ಕೇರಳದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ!

Crime Symbolic (1)
Published on

ಪಾಲಕ್ಕಾಡ್: ಕೇರಳದ ಪಾಲಕ್ಕಾಡ್‌ನಲ್ಲಿ ಇಬ್ಬರು ಬಿಜೆಪಿ ಕಾರ್ಯಕರ್ತರು ಸೇರಿದಂತೆ ಒಟ್ಟು ಮೂವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಹಲ್ಲೆಗೊಳಗಾದ ಬಿಜೆಪಿ ಕಾರ್ಯಕರ್ಯ
ಹಲ್ಲೆಗೊಳಗಾದ ಬಿಜೆಪಿ ಕಾರ್ಯಕರ್ಯ

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಇಬ್ಬರು ಬಿಜೆಪಿ ಕಾರ್ಯಕರ್ತರಾದ ವಿಷ್ಣು ಮತ್ತು ದಿನೇಶ್ ಮೇಲೆ ಆಯುಧಗಳಿಂದ ಹಲ್ಲೆ ನಡೆಸಲಾಗಿದೆ. ಈ ಸಂದರ್ಭ ದಾಳಿಕೋರರನ್ನು ತಡೆಯಲು ಮುಂದಾದ ವಿಷ್ಣು ಅವರ ತಾಯಿಯ ಮೇಲೂ ಹಲ್ಲೆ ನಡೆಸಲಾಗಿದೆ.

ಘಟನೆಯ ಬಳಿಕ ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಲತ್ತೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆಯ ತನಿಖೆ ನಡೆಯುತ್ತಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ಈ ಹಿಂದೆ ಫೆಬ್ರವರಿಯಲ್ಲಿ, ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ ಅಣ್ಣಾಮಲೈ, ಬಿಜೆಪಿ ಕಾರ್ಯಕರ್ತನ ಮೇಲಿನ ದಾಳಿಗಾಗಿ ಪಿಣರಾಯಿ ವಿಜಯನ್ ನೇತೃತ್ವದ ಕೇರಳ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಬಿಜೆಪಿ ಪಕ್ಷದ ಕಾರ್ಯಕರ್ತನಿಗೆ ರಾಜ್ಯ ಪೊಲೀಸ್ ಅಧಿಕಾರಿಗಳು ಥಳಿಸಿದ ವೀಡಿಯೊವನ್ನು ಅವರು ಟ್ವೀಟ್ ಮಾಡಿದ್ದರು. ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಪಾಲಕ್ಕಾಡ್ ಜಿಲ್ಲೆಯ ಚಾಲಿಸ್ಸೆರಿ ಮೂಲಕ ಸಾಗುತ್ತಿದ್ದ ಕೇರಳ ಮುಖ್ಯಮಂತ್ರಿಗಳ ಬೆಂಗಾವಲು ವಾಹನದ ವಿರುದ್ಧ ಕಪ್ಪು ಬಾವುಟ ಪ್ರದರ್ಶಿಸಿದಾಗ ಕಾರ್ಮಿಕನಿಗೆ ಪೊಲೀಸರು ಥಳಿಸಿದ್ದರು. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net