More

    ಕೇಂದ್ರದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ಹರಿದು ಬಿಸಾಡಲಿದೆ: ರಾಹುಲ್ ಗಾಂಧಿ

    ನವದೆಹಲಿ: ಕೇಂದ್ರದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ, ಬಡವರು, ದಲಿತರು, ಎಸ್ಟಿಗಳು ಮತ್ತು ಒಬಿಸಿಗಳಿಗೆ ಹಕ್ಕುಗಳನ್ನು ನೀಡಿದ ಸಂವಿಧಾನವನ್ನು “ಹರಿದು ಬಿಸಾಡಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದರು.

    ಇದನ್ನೂ ಓದಿ: ದೆಹಲಿ ಸಿಎಂ ಆಗಿ ಕೇಜ್ರಿವಾಲ್ ಮುಂದುವರಿಯಲಿದ್ದಾರೆ! ಹೈಕೋರ್ಟ್ ಅಭಿಪ್ರಾಯ ಪರಿಗಣಿಸದ ಎಎಪಿ

    ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿ ಚುನಾವಣಾ ಸಮಾವೇಶದಲ್ಲಿ ಸಂವಿಧಾನ ಪ್ರತಿಯನ್ನು ಹಿಡಿದುಕೊಂಡು ಮಾತನಾಡಿದ ಅವರು, ಈ ಬಾರಿಯ ಲೋಕಸಭೆ ಚುನಾವಣೆ ಸಾಮಾನ್ಯ ಚುನಾವಣೆಯಲ್ಲ, ಆದರೆ ಎರಡು ಸಿದ್ಧಾಂತಗಳ ನಡುವಿನ ಹೋರಾಟವಾಗಿದೆ ಎಂದು ಹೇಳಿದರು.

    “ಸಂವಿಧಾನದಿಂದಾಗಿ ಬಡವರು, ಎಸ್​ಟಿಗಳು, ಒಬಿಸಿಗಳಿಗೆ ಸಂವಿಧಾನದಿಂದ ಹಲವು ಹಕ್ಕುಗಳು ದೊರೆತಿವೆ. ಅದು ನರೇಗಾ, ಭೂ ಹಕ್ಕು, ಮೀಸಲಾತಿ ಸೇರಿದಂತೆ ಅನೇಕ ಹಕ್ಕುಗಳನ್ನು ನೀಡಿದೆ. ಬಿಜೆಪಿ ಅಧಿಕಾರಕ್ಕೆ ಬಂದರೆ, ಸಂವಿಧಾನವನ್ನು ಕಿತ್ತು ಬಿಸಾಡಲಿದೆ ಎಂದು ಆರೋಪ ಮಾಡಿದರು.

    ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನದ ಪುಸ್ತಕಗಳನ್ನು ಹರಿದು ಬಿಸಾಡಲು ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಮತ್ತು ಅವರ ಸಂಸದರು ನಿರ್ಧರಿಸಿದ್ದಾರೆ. ಸರ್ಕಾರವನ್ನು 20-25 ಬಿಲಿಯನೇರ್‌ಗಳು ದೇಶವನ್ನು ನಡೆಸಬೇಕು ಎಂದು ಬಿಜೆಪಿ ಬಯಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಬಿಜೆಪಿ ಮೀಸಲಾತಿ ವಿರುದ್ಧವಾಗಿದೆ. ರೈಲ್ವೆ ಸೇರಿದಂತೆ ಸಾರ್ವಜನಿಕ ಉದ್ದಿಮೆಗಳನ್ನು ( ಪಿಎಸ್​ಯು ) ಖಾಸಗೀಕರಣಗೊಳಿಸಿದೆ ಎಂದು ತಿಳಿಸಿದರು.

    ಲೋಕಸಭೆ ಚುನಾವಣೆ: ಸಿಎ ಪರೀಕ್ಷೆ ಮುಂದೂಡಿಕೆಗೆ ಸುಪ್ರೀಂ ನಿರಾಕರಣೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts