More

    ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ವಿತ; ಅಧಿಕಾರಕ್ಕೆ ಬರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ

    ಬೆಂಗಳೂರು: ಬಿಜೆಪಿಯ ಗೆಲುವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಮುಂದಿನ ವಿಧಾನ ಸಭೆ ಚುನಾವಣೆಯಲ್ಲಿ 150 ಸೀಟು ಗೆದ್ದು ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ. ಸದ್ಯದಲ್ಲೇ ರಾಜ್ಯದಾದ್ಯಂತ ವಿಜಯದ ಯಾತ್ರೆ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಹೇಳಿದರು.

    ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಜೆ.ಪಿ. ನಡ್ಡಾ ನೇತೃತ್ವದಲ್ಲಿ ರಾಜ್ಯದಲ್ಲಿ ನಿಶ್ಚಿತವಾಗಿ ಗುರಿಯನ್ನು ತಲುಪಿ ಮತ್ತೆ ಅಧಿಕಾರಕ್ಕೆ ಬರಲಿದ್ದೇವೆ. ಯಾವ ಶಕ್ತಿ ಕೂಡ ನಾವು ಅಧಿಕಾರಕ್ಕೆ ಬರೋದನ್ನು ತಡೆಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಪಕ್ಷಕ್ಕೆ ನಾವೆಲ್ಲ ಮನವರಿಕೆ ಮಾಡಿಕೊಡಬೇಕಿದೆ ಎಂದರು.

    ಮೋದಿ ಕಾರ್ಯಕ್ರಮ, ಕೆಂದ್ರ ಹಾಗೂ ರಾಜ್ಯ ಸರ್ಕಾರದಲ್ಲಿ ಕಳೆದ ಮೂರು ವರ್ಷದಲ್ಲಿ ಹಲವು ಜನಪರ ಕಾರ್ಯಕ್ರಮಗಳು ನಡೆದಿವೆ. ಇದನ್ನ ಕಾರ್ಯಕರ್ತರು ಅರ್ಥ ಮಾಡಿಕೊಂಡು ಮನೆ ಮನೆಗೆ ತಲುಪಿಸಲು ಈ ವಿಜಯ ಯಾತ್ರೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

    ಪರಿಶಿಷ್ಟ ಜಾತಿ, ಪರಿಶಿಷ್ಟ ಜನರ ಕಲ್ಯಾಣಕ್ಕಾಗಿ ಅನೇಕ ಯೋಜನೆ ರೂಪಿಸೋ ಮೂಲಕ ಸುಧಾರಣೆ ಮಾಡುವಲ್ಲಿ ಬಿಜೆಪಿ ಪಕ್ಷ ಯಶಸ್ವಿಯಾಗಿದೆ. ರಾಜ್ಯದ ಮೂಲೆ ಮೂಲೆಗಳಲ್ಲಿ ಅನೇಕ ವರ್ಷದಿಂದ ಮನೆಗಳಿಗೆ ವಿದ್ಯುತ್ ಇರಲಿಲ್ಲ. ಅಂತಹ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾರ್ಯ ಮಾಡಿದ್ದೇವೆ. ರಾಜ್ಯದಲ್ಲಿ ಅನೇಕ ಅಭಿವೃದ್ಧಿ ಕಾರ್ಯ ಮಾಡುವ ಮೂಲಕ ಜನರ ಮನೆ ತಲುಪಿದ್ದೇವೆ ಎಂದರು.

    ವರುಣ ದೇವನ ಕೃಪೆಯಿಂದ ಸಕಾಲಕ್ಕೆ ಮಳೆಯಾಗಿ ಕೆರೆ, ಕಟ್ಟೆ, ಜಲಾಶಯ ತುಂಬಿದೆ‌. ನೀರಾವರಿ ಯೋಜನೆಗೆ ಹೆಚ್ಚಿನ ಆಧ್ಯತೆ ನಮ್ಮ ಸರ್ಕಾರ ನೀಡಿದೆ. ಕೃಷ್ಣಾ ಮೇಲ್ಡಂಡೆ, ಮಹದಾಯಿ, ಮೇಕೆದಾಟು ಯೋಜನೆಗೆ ಹಣ ನೀಡಿದ್ದೇವೆ. ಈಗಾಗಲೇ ಸಿಎಂ ರೈತ ವಿದ್ಯಾನಿಧಿ, ಹತ್ತು ಲಕ್ಷ ವಿದ್ಯಾರ್ಥಿಗಳಿಗೆ 400ಕೋ.ರೂ. ನೀಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.​​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts