More

    ನಮ್ಮತನ ಉಳಿಸಿಕೊಳ್ಳುವುದು ಬಿಜೆಪಿ ಉದ್ದೇಶ

    ಬೀಳಗಿ: ರಾಜ್ಯದಲ್ಲಿ 140 ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದು ಮತ್ತೆ ಅಧಿಕಾರ ಹಿಡಿಯಲಿದೆ. ನಮ್ಮತನ ಉಳಿಸಿಕೊಳ್ಳುವ ಉದ್ದೇಶವನ್ನು ಬಿಜೆಪಿ ಹೊಂದಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬರುವುದು ನಿಶ್ಚಿತ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

    ತಾಲೂಕಿನ ಸುನಗ ಗ್ರಾಮದಲ್ಲಿ ಬುಧವಾರ ಬೀಳಗಿ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚಿವ ಮುರುಗೇಶ ನಿರಾಣಿ ಪರವಾಗಿ ರೋಡ್ ಶೋ ಮಾಡಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

    ರಾಜ್ಯದಲ್ಲಿ ಗೋಹತ್ಯೆ ಮಾಡುವ ಕಾಂಗ್ರೆಸ್ ಸರ್ಕಾರ ಬರಬಾರದು. ಬಿಜೆಪಿ ಸರ್ಕಾರ ಬರಲು ಅವಕಾಶ ಕಲ್ಪಿಸಬೇಕು. ರಾಜ್ಯದ ವಿವಿಧ ಸಮುದಾಯ, ಮಠ-ಮಂದಿರಗಳ ಅಭಿವೃದ್ಧಿಗೆ 118 ಕೋಟಿ ರೂ. ನೀಡಿದೆ ಎಂದರು.

    ಸಚಿವ ಮುರುಗೇಶ ನಿರಾಣಿ ಈಗಾಗಲೇ ಬೀಳಗಿ ಮತಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅನುದಾನ ತಂದು 1.27 ಲಕ್ಷ ಎಕರೆ ಭೂಮಿಯನ್ನು ನೀರಾವರಿ ಮಾಡಿದ್ದಾರೆ. ಜೊತೆಗೆ ಮತಕ್ಷೇತ್ರದ ಪ್ರತಿಯೊಂದು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ 320 ಕೋಟಿ ರೂ. ಗಳಲ್ಲಿ ಸಬ್ ಕೆವಿ ಸ್ಟೇಷನ್ ನಿರ್ಮಾಣ, ಮತಕ್ಷೇತ್ರದ ಪ್ರತಿಯೊಂದು ಗ್ರಾಮದಲ್ಲಿ ದೇವಸ್ಥಾನಗಳ ಅಭಿವೃದ್ಧಿಗೆ ಅನುದಾನ, ಶಿಕ್ಷಣ, ಕುಡಿಯುವ, ನೀರು, ರಸ್ತೆ, ಆರೋಗ್ಯ ಸಮುದಾಯ ಭವನಗಳ ನಿರ್ಮಾಣ, ಸಿಸಿ ರಸ್ತೆ, ಗಂಗಾ ಕಲ್ಯಾಣ ಬೋರ್‌ವೆಲ್ ಹಾಗೂ ಇನ್ನಿತರ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದೆ. ಮತ್ತೆ ಈ ಚುನಾವಣೆಯಲ್ಲಿ 35 ಸಾವಿರ ಮತಗಳ ಅಂತರದಿಂದ ಗೆಲ್ಲಿಸುವ ಕೆಲಸವನ್ನು ಪ್ರತಿಯೊಬ್ಬರೂ ಮಾಡಬೇಕು. ನಿರಾಣಿ ಅವರ ಗೆಲುವಿನ ವಿಜಯೋತ್ಸವ ಕಾರ್ಯಕ್ರಮಕ್ಕೆ ನಾನು ಸುನಗ ಗ್ರಾಮಕ್ಕೆ ಬಂದು ಪಾಲ್ಗೊಳ್ಳುತ್ತೇನೆ ಎಂದರು.

    ಬಿಜೆಪಿ ಅಭ್ಯರ್ಥಿ, ಸಚಿವ ಮುರುಗೇಶ ನಿರಾಣಿ ಮಾತನಾಡಿ, ಬೀಳಗಿ ಮತಕ್ಷೇತ್ರದಲ್ಲಿ ಪ್ರತಿಯೊಂದು ಸಮುದಾಯದ ಕಲ್ಯಾಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನು ಪ್ರತಿಯೊಂದು ಲಾನುಭವಿಗಳ ಮನೆ ಬಾಗಿಲಿಗೆ ಮುಟ್ಟಿಸಲಾಗಿದೆ. ಬೀಳಗಿ ಕ್ಷೇತ್ರವನ್ನು ಒಂದು ಮಾದರಿ ಕ್ಷೇತ್ರವನ್ನಾಗಿ ಮಾಡುವ ಗುರಿ ನನ್ನದಾಗಿದೆ. ಮತ್ತೊಮ್ಮೆ ನನಗೆ ಮತಗಳನ್ನು ನೀಡುವ ಮೂಲಕ ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದರು.

    ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ ಮಾತನಾಡಿ, ಜಾತಿ, ಮತ ಬದಿಗಿಟ್ಟು ರಾಜ್ಯದ ಸಮೃದ್ಧ ಅಭಿವೃದ್ಧಿಗಾಗಿ ಬಿಜೆಪಿ ಅಭ್ಯರ್ಥಿ ಮುರುಗೇಶ ನಿರಾಣಿ ಅವರಿಗೆ ಮತ ನೀಡಿ ಎಂದರು.

    ವಿಧಾನ ಪರಿಷತ್ ಸದಸ್ಯ ಎಚ್.ಆರ್.ನಿರಾಣಿ, ಬಿಹಾರ ಶಾಸಕ ರಾಣಾ ರಣಧೀರ ಸಿಂಗ್, ಬಿಜೆಪಿ ಮಂಡಳದ ಅಧ್ಯಕ್ಷ ಈರಣ್ಣ ಗಿಡ್ಡಪ್ಪಗೋಳ, ಎಂ.ಎಂ.ಶಂಭೋಜಿ, ಮಲ್ಲಿಕಾರ್ಜುನ ಅಂಗಡಿ, ಶ್ರೀಶೈಲ ಯಂಕಂಚಿಮಠ, ಬಸವರಾಜ ಕೊಣ್ಣೂರ, ಸಿದ್ದಪ್ಪ ಕಡಪಟ್ಟಿ, ಈರಣ್ಣ ಹಿರೇಗೌಡರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts