ಪತ್ನಿಯನ್ನು ಕರೆದೊಯ್ಯಲು ದೇವಸ್ಥಾನಕ್ಕೆ ಬಂದಿದ್ದ ಬಿಜೆಪಿ ಕಾರ್ಯಕರ್ತನ ಹತ್ಯೆ!

BJP worker shot
Published on

ಗುಜರಾತ್: ದೇವಸ್ಥಾನಕ್ಕೆ ಬಂದಿದ್ದ ಪತ್ನಿಯನ್ನು ಕರೆದೊಯ್ಯಲು ಬಂದ ಬಿಜೆಪಿ ಕಾರ್ಯಕರ್ತನನ್ನು ದುಷ್ಕರ್ಮಿಗಳ ಗುಂಪೊಂದು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಗುಜರಾತ್​ನ ವಲ್ಸದ್ ಜಿಲ್ಲೆಯಲ್ಲಿ ನಡೆದಿದೆ.

ಶೈಲೇಶ್ ಪಟೇಲ್ (45) ಮೃತ. ಈತ ಬಿಜೆಪಿಯ ವಾಪಿ ತಾಲೂಕು ಘಟಕದ ಉಪಾಧ್ಯಕ್ಷರಾಗಿದ್ದರು.ಇವರು ಕೋಚರ್ವ ಗ್ರಾಮದ ನಿವಾಸಿಯಾಗಿದ್ದರು. ಮೋಟಾರ್ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಆತನ ಮೇಲೆ ಮೂರು-ನಾಲ್ಕು ಸುತ್ತು ಗುಂಡು ಹಾರಿಸಿದ್ದಾರೆ.

ನಡೆದಿದ್ದೇನು?: ರಾಟಾ ರಸ್ತೆಯಲ್ಲಿರುವ ಮಹಾದೇವ ದೇವಸ್ಥಾನಕ್ಕೆ ಪೂಜೆಗೆಂದು ತೆರಳಿದ್ದ ಪತ್ನಿ ನಯಾಬೆನ್‌ಗಾಗಿ ಶೈಲೇಶ್ ಕಾರಿನಲ್ಲಿ ಕುಳಿತು ಕಾಯುತ್ತಿದ್ದರು. ಆಗ ಬೈಕಿನಲ್ಲಿ ಆ ಸ್ಥಳಕ್ಕೆ ಬಂದಿರುವ ಅಪರಿಚಿತ ವ್ಯಕ್ತಿಗಳು ಶೈಲೇಶ್ ಎದೆಗೆ ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಕೂಡಲೇ ಅಲ್ಲೇ ಇದ್ದ ಸ್ಥಳೀಯರು ಶೈಲೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಪ್ರಾಣ ಬಿಟ್ಟಿದ್ದಾರೆ.

ಶೈಲೇಶ್ ಪತ್ನಿ ಮಾತನಾಡಿ, ಕೆಲವು ಪರಿಚಿತ ವ್ಯಕ್ತಿಗಳೊಂದಿಗಿನ ಹಳೆಯ ಜಗಳ ಕೊಲೆಗೆ ಕಾರಣವಾಗಿರಬಹುದು ಎಂದಿದ್ದಾರೆ. ಪೊಲೀಸರು ಈ ಕುರಿತಾಗಿ ತನಿಖೆ ಕೈಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net