More

    ಲೋಕ ಸಮರ 2024: ಬಂಡಾಯ ಬಗೆಹರಿಯುತ್ತಾ? ಇನ್ನೂ 4 ದಿನಗಳಲ್ಲಿ ನಡೆಯಲಿದೆ ಜಾದು!

    ಮೈಸೂರು: ರಾಜ್ಯದಲ್ಲಿ ಬಿಜೆಪಿ ಬಂಡಾಯ‌ ವಿಚಾರ ಕುರಿತು ಇಂದು ಮೈಸೂರಿನಲ್ಲಿ ಮಾತನಾಡಿದ ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ. ವಿಜಯೇಂದ್ರ, ಇನ್ನೂ ನಾಲ್ಕು ದಿನಗಳಲ್ಲಿ ಮ್ಯಾಜಿಕ್ ನಡೆಯಲಿದೆ. ಶಿವಮೊಗ್ಗ ಸೇರಿದಂತೆ ಎಲ್ಲಾ ಬಂಡಾಯವೂ ಇನ್ನೂ ನಾಲ್ಕು ದಿನದಲ್ಲಿ ಬಗೆಹರಿಯಲಿದೆ ಎಂದರು.

    ಇದನ್ನೂ ಓದಿ: ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿದ ಕಳ್ಳರು! ಗುಂಡು ಹಾರಿಸಿ ಲಕ್ಷಗಟ್ಟಲೇ ಹಣ ಕದ್ದು ಪರಾರಿ

    “ಯಡಿಯೂರಪ್ಪನವರು ಎಲ್ಲಾ ಕಡೆ ಹೋಗಿ ಭಿನ್ನಮತ ಶಮನ ಮಾಡುತ್ತಾರೆ. ಇನ್ನೂ ನಾಲ್ಕೇ ದಿನದಲ್ಲಿ ಆ ಮ್ಯಾಜಿಕ್ ಆಗುತ್ತೆ ನೋಡ್ತಿರಿ. ಪಕ್ಷದ ಎಲ್ಲಾ ನಿರ್ಧಾರಗಳನ್ನು ವಿಜಯೇಂದ್ರ, ಯಡಿಯೂರಪ್ಪ ಮಾತ್ರ ತೆಗೆದುಕೊಳ್ಳಲು ಸಾಧ್ಯವಿಲ್ಲ. ಹೈ ಕಮಾಂಡ್ ನಿರ್ಧಾರಗಳೇ ಅಂತಿಮ. ನಮ್ಮ ಮಾತುಗಳನ್ನೇ ಕೇಳಿ ಎಲ್ಲ ನಿರ್ಧಾರ ಕೈಗೊಳ್ಳುತ್ತಿಲ್ಲ” ಎಂದರು.

    “ಪಕ್ಷದ ಹೈಕಮಾಂಡ್ ನಾಯಕರಿಗೆ ಎಲ್ಲವೂ ಗೊತ್ತಿದೆ. ನರೇಂದ್ರ ಮೋದಿ ಅವರ ಅಲೆ ಮತ್ತು ನಾಯಕತ್ವಕ್ಕಾಗಿ ಪಕ್ಷದ ಎಲ್ಲಾ ನಾಯಕರು ಒಂದಾಗಿ ಕೆಲಸ ಮಾಡುತ್ತಾರೆ. ಲೋಕಸಭಾ ಚುನಾವಣೆಯ ಹಿನ್ನಲೆ ಕಾಂಗ್ರೆಸ್ ಸರ್ಕಾರಕ್ಕೆ ಭಯ ಆವರಿಸಿದೆ. ಸೋಲುವ ಭೀತಿಯಿಂದ ಸಚಿವರು ಚುನಾವಣಾ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ” ಎಂದು ಹೇಳಿದರು.

    ಇದನ್ನೂ ಓದಿ: ಮಹಾಬಲೇಶ್ವರನಿಗೆ ರುದ್ರಾಭಿಷೇಕ, ಕ್ಷೀರಾಭಿಷೇಕ ಮಾಡಿಸುತ್ತಿರುವ ಡಿ.ಕೆ ಶಿವಕುಮಾರ್

    “ಸಿಎಂ, ಡಿಸಿಎಂ 18 ಸಚಿವರನ್ನು ಕಣಕ್ಕಿಳಿಸಲು ಮುಂದಾಗಿದ್ರು. ಮೋದಿಯ ಅಲೆಗೆ ಹೆದರಿ ಯಾವ ಸಚಿವರು ಸ್ಪರ್ಧೆ ಮಾಡುತ್ತಿಲ್ಲ. ಎಲ್ಲಾ ಸಚಿವರಿಗೂ ಸೋಲುವ ಭೀತಿ ಕಾಡುತ್ತಿದೆ. ಹೀಗಾಗಿ ಯಾರು ಸ್ಪರ್ಧೆ ಮಾಡಿಲ್ಲ. ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ಶಾಪ ಎನ್ನುವ ರೀತಿಯಾಗಿದೆ. ಕಡಿಮೆ ಅವಧಿಯಲ್ಲಿ ಜನಪ್ರಿಯತೆ ಕಳೆದುಕೊಂಡ ಏಕೈಕ ಸರ್ಕಾರ ಸಿದ್ದರಾಮಯ್ಯ ಸರ್ಕಾರ. ಬಡವರು, ಶೋಷಿತರು, ರೈತರು ಯಾರ ಪರವಾಗಿಯೂ ಈ ಸರ್ಕಾರ ಇಲ್ಲ. ಇದರಿಂದ ಜನರು ಬೇಸತ್ತಿದ್ದಾರೆ. ಹೀಗಾಗಿ ನಮ್ಮ ಮುಖಂಡರನ್ನು ಸೆಳೆಯುವ ಕೆಲಸ ಮಾಡುತ್ತಿದ್ದಾರೆ” ಎಂದರು.

    ಅದೊಂದು ಪಾತ್ರ ನಾನು ಒಪ್ಪಬಾರದಿತ್ತು! ಆ ತಪ್ಪಿಂದ ನನ್ನ ಆಸೆಯೇ ನುಚ್ಚುನೂರಾಯ್ತು: ನಟಿ ಅರ್ಚನಾ

    ಮನೆಯಲ್ಲಿ ಇರೋದನ್ನೆಲ್ಲಾ ಮಾರಿದೆ! ಜೀವನವೇ ಅರ್ಧ ಕತ್ತರಿಸಿ ಹೋಗಿತ್ತು; ನಟ ರಣದೀಪ್ ಭಾವುಕ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts