ರೈತರ ಜಮೀನು ಕಬಳಿಕೆಗೆ ಆಕ್ರೋಶ: ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

BJP workers protest Mandya

ಮಂಡ್ಯ: ರೈತರ ಜಮೀನು ಕಬಳಿಕೆ ಮಾಡುತ್ತಿರುವ ವಕ್ಫ್ ಬೋರ್ಡ್‌ಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಕುಮ್ಮಕ್ಕು ನೀಡುತ್ತಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಸರ್‌ಎಂವಿ ಪ್ರತಿಮೆ ಬಳಿ ಜಮಾವಣೆಗೊಂಡ ಕಾರ್ಯಕರ್ತರು, ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಜಮೀರ್ ಅಹಮದ್ ಖಾನ್ ವಿರುದ್ಧ ಧಿಕ್ಕಾರ ಕೂಗಿ ಹಾಗೂ 1974ರ ಗೆಜೆಟ್ ಪ್ರತಿ ಜತೆಗೆ ವಕ್ಫ್ ಎಂದು ನಮೂದಾಗಿರುವ ಆರ್‌ಟಿಸಿ ಪ್ರತಿ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.
ಅಲ್ಪಸಂಖ್ಯಾತರ ಓಲೈಕೆಗಾಗಿ ರೈತರು, ಜನಸಾಮಾನ್ಯರ ಭೂಮಿಯನ್ನು ವಕ್ಫ್ ಬೋರ್ಡ್‌ಗೆ ಕಾಂಗ್ರೆಸ್ ಸರ್ಕಾರ ವರ್ಗಾವಣೆ ಮಾಡುತ್ತಿದೆ. ಈ ಮೂಲಕ ರೈತರ ಜಮೀನನ್ನು ಕಬಳಿಸುವ ಷಡ್ಯಂತ್ರ ಮಾಡುತ್ತಿದೆ. ಇದಕ್ಕೆ ಸಚಿವ ಜಮೀರ್ ಅಹಮದ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಳಗೊಳಗೆ ಕುಮ್ಮಕ್ಕು ನೀಡುತ್ತಿದ್ದಾರೆ. ರಾಜ್ಯಾದ್ಯಂತ ವಕ್ಫ್ ಬೋರ್ಡ್ ಕಂದಾಯ ಇಲಾಖೆಯ ನಿಯಮ ಮೀರಿ ಕಂಡ ಕಂಡ ಜಾಗ, ಆಸ್ತಿಗಳು ತಮ್ಮದೆಂದು ಅಕ್ರಮವಾಗಿ ಮಾಡಿಕೊಳ್ಳಲು ಮುಂದಾಗಿದೆ. ಸರ್ಕಾರ ಮುಸ್ಲಿಮರ ಓಲೈಕೆ ಮಾಡಲು ಮೌನ ವಹಿಸಿದೆ. ಸರ್ಕಾರಕ್ಕೆ ರೈತರು, ಜನರ ಹಿತಕ್ಕಿಂತ ತುಷ್ಠೀಕರಣ ರಾಜಕಾರಣ ಮುಖ್ಯವಾಗಿದೆ ಎಂದು ಆರೋಪಿಸಿದರು.
ಕೇಂದ್ರ ಸರ್ಕಾರ ಜನರ ಹಿತದೃಷ್ಟಿಯಿಂದ ವಕ್ಫ್ ಮಂಡಳಿಯಲ್ಲಿ ಅಕ್ರಮ ತಡೆಗಾಗಿ ಕಾಯ್ದೆಗೆ ತಿದ್ದುಪಡಿ ತರುವ ವಿಧೇಯಕ ಮಂಡಿಸಿದೆ. ಈ ಕಾಯ್ದೆ ಕುರಿತು ಜಂಟಿ ಪಾರ್ಲಿಮೆಂಟರಿ ಬೋರ್ಡ್ ಪರಿಶೀಲನೆ ನಡೆಸುತ್ತಿದೆ. ಕಾಯ್ದೆಗೆ ತಿದ್ದುಪಡಿ ಖಚಿತವಾಗುತ್ತಿದ್ದಂತೆ ರಾಜ್ಯದಲ್ಲಿ ವಕ್ಫ್ ಬೋರ್ಡ್ ಸಾರ್ವಜನಿಕರ ಆಸ್ತಿ ಕಾಪಾಡಿಸುವ ಹುನ್ನಾರಕ್ಕೆ ಮುಂದಾಗಿದೆ. ಇದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಸಚಿವ ಜಮೀರ್ ಅಹಮದ್ ನೇರವಾಗಿ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಹೇಳಿದರು.
ಬೆಳಗಾವಿ, ಹಾವೇರಿ, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಬಹುತೇಕ ಜಿಲ್ಲೆ, ತಾಲೂಕಲ್ಲಿ ರೈತರು, ಮಠಗಳು, ಬಡವರ ಜಾಗಗಳ ಪಹಣಿಯಲ್ಲಿ ವಕ್ಫ್ ಎಂದು ಉಲ್ಲೇಖಿಸಲಾಗಿದೆ. ಜಿಲ್ಲೆಯಲ್ಲಿ ಬೆಳ್ಳೂರು, ಮಹದೇವಪುರ ಗ್ರಾಮದಲ್ಲಿಯು ಆಸ್ತಿ ಕಬಳಿಸಲು ಮುಂದಾಗಿದೆ. ಪೂರ್ವಜರಿಂದ ಬಂದ ಜಮೀನಿನಲ್ಲಿ ಬೇಸಾಯ ಮಾಡಿಕೊಂಡು ಬದುಕುತ್ತಿದ್ದ ರೈತರಿಗೆ ನೋಟಿಸ್ ಜಾರಿ ಮಾಡಲಾಗಿತ್ತು. ಇದಕ್ಕೆ ಬಿಜೆಪಿ ವ್ಯಾಪಕ ವಿರೋಧ ಮಾಡಿದ್ದರಿಂದ ನೋಟಿಸ್ ವಾಪಸ್ ಪಡೆಯಲಾಗುತ್ತಿದೆ. ರೈತರ ಜಮೀನಿನ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದು ಮಾಡದಂತೆ ತಾತ್ಕಾಲಿಕವಾಗಿ ಕಾಂಗ್ರೆಸ್ ಸರ್ಕಾರ ತಡೆಹಿಡಿದಿರುವುದು ಚುನಾವಣಾ ತಂತ್ರಗಾರಿಕೆಯಾಗಿದ್ದು, ಇದೇ ರೀತಿ ಮುಂದುವರೆಸಿದರೆ ಮುಂದಾಗುವ ಅನಾಹುತಕ್ಕೆ ಕಾಂಗ್ರೆಸ್ ಸರ್ಕಾರ ನೇರಹೊಣೆಯಾಗಲಿದೆ. ಮತ ಬ್ಯಾಂಕ್‌ಗಾಗಿ ಮುಸ್ಲಿಮರ ಓಲೈಕೆಗಾಗಿ ಹಿಂದುವಿರೋಧಿ ನಿರ್ಧಾರ ಕೈಗೊಳ್ಳುವ ಹಳೆ ಚಾಳಿಯನ್ನು ಕೈಬಿಡಬೇಕು. ವಕ್ಫ್ ಆಸ್ತಿ ಕುರಿತ ಗೆಜೆಟ್ ಅಧಿಸೂಚನೆ ಹಿಂಪಡೆಯಬೇಕು. ಅಧಿಕಾರ ದುರ್ಬಳಕೆಯ ಕುರಿತು ಸಿಬಿಐ ತನಿಖೆ ನಡೆಸಬೇಕು ಹಾಗೂ ವಿವಾದಕ್ಕೆ ಕಾರಣವಾದ ಸಚಿವ ಜಮೀರ್ ಅಹಮದ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ರಾಜ್ಯಕಾರ್ಯಕಾರಿಣಿ ಸದಸ್ಯ ಡಾ.ಸಿದ್ದರಾಮಯ್ಯ, ಜಿಲ್ಲಾಧ್ಯಕ್ಷ ಇಂದ್ರೇಶ್, ಜಿಲ್ಲಾ ವಕ್ತಾರ ಸಿ.ಟಿ.ಮಂಜುನಾಥ್, ವಿವೇಕ್, ಕ್ರಾಂತಿ ಮಂಜು, ಶಿವಕುಮಾರ್ ಆರಾಧ್ಯ, ನಾಗಾನಂದ, ನಿತ್ಯಾನಂದ, ನಂದೀಶ್, ಧನಂಜಯ, ನರಸಿಂಹಾಚಾರ್, ಶಿವಲಿಂಗಯ್ಯ ಇತರರಿದ್ದರು.

Share This Article

Spirituality: ಇರುವೆಗಳಿಗೆ ಆಹಾರ ನೀಡಿದರೆ ಶನಿದೇವನ ಪ್ರಭಾವ ಇರುವುದಿಲ್ಲವೇ?

Spirituality: ನಮ್ಮಲ್ಲಿರುವ ವಸ್ತು ಅಥವಾ ಯಾವುದೇ ಪದಾರ್ಥವನ್ನು ಇಲ್ಲದವರಿಗೆ ದಾನ ಮಾಡಿದರೆ ದೇವರ ಅನುಗ್ರಹ ಸದಾ…

2025ರಲ್ಲಿ ಸಾಲದ ಸುಳಿಗೆ ಸಿಲುಕಲಿದ್ದಾರಂತೆ ಈ 3 ರಾಶಿಯವರು!? ಹಣಕಾಸಿನ ವಿಚಾರದಲ್ಲಿ ಬಹಳ ಎಚ್ಚರ | Money

Money : ಸಾಮಾನ್ಯವಾಗಿ ನಮ್ಮ ನಡುವೆ ಜಾತಕವನ್ನು ನಂಬುವಂತಹ ಅನೇಕ ಜನರಿದ್ದಾರೆ. ಅದೇ ರೀತಿ ನಂಬದವರು…

30 ನೇ ವಯಸ್ಸಿನಲ್ಲಿಯೇ ಕೂದಲು ಬಿಳಿ ಬಣ್ಣಕ್ಕೆ ತಿರುಗುತ್ತಿದೆಯೇ? White Hair ಆಗಿದ್ರೆ ಇಲ್ಲಿದೆ ಉಪಯುಕ್ತ ಮಾಹಿತಿ

White Hair : ಇಂದಿನ ಕಾಲದಲ್ಲಿ ಜನರ ಕೂದಲು ಚಿಕ್ಕ ವಯಸ್ಸಿನಲ್ಲೇ ಬೆಳ್ಳಗಾಗುತ್ತಿದೆ. ಇನ್ನು ಕೆಲವರು…