

ಜೈಪುರ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಬಿಜೆಪಿ ಸತತ ಮೂರನೇ ಬಾರಿಗೆ ಕೇಂದ್ರದಲ್ಲಿ ಸರ್ಕಾರ ರಚಿಸಲಿದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಶುಕ್ರವಾರ ಹೇಳಿದರು.
ದೌಸಾ ಜಿಲ್ಲೆಯ ಮೆಹಂದಿಪುರಲ್ಲಿರುವ ಬಾಲಾಜಿ ದೇವಸ್ಥಾನಕ್ಕೆ ಸಿಎಂ ಶರ್ಮಾ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಮತ್ತು ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ಇದ್ದರು. ಅವರು ಹೆಲಿಕಾಪ್ಟರ್‌ನಲ್ಲಿ ದೌಸಾ ತಲುಪಿ ದೇವಸ್ಥಾನಕ್ಕೆ ಭೇಟಿ ನೀಡಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶರ್ಮಾ, ‘ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶದಲ್ಲಿ ಮೂರನೇ (ಸತತ) ಬಿಜೆಪಿ ಸರ್ಕಾರ ರಚನೆಯಾಗಲಿದೆ.
ಮುಂಗಾರು ಹಂಗಾಮಿನಲ್ಲಿ ಉತ್ತಮ ಮಳೆಯಾಗಲಿ. ರಾಜ್ಯ ಮತ್ತು ದೇಶದಲ್ಲಿ ಶಾಂತಿ ಮತ್ತು ಸಮೃದ್ಧಿ ನೆಲೆಸಲಿ ಎಂದು ಒ ಪ್ರಾರ್ಥಿಸುವುದಾಗಿ ಸಿಎಂ ಶರ್ಮಾ ಮಾಧ್ಯಮದವರಿಗೆ ತಿಳಿಸಿದರು. ದೌಸಾ ಜಿಲ್ಲೆಯ ಮೆಹಂದಿಪುರದಲ್ಲಿರುವ ದೇವಸ್ಥಾನಕ್ಕೆ ನಾಯಕರ ಭೇಟಿಗೆ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು.