More

    ರಾಮಮಂದಿರ ಉದ್ಘಾಟನೆ ಬಿಜೆಪಿ ಗಿಮಿಕ್​ ; ಮಮತಾ ಬ್ಯಾನರ್ಜಿ

    ಪಶ್ಚಿಮ ಬಂಗಾಳ:ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಮಾಡುತ್ತಿರುವುದು ಬಿಜೆಪಿಯ ಚುನಾವಣಾ ಗಿಮಿಕ್ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಇದನ್ನೂ ಓದಿ: ಮಾಲ್ಡೀವ್ಸ್ ಅಧ್ಯಕ್ಷರ ವಜಾಕ್ಕೆ ಸಂಸದ ಆಗ್ರಹ: ಭಾರತ ವಿರುದ್ಧದ ಹೇಳಿಕೆಗಳಿಗೆ ಹಲವು ನಾಯಕರಿಂದ ಖಂಡನೆ

    ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ಐಕ್ಯತೆಯ ಹಬ್ಬಗಳನ್ನು ಮಾತ್ರ ನಂಬುತ್ತೇನೆ. ನ್ಯಾಯಾಲಯ ಆದೇಶದ ಹಿನ್ನೆಲೆಯಲ್ಲಿ ಯಾರೂ ದೇವಾಲಯ ನಿರ್ಮಾಣಕ್ಕೆ ಆಕ್ಷೇಪಿಸಿಲ್ಲ. ಬಿಜೆಪಿಯವರು ಇತರ ಸಮುದಾಯಗಳನ್ನು ಒಡೆಯುವ ಮತ್ತು ಕಡೆಗಣಿಸುವ ಕಾರ್ಯ ಮಾಡಬಾರದು. ಹಿಂದೂ-ಮುಸ್ಲಿಂ ಎಂಬ ತಾರತಮ್ಯವನ್ನು ನಾನು ಎಂದಿಗೂ ಸಹಿಸುವುದಿಲ್ಲ ಎಂದರು.

    ರಾಮಮಂದಿರದ ಉದ್ಘಾಟನೆಯಲ್ಲಿ ಭಾಗವಹಿಸದೆ ಇರಲು ಸಿಎಂ ಮಮತಾ ಬ್ಯಾನರ್ಜಿ ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ತೃಣಮೂಲ ಕಾಂಗ್ರೆಸ್ ಪಕ್ಷವು ಕಾರ್ಯಕ್ರಮಕ್ಕೆ ಮಮತಾ ಬ್ಯಾನರ್ಜಿ ಅವರ ಬದಲು ಯಾವುದೇ ಪ್ರತಿನಿಧಿಯನ್ನು ಕಳುಹಿಸುವ ಸಾಧ್ಯತೆ ಇಲ್ಲ ಎಂದು ವರದಿಯಾಗಿದೆ.

    ಇದೇ ತಿಂಗಳು 22ರಂದು ರಾಮ ಮಂದಿರ ಉದ್ಘಾಟನೆ ನಡೆಯಲಿದ್ದು ನ ಭೂತೋ ನ ಭವಿಷ್ಯತಿ ಎನ್ನುವಂತೆ ಸಮಾರಂಭ ನಡೆಸಲು ಸಕಲ ಸಿದ್ಧತೆ ನಡೆದಿದೆ. ಹಲವು ಗಣ್ಯರು, ಯತಿಗಳು, ಧಾರ್ಮಿಕ ನಾಯಕರ ಸಮ್ಮುಖದಲ್ಲಿ ಪ್ರಧಾನಿ ಮೋದಿ ರಾಮಮಂದಿರ ಉದ್ಘಾಟನೆ ಮಾಡಲಿದ್ದಾರೆ.

    ‘ಆರ್​​ಸಿಬಿ ಪರ ಆಡೋಕೆ ಇಷ್ಟವಿರಲಿಲ್ಲ, ಬೆದರಿಸಿ ಒಪ್ಪಂದಕ್ಕೆ ಸಹಿ ಹಾಕಿಸಿಕೊಂಡ್ರು’

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts