ನೀರುಮಾರ್ಗ ಉಪಚುನಾವಣೆ ಗೆಲ್ಲಲು ಬಿಜೆಪಿ ಕಾರ್ಯತಂತ್ರ

Gur_By election
Published on

ಗುರುಪುರ: ನೀರುಮಾರ್ಗ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೊಂಡಂತಿಲ ಗ್ರಾಮ ಸಮಿತಿಯ ಬೂತ್ ಸಂಖ್ಯೆ 234ರ ಉಪಚುನಾವಣೆ ಹಿನ್ನೆಲೆಯಲ್ಲಿ ಬೂತ್ ಕಾರ್ಯಕರ್ತ ಅನೂಷ್ ಮನೆಯಲ್ಲಿ ಮಂಗಳವಾರ ಶಾಸಕ ಡಾ.ಭರತ್ ಶೆಟ್ಟಿ ಮತ್ತು ಮಂಡಲ ಅಧ್ಯಕ್ಷ ರಾಜೇಶ್ ಕೊಟ್ಟಾರಿ ಉಪಸ್ಥಿತಿಯಲ್ಲಿ ಮಹತ್ವದ ಸಭೆ ನಡೆಸಲಾಯಿತು.

ಈ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಯ ಗೆಲುವಿನ ಕಾರ್ಯತಂತ್ರದ ಬಗ್ಗೆ ಕಾರ್ಯಕರ್ತರೊಂದಿಗೆ ಚರ್ಚಿಸಿದ ಶಾಸಕರು, ಚುನಾವಣೆಯಲ್ಲಿ ಎಲ್ಲ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ವಾಡಬೇಕು ಎಂದು ವಿನಂತಿಸಿದರು.

ಮಂಡಲ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಚ್ಚನಾಡಿ, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಕಮಲಾಕ್ಷ ತಲ್ಲಿವಾರು, ಕಾರ್ಯದರ್ಶಿ ಅಜಿತ್ ಶೆಟ್ಟಿ, ಜಿಲ್ಲಾ ಸಮಿತಿ ಸದಸ್ಯ ಗೋಕುಲದಾಸ್ ಶೆಟ್ಟಿ, ಮಹಾಶಕ್ತಿ ಕೇಂದ್ರದ ಸದಸ್ಯ ಕಿಶೋರ್ ಉಗ್ಗಕೋಡಿ, ಗ್ರಾಮ ಸಮಿತಿ ಅಧ್ಯಕ್ಷ ಯಶ್ವಿನ್ ಕುಂದರ್, ಕಾರ್ಯದರ್ಶಿ ಸಂಜೀವ ಪೂಜಾರಿ, ಬೂತ್ ಅಧ್ಯಕ್ಷ ಮನೋಹರ ಸತ್ತಿಕಲ್, ಪಂಚಾಯಿತಿ ಸದಸ್ಯರು ಹಾಗೂ ಪಕ್ಷ ಕಾರ್ಯಕರ್ತರು ಉಪಸ್ಥಿತರಿದ್ದರು. ಉಪಚುನಾವಣೆ ನವಂಬರ್ 23ರಂದು ನಡೆಯಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net