ಬಿಜೆಪಿ ಕಾರ್ಯಕರ್ತೆ ಬೆಳಗ್ಗೆ ಬಂಧನ ಸಂಜೆ ಬಿಡುಗಡೆ

Shakunthala BJP
Published on

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರ ಕುಟುಂಬದ ಬಗ್ಗೆ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದಡಿ ಬಿಜೆಪಿ ಕಾರ್ಯಕರ್ತೆಯನ್ನು ಹೈಗ್ರೌಂಡ್ಸ್ ಪೊಲೀಸರು ಬಂಧಿಸಿ ಠಾಣಾ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ.

ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿಯ ಎಚ್.ಎಸ್. ಶಕುಂತಲಾ ಬಂಧಿತೆ. ಯಾದಗಿರಿ ಮೂಲದ ಕಾಂಗ್ರೆಸ್ ಕಾರ್ಯಕರ್ತ ಹನುಮಂತರಾಯ ಎಂಬಾತ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಶುಕ್ರವಾರ ಬೆಳಗ್ಗೆ ಶಂಕುತಲಾರನ್ನು ಬಂಧಿಸಿದ್ದರು. ಠಾಣೆಗೆ ಕರೆತಂದು ವಿಚಾರಣೆ ನಡೆಸಿ ಮಧ್ಯಾಹ್ನ ಠಾಣಾ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉಡುಪಿಯ ಕಾಲೇಜಿನ ಶೌಚಗೃಹದಲ್ಲಿನ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಎಂಬುದು ಸುಳ್ಳು ಸುದ್ದಿ ಎಂದು ಕಾಂಗ್ರೆಸ್ ಟ್ವಿಟ್ ಮಾಡಿತ್ತು. ಈ ಪೋಸ್ಟ್‌ಗೆ ಶಕುಂತಲಾ, ‘ಮುಸ್ಲಿಂ ಯುವತಿಯರು ಟಾಯ್ಲೆಟ್‌ನಲ್ಲಿ ಕ್ಯಾಮರಾ ಇಟ್ಟು ಹಿಂದು ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ದು ಕಾಂಗ್ರೆಸ್‌ನವರ ಪ್ರಕಾರ ಮಕ್ಕಳಾಟವಂತೆ. ಸಿದ್ದರಾಮಯ್ಯನವರ ಸೊಸೆ ಅಥವಾ ಹೆಂಡತಿ ಅವರ ವಿಡಿಯೋವನ್ನು ಇದೇ ರೀತಿ ಮಾಡಿದ್ದರೆ ಅದನ್ನು ಮಕ್ಕಳಾಟ ಅಂತ ಒಪ್ಪಿಕೊಳ್ಳುತ್ತೀರಾ?’ ಎಂದು ಟ್ವಿಟ್ ಮಾಡಿದ್ದರು. ಈ ಪೋಸ್ಟ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಯಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net