮಾಡಿತ್ತು. ರಾಜ್ಯ, ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇರುವುದರಿಂದ ನಗರದ ಹಿತದೃಷ್ಟಿಯಿಂದ ಇದೇ ಬಣ ಈಗ ಬಿಜೆಪಿ ಬೆಂಬಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಪ್ರವಾಸದಲ್ಲೇ ಪ್ಲಾನ್ ಫಿಕ್ಸ್ !: ಉತ್ತರಭಾರತ ಪ್ರವಾಸ ವೇಳೆಯೇ 2ನೇ ಅವಧಿಗೆ ಜೆಡಿಎಸ್- ಕಾಂಗ್ರೆಸ್ ‘ಮೈತ್ರಿ’ ಮುಂದುವರಿಸಿಕೊಂಡು ಹೋಗುವ ಬಗ್ಗೆ ರಾಜಕೀಯ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ ಎನ್ನಲಾಗಿದೆ. ಈ ಬಾರಿ ಕಾಂಗ್ರೆಸ್‌ಗೆ
ಮೇಯರ್ ಸ್ಥಾನ ಬಿಟ್ಟುಕೊಡಲು ಜೆಡಿಎಸ್ ನಿರ್ಧರಿಸಿದ್ದು, ಕಾಂಗ್ರೆಸ್‌ನಲ್ಲೀಗ ಸೈಯದ್ ನಯಾಜ್, ಜೆ.ಕುಮಾರ್ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಹಾಗಾಗಿ, ಪ್ರವಾಸ ವೇಳೆ ಸದಸ್ಯರ ಕುಟುಂಬದವರ ಪ್ರವಾಸ ಖರ್ಚುವೆಚ್ಚಗಳನ್ನು ಆಕಾಂಕ್ಷಿಗಳಿಬ್ಬರು ಭರಿಸಿದ್ದಾರೆ ಎಂಬುದು ಗುಟ್ಟಾಗೇನೂ ಉಳಿದಿಲ್ಲ. 16ನೇ ವಾರ್ಡ್‌ನ ಇನಾಯತ್ ಉಲ್ಲಾ ಕೂಡ ಮೇಯರ್ ಆಕಾಂಕ್ಷಿಗಳಲ್ಲೊಬ್ಬರಾಗಿದ್ದಾರೆ.

ಬೆಮೆಲ್ ದೂರ ?: ಜೆಡಿಎಸ್‌ನಲ್ಲಿನ ರಾಜಕೀಯ ಬೆಳವಣಿಗೆಗಳಿಂದ ಬೇಸತ್ತಿರುವ ಎಂಎಲ್ಸಿ ಬೆಮೆಲ್ ಕಾಂತರಾಜು ವರಿಷ್ಠರಿಂದ ಅಂತರ ಕಾಯ್ದುಕೊಂಡಿದ್ದು, ಮೇಯರ್, ಉಪಮೇಯರ್ ಚುನಾವಣೆ ವೇಳೆ ದೂರ ಉಳಿಯುವ ಸಾಧ್ಯತೆ ಇದೆ. ಇದು ಮೈತ್ರಿಗೆ ಹಿನ್ನಡೆ ಎನಿಸಲಿದೆ. ಈ ಅವಕಾಶವನ್ನು ಬಿಜೆಪಿ ಎನ್‌ಕ್ಯಾಶ್ ಮಾಡಿಕೊಳ್ಳುವುದನ್ನು ತಳ್ಳಿಹಾಕುವಂತಿಲ್ಲ.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...