More

    ಆಜಾದ್ ವೃತ್ತದಲ್ಲಿ ಅಕ್ಕಿ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತರು

    ಚಿಕ್ಕಮಗಳೂರು: ಗ್ರಾಹಕರಿಗೆ ಹತ್ತು ಕೆ.ಜಿ ಅಕ್ಕಿ ವಿತರಿಸುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಅಕ್ಕಿ ಪ್ರದರ್ಶಿಸಿ ನಗರದ ಆಜಾದ್ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
    ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದೆ. ಚುನಾವಣೆಗೂ ಮುನ್ನ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಭಾರಿ ಪ್ರಚಾರ ಮಾಡಿದ್ದರು. ಯಾವುದೇ ಷರತ್ತುಗಳು ಇಲ್ಲದೆ ಐದೂ ಗ್ಯಾರಂಟಿಗಳನ್ನು ಜಾರಿಗೆ ತರುವುದಾಗಿ ಹೇಳಿಕೆ ನೀಡಿರುವ ಸಾಕ್ಷಿಗಳು ಎಲ್ಲರ ಬಳಿಯಿವೆ. ಈಗ ಒಂದೊಂದೇ ಷರತ್ತುಗಳನ್ನು ವಿಧಿಸುತ್ತ ಅನುಷ್ಠಾನಕ್ಕೆ ಮೀನಮೇಷ ಎಣಿಸುತ್ತಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕಲ್ಮರುಡಪ್ಪ ಆರೋಪಿಸಿದರು.
    ಕೇಂದ್ರ ಸರ್ಕಾರದಿಂದ ಕೊಡುತ್ತಿರುವ ಐದು ಕೆ.ಜಿ ಅಕ್ಕಿಯ ಜತೆಗೆ ರಾಜ್ಯದಿಂದ 10 ಕೆ.ಜಿ ಸೇರಿ ಒಟ್ಟು 15 ಕೆ.ಜಿ ಅಕ್ಕಿಯನ್ನು ಫಲಾನುಭವಿಗಳಿಗೆ ವಿತರಿಸಬೇಕು. ಚುನಾವಣೆಗೂ ಮುನ್ನ ಸಿದ್ದರಾಮಯ್ಯ ಅವರು ಕಾಕ ಪಾಟೀಲ್‌ಗೂ ಫ್ರೀ, ನನ್ನ ಹೆಂಡತಿಗೂ ಫ್ರೀ ಅಂತಾ ಹೇಳಿದ್ದರು. ಆದರೆ ಅವರು ಹೇಳಿದ್ದ ಮಾತುಗಳನ್ನು ಮರೆತಿದ್ದಾರೆ ಎಂದು ದೂರಿದರು.
    ಸಮಾಜವಾದದಿಂದ ಬಂದಿದ್ದೇನೆ ಎಂದು ಹೇಳುತ್ತಿರುವ ಸಿದ್ದರಾಮಯ್ಯ ಮಜವಾದಿಯಾಗಿ ಪತಿವರ್ತನೆಯಾಗಿದ್ದಾರೆ. ಮುಖ್ಯಮಂತ್ರಿ ಸೇರಿ ವಿವಿಧ ಖಾತೆಗಳ ಸಚಿವರು ವರ್ಗಾವಣೆ ದಂಧೆಯಲ್ಲಿ ತೊಡಗಿದ್ದಾರೆ. ಷರತ್ತು ರಹಿತವಾಗಿ ಗ್ಯಾರಂಟಿಗಳನ್ನು ಜಾರಿಗೆ ತರುವುದಾಗಿ ಹೇಳಿದ್ದ ಸಿದ್ದರಾಮಯ್ಯ ವಚನಭ್ರಷ್ಟರಾಗಿದ್ದಾರೆ. ಅವರು ನೈತಿಕ ಹೊಣೆಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
    ಪ್ರತಿಯೊಬ್ಬರಿಗೂ 10 ಕೆ.ಜಿ ಅಕ್ಕಿ ಕೊಡುವುದಾಗಿ ಹೇಳಿದ್ದ ರಾಜ್ಯ ಸರ್ಕಾರ ಈಗ 3 ಕೆ.ಜಿ ಅಕ್ಕಿ ನೀಡುತ್ತಿದೆ. ಇಂತಹ ಪರಿಸ್ಥಿತಿಯನ್ನು ತಂದೊಡ್ಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿನಾಕಾರಣ ಕೇಂದ್ರದ ಸರ್ಕಾರದ ವಿರುದ್ಧ ಬೊಟ್ಟು ಮಾಡುತ್ತಿದೆ. ಬಿಜೆಪಿಯಿಂದ ಅಚ್ಚೇ ದಿನ್ ತರಲು ಸಾಧ್ಯವಿಲ್ಲ, ನಾವು ತರುತ್ತೇವೆ ಎಂದು ಹೇಳಿದ್ದ ಕಾಂಗ್ರೆಸ್ ರಾಜ್ಯದ ಜನರನ್ನು ಸಂಕಷ್ಟಕ್ಕೆ ದೂಡಿದೆ ಎಂದು ಆರೋಪಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts