25.9 C
Bengaluru
Wednesday, January 22, 2020

ಡಿಕೆಶಿ ಮತ್ತು ಎಚ್.ಡಿ. ಕುಮಾರಸ್ವಾಮಿ ಅವರ ಷಡ್ಯಂತ್ರ ನಡೆಯಲಿಲ್ಲ

Latest News

ಆರೋಪಿ ಆದಿತ್ಯರಾವ್​ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿಲ್ಲ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟಿದ್ದ ಆರೋಪಿ ಆದಿತ್ಯರಾವ್​ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿಕೆ ನೀಡಿದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿ...

ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ...

ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ

ಚಿಕ್ಕಮಗಳೂರು: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಮುಖ ಧಾರ್ವಿುಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಬಾಬಾಬುಡನ್​ಗಿರಿ, ಮುಳ್ಳಯ್ಯನಗಿರಿ, ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಪೊಲೀಸ್...

ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ...

ಕೋತಿ ಹಾವಳಿಗೆ ಹಣ್ಣಿನ ಗಿಡ ಮದ್ದು

ಚಿಕ್ಕಮಗಳೂರು: ಕಡೂರಿನ ಹಲವೆಡೆ ತಲೆದೋರಿರುವ ಮಂಗಗಳ ಹಾವಳಿ ತಡೆಗೆ ಗ್ರಾಮಗಳ ಹೊರಭಾಗದಲ್ಲಿ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನು ಆಕರ್ಷಿಸಬಹುದು. ಈ...

ರಾಮನಗರ: ಉಪಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನಗಳನ್ನು ಪಡೆದ ಹಿನ್ನೆಲೆಯಲ್ಲಿ ನಗರದ ಐಜೂರು ವೃತ್ತದಲ್ಲಿ ಭಾರತೀಯ ಜನತಾ ಪಕ್ಷದ ಮುಖಂಡರು ತಾಲೂಕು ಅಧ್ಯಕ್ಷ ಪ್ರವೀಣ್‌ಗೌಡ ಮತ್ತು ಯುವ ಮೋರ್ಚಾ ಜಿಲ್ಲಾಧ್ಯಕ್ಷ ವರದರಾಜುಗೌಡ ನೇತೃತ್ವದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸೋಮವಾರ ವಿಜಯೋತ್ಸವ ಆಚರಿಸಿದರು.

ಈ ವೇಳೆ ಮಾತನಾಡಿದ ತಾಲೂಕು ಬಿಜೆಪಿ ಅಧ್ಯಕ್ಷ ಪ್ರವೀಣ್‌ಗೌಡ, ರಾಜ್ಯದ ಜನತೆ ಅಭಿವೃದ್ಧಿ ಪರವಾಗಿ ಇದ್ದೇವೆ ಎಂಬುದನ್ನು ಉಪಚುನಾವಣೆ ಫಲಿತಾಂಶದ ಮೂಲಕ ಸ್ಪಷ್ಟಪಡಿಸಿದ್ದಾರೆ. ಡಿಕೆಶಿ ಮತ್ತು ಎಚ್.ಡಿ. ಕುಮಾರಸ್ವಾಮಿ ಅವರ ಷಡ್ಯಂತ್ರ ನಡೆಯಲಿಲ್ಲ. ಜನರು ಬಿಜೆಪಿಗೆ ಬೆಂಬಲ ನೀಡಿ, ಕಾಂಗ್ರೆಸ್ ಮತ್ತು ಜೆಡಿಎಸ್ ಎರಡು ಪಕ್ಷಗಳಿಗೆ ತಕ್ಕಪಾಠ ಕಲಿಸಿದ್ದಾರೆ ಎಂದರು.

ಬಿಜೆಪಿ ಅಭ್ಯರ್ಥಿಗಳ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿ, ಚುನಾವಣೆಯಲ್ಲಿ ಸೋಲಿಸಲು ಎರಡೂ ಪಕ್ಷಗಳು ಮಾಡಿದ ತಂತ್ರಗಾರಿಕೆ ಫಲಿಸಲಿಲ್ಲ. ಯಾರನ್ನು ವಿರೋಧ ಪಕ್ಷಗಳವರು ಅನರ್ಹರೆಂದು ಬಿಂಬಿಸಲು ಹೊರಟರೋ ಅವರನ್ನು ಜನತೆ ಅರ್ಹರೆಂದು ತೀರ್ಮಾನಿಸಿ ಬೆಂಬಲಿಸಿದ್ದಾರೆ ಎಂದರು.

ಹಳೇ ಮೈಸೂರು ಭಾಗದ ಕೆ.ಆರ್. ಪೇಟೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಮುಂದಿನ ದಿನಗಳಲ್ಲಿ ಈ ಭಾಗದಲ್ಲಿ ಪಕ್ಷ ಸಂಘಟನೆಯೊಂದಿಗೆ ಹೆಚ್ಚಿನ ಸ್ಥಾನ ಗಳಿಸಲಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವರದರಾಜುಗೌಡ ಮಾತನಾಡಿ, ರಾಜ್ಯದಲ್ಲಿ ಸುಭದ್ರ ಸರ್ಕಾರ ನೀಡಬೇಕು ಎಂದು ಉಪ ಚುನಾವಣೆಯಲ್ಲಿ ಬಿಜೆಪಿಗೆ ಅಭೂತಪೂರ್ವ ಬೆಂಬಲ ನೀಡಿದ್ದಾರೆ. ಆ ಮೂಲಕ ಬಿಜೆಪಿ ರಾಜ್ಯದಲ್ಲಿ ಬಹುಮತ ಪಡೆದ ಒಮ್ಮತದ ಸರ್ಕಾರವಾಗಿದೆ. ಇದರಿಂದ ರಾಜ್ಯದಲ್ಲಿ ಅಭಿವೃದ್ಧಿ ಸಾಧ್ಯವಾಗುತ್ತದೆ. ಈ ಹಿಂದೆ ರಾಜ್ಯದಲ್ಲಿ ಇದ್ದ ಹೊಂದಾಣಿಕೆ ರಾಜಕಾರಣಕ್ಕೆ ತಕ್ಕಪಾಠ ಕಲಿಸಿದ್ದಾರೆ ಎಂದರು.

ರಾಮನಗರ-ಚನ್ನಪಟ್ಟಣ ಪ್ರಾಧಿಕಾರದ ಮಾಜಿ ಅಧ್ಯಕ್ಷ ನಾಗರಾಜು, ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಭರತರಾಜು, ನಗರಸಭೆ ಮಾಜಿ ಅಧ್ಯಕ್ಷ ಪಿ.ರವಿಕುಮಾರ್, ನಗರ ಘಟಕದ ಅಧ್ಯಕ್ಷ ಮಂಜು, ಮುಖಂಡರಾದ ರಮೇಶ್, ಚಂದ್ರಶೇಖರರೆಡ್ಡಿ, ಚಿಕ್ಕಣ್ಣ, ಚನ್ನಪ್ಪ, ರುದ್ರದೇವರು, ಕಾಳಯ್ಯ,ಬಸವರಾಜು, ಪ್ರಭು, ಶಿವಸ್ವಾಮಿ, ಶಿವರುದ್ರಪ್ಪ ಸೇರಿದಂತೆ ವಿವಿಧ ಘಟಕಗಳ ಪದಾಧಿಕಾರಿಗಳು ಇದ್ದರು.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...