More

    ಸೋಂಕಿತರ ಸೇವೆಗೆ ಬರಲಿದೆ ಬಿಜೆಪಿ ಕಾರ್ಯಕರ್ತರ ದಂಡು!

    ಬೆಂಗಳೂರು: ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿರುವ ಕೋವಿಡ್ 19 ನಿಯಂತ್ರಣಕ್ಕೆ ಟೊಂಕಕಟ್ಟಿ ನಿಂತಿರುವ ಬಿಜೆಪಿ ಕಾರ್ಯಕರ್ತರು, ಇನ್ನೆರಡು ದಿನಗಳಲ್ಲಿ ಕೊರೊನಾ ವಾರಿಯರ್ ಗಳಾಗಿ ನಗರದ ಪ್ರತಿ ವಾರ್ಡುಗಳಲ್ಲಿ ಜನ ಸೇವೆಗೆ ಮುಂದಾಗಲಿದ್ದಾರೆ.

    ಬೆಂಗಳೂರಿನಲ್ಲಿ ಭಾನುವಾರ ಮಲ್ಲೇಶ್ವರ ಹಾಗೂ ಹೆಬ್ಬಾಳ ವಿಧಾನಸಭಾ ಕ್ಷೇತ್ರಗಳ ಬಿಜೆಪಿ ಕಾರ್ಯಕರ್ತರ ವರ್ಚುವಲ್ ರಾಲಿಯನ್ನು ಉದ್ದೇಶಿಸಿ ಮಾತನಾಡಿದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ, ಪ್ರತಿವಾರ್ಡ್ ನಲ್ಲಿಯೂ ಆರೋಗ್ಯವಂತ 50 ಕಾರ್ಯಕರ್ತರು ಈ ಸೇವಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಅವೆರಲ್ಲರಿಗೂ ಸೂಕ್ತ ತರಬೇತಿ ಹಾಗೂ ಹಾಫ್ ಪಿಪಿಎ ಕಿಟ್ಟುಗಳನ್ನು ನೀಡಿ ನಿಯೋಜಿಸಲಾಗುವುದು ಎಂದರು. ಇದನ್ನೂ ಓದಿಅಪ್ಪ-ಅಮ್ಮನಿಗೂ ಸೋಂಕು, 17 ದಿನದ ಕಂದನಿಗೆ ವೈದ್ಯರ ಕಣ್ಣೀರ ವಿದಾಯ!

    ಇನ್ನೆರಡು ದಿನಗಳಲ್ಲಿ ಕಾರ್ಯಕರ್ತರ ಹೆಸರುಗಳನ್ನು ಬಿಬಿಎಂಪಿ ನೋಂದಾಯಿಸಿಕೊಳ್ಳಲಿದೆ. ಕಾರ್ಯಕರ್ತರು ಸ್ವ-ಇಚ್ಚೆಯಿಂದ ಹೆಸರು ನೋಂದಾಯಿಸಿಕೊಳ್ಳಬೇಕು. ಅವರವರ ವಾರ್ಡ್ ನ ಪ್ರತಿ ಪ್ರದೇಶದ ಮಾಹಿತಿಯ ಜತೆಗೆ ಸೋಂಕಿತರನ್ನು ಗುರುತಿಸುವುದು, ಅವರನ್ನು ಪ್ರಾಥಮಿಕ ಹಂತದ ತಪಾಸಣೆಗೆ ಕಳಿಸುವುದು, ಆಸ್ಪತ್ರೆ ಇಲ್ಲವೇ ಹೋಮ್ ಕೇರ್ ನಲ್ಲೇ ಅವರಿಗೆ ಸೂಕ್ತ ಚಿಕಿತ್ಸೆ ಕೊಡಿಸುವುದೂ ಸೇರಿದಂತೆ ಎಲ್ಲ ಸೇವೆಗಳನ್ನು ಮಾಡಬೇಕಾಗುತ್ತದೆ.

    ಎಲ್ಲಿ ಸೋಂಕು ಹೆಚ್ಚು ಹರಡುತ್ತಿದೆ ಎಂಬುದನ್ನು ಗುರುತಿಸಬೇಕು. ಪಾಲಿಕೆಗೆ ತಕ್ಷಣ ಮಾಹಿತಿ ನೀಡುವುದರ ಜತೆ, ಜನರು ಮತ್ತು ಪಾಲಿಕೆಯ ನಡುವೆ ಕೊಂಡಿಯಾಗಿ ಕೆಲಸ ಮಾಡಬೇಕು. ಜನಸಾಂದ್ರತೆ ಇರುವ ಪ್ರದೇಶಗಳಲ್ಲಿ ಸೋಂಕು ಸಹಜವಾಗಿಯೇ ಹೆಚ್ಚಾಗಿರುತ್ತದೆ. ಅದನ್ನು ಕಡಿಮೆ ಮಾಡಲು ನಮ್ಮ ಕಾರ್ಯಕರ್ತರ ಪಡೆ ಬಿಬಿಎಂಪಿಗೆ ಹೆಗಲು ಕೊಟ್ಟು ಕೆಲಸ ಮಾಡಬೇಕು. ಹೋಮ್ ಕೇರ್ ವ್ಯವಸ್ಥೆಯನ್ನು ಯಶಸ್ವಿಗೊಳಿಸಬೇಕು. ಇನ್ನು ಕನಿಷ್ಠ 4 ತಿಂಗಳಾದರೂ ಈ ಸಮಸ್ಯೆ ಇರುತ್ತದೆ. ಅಷ್ಟೂ ದಿನಗಳ ಕಾಲ ನಿಸ್ವಾರ್ಥವಾಗಿ ಜನಸೇವೆ ಮಾಡಬೇಕು ಎಂದರು.

    ಇದನ್ನೂ ಓದಿ: ನನ್ನ ಮಗ ಶರಣಾಗದಿದ್ದರೆ ಕೊಂದು ಬಿಡಿ ಎಂದಿದ್ದ ದುಬೆ ತಾಯಿ ಈಗ ಪೊಲೀಸರ ವಿರುದ್ಧ ತಿರುಗಿಬಿದ್ದಿದ್ದೇಕೆ?

    ಕಾರ್ಯಕ್ರಮದಲ್ಲಿ ಮಾತನಾಡಿದ ಹೆಬ್ಬಾಳದ ಮಾಜಿ ಶಾಸಕ ಹಾಗೂ ವಿಧಾನ ಪರಿಷತ್ ಸದಸ್ಯ ನಾರಾಯಣ ಸ್ವಾಮಿ, ಹೆಬ್ಬಾಳ ಕ್ಷೇತ್ರದಿಂದ ಕರೋನಾ ವಾರಿಯರುಗಳಾಗಿ ಕೆಲಸ ಮಾಡಲು 300ಕ್ಕೂ ಹೆಚ್ಚು ಕಾರ್ಯಕರ್ತರು ಸಿದ್ಧವಾಗಿದ್ದಾರೆ. ಅಗತ್ಯಬಿದ್ದರೆ ಮತ್ತಷ್ಟು ಕಾರ್ಯಕರ್ತರು ಈ ಮಹಾ ಕಾರ್ಯಕ್ಕೆ ಕೈಜೋಡಿಸಲಿದ್ದಾರೆ ಎಂದರು. ಬೆಂಗಳೂರು ಉತ್ತರ ಜಿಲ್ಲೆಯ ಬಿಜೆಪಿ ಆಧ್ಯಕ್ಷ ನಾರಾಯಣ ಗೌಡ ಸೇರಿದಂತೆ ಅನೇಕ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

    ಹಣಕಾಸು ಸಚಿವೆಗೆ ವಿಷಕಾರಿ ಹಾವು ಎಂದ ಸಂಸದನ ವಿರುದ್ಧ ಬಿಜೆಪಿ ಕಿಡಿ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts