More

    ‘400 ಸ್ಥಾನ ಗೆದ್ದು ಸಂವಿಧಾನ ಬದಲಿಸಲು ಹೊರಟಿದ್ದಾರೆ’..ಬಿಜೆಪಿ ವಿರುದ್ಧ ಉದ್ಧವ್ ಠಾಕ್ರೆ ವಾಗ್ದಾಳಿ

    ಮುಂಬೈ: ಲೋಕಸಭೆ ಚುನಾವಣೆಯಲ್ಲಿ 400 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಗುರಿಯೊಂದಿಗೆ ಬಿಜೆಪಿ ಸಂವಿಧಾನವನ್ನು ಬದಲಾಯಿಸಲು ಹೊರಟಿದೆ ಎಂದು ಶಿವಸೇನೆ (ಯುಬಿಟಿ) ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.

    ಇದನ್ನೂ ಓದಿ: ನಾಳೆಯೇ ಚುನಾವಣಾ ವೇಳಾಪಟ್ಟಿ ಪ್ರಕಟ..ಇಸಿಐ ಸಜ್ಜು..

    ರತ್ನಗಿರಿ ಜಿಲ್ಲೆಯ ಗುಹಾಗರ್‌ನಲ್ಲಿ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿ, ‘ಒಂದು ರಾಷ್ಟ್ರ ಒಂದು ಚುನಾವಣೆ’ ಪರಿಕಲ್ಪನೆಯು ಸರ್ವಾಧಿಕಾರದತ್ತ ಸಾಗುವುದಾಗಿದೆ ಎಂದು ಹೇಳಿದರು.

    “ಬಿಜೆಪಿಯ ತಂತ್ರವನ್ನು ಜನತೆ ಅರ್ಥಮಾಡಿಕೊಳ್ಳಬೇಕು. ಅವರಿಗೆ ಲೋಕಸಭೆಯ 543 ರಲ್ಲಿ 400 ಕ್ಕೂ ಹೆಚ್ಚು ಸ್ಥಾನಗಳು ಬೇಕು. ಏಕೆಂದರೆ ಅವರು ಸಂವಿಧಾನವನ್ನು ಬದಲಾಯಿಸುವ ಯೋಜನೆ ಹೊಂದಿದ್ದು, ವಿರೋಧದ ಧ್ವನಿಗಳು ಬೇಕಾಗಿಲ್ಲ ಎಂದು ಹೇಳಿದರು.

    “ಇತ್ತೀಚೆಗೆ 100 ಕ್ಕೂ ಹೆಚ್ಚು ಸಂಸದರನ್ನು ಸಂಸತ್​ನಿಂದ ಅಮಾನತುಗೊಳಿಸಲಾಯಿತು, ಈ ಸಮಯದಲ್ಲಿ ಹಲವು ಪ್ರಮುಖ ಮಸೂದೆಗಳನ್ನು ಚರ್ಚೆಯಿಲ್ಲದೆ ಅಂಗೀಕರಿಸಲಾಯಿತು ಎಂದು ಅವರು ಹೇಳಿದರು.

    ಬಿಜೆಪಿ ಸಂಸದ ಅನಂತಕುಮಾರ್​ ಹೆಗಡೆ ಕಳೆದ ವಾರ ಸಂವಿಧಾನವನ್ನು ತಿದ್ದುಪಡಿ ಮಾಡಲು ಸಂಸತ್ತಿನ ಉಭಯ ಸದನಗಳಲ್ಲಿ ಮೂರನೇ ಎರಡರಷ್ಟು ಬಹುಮತದ ಅಗತ್ಯವಿದೆ ಎಂದು ಹೇಳಿದ್ದರು ಎಂಬುದನ್ನು ಅವರು ಪ್ರಸ್ತಾಪಿಸಿದರು.

    ಮೂಡ್​ ಎಕ್ಸ್​, ಹಾಟ್​ ಶಾಟ್ಸ್​ ಸೇರಿ ಭಾರತದಲ್ಲಿ 18 ಓಟಿಟಿ ಪ್ಲಾಟ್‌ಫಾರ್ಮ್‌ಗಳ ನಿಷೇಧ: ಕಾರಣ ಇದೇ ನೋಡಿ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts