ವಿಮಾನದ ತುರ್ತು ನಿರ್ಗಮನ ದ್ವಾರ ತೆರೆದ ಸಂಸದ ತೇಜಸ್ವಿ ಸೂರ್ಯ; ಶುರುವಾಯ್ತು ಹೊಸ ವಿವಾದ…

Indigo
Published on

ಚೆನ್ನೈ: ಬೆಂಗಳೂರು ದಕ್ಷಿಣ ಲೋಕಸಭಾ ಸಂಸದ ತೇಜಸ್ವಿ ಸೂರ್ಯ ಅವರಿಂದ ವಿಮಾನದೊಳಗೆ ಅಚಾತುರ್ಯ ಸಂಭವಿಸಿದೆ. ಯಾವುದೇ ಅನುಮತಿ ಇಲ್ಲದೆ ತುರ್ತು ನಿರ್ಗಮನ ಬಾಗಿಲನ್ನು ತೆರೆದಿದ್ದಾರೆ ಎಂದು ಸಂಸದರ ವಿರುದ್ಧ ಆರೋಪಿಸಲಾಗಿದೆ.

ಸಂಸದ ತೇಜಸ್ವಿ ಸೂರ್ಯ ಕಳೆದ ಡಿಸೆಂಬರ್ 10 ರಂದು ಚೆನ್ನೈ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಆದರೆ ಇದ್ಯಾವುದರ ಬಗ್ಗೆಯೂ ಮಾಹಿತಿ ಹೊರಬಿಟ್ಟುಕೊಡದ ಇಂಡಿಗೋ ವಿಮಾನ ಸಂಸ್ಥೆಯ ವಿರುದ್ಧು ಸಹ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಘಟನೆಯನ್ನು ಚೆನ್ನೈ ವಿಮಾನ ನಿಲ್ದಾಣದ ಅಧಿಕಾರಿಗಳು ಮತ್ತು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ಡಿಜಿಸಿಎ ಇದನ್ನು ದೃಢಪಡಿಸಿದೆ.

ವಿಮಾನಯಾನ ನಿಯಮ ಉಲ್ಲಂಘನೆ ಮಾಡಿದ್ದಕ್ಕಾಗಿ ಸಂಸದ ತೇಜಸ್ವಿ ಸೂರ್ಯ ಅವರಲ್ಲಿ ಕ್ಷಮೆಯಾಚಿಸಲು ಕೋರಲಾಗಿದ್ದು, ಲಿಖಿತವಾಗಿ ಪತ್ರವನ್ನು ಇಂಡಿಯೋ ವಿಮಾನ ಸಂಸ್ಥೆ ಮೂಲಗಳು ತಿಳಿಸಿವೆ.

ಘಟನೆಯ ಬಗ್ಗೆ ಪ್ರತ್ಯಕ್ಷದರ್ಶಿಯೊಬ್ಬರು ಪ್ರತಿಕ್ರಿಯಿಸಿರುವುದು ವರದಿಯಾಗಿದ್ದು, ವಿಮಾನ ಹಾರಾಟಕ್ಕೂ ಮುನ್ನ ಅಗತ್ಯ ಸುರಕ್ಷತಾ ಕ್ರಮಗಳ ಬಗ್ಗೆ ಸೂಚನೆ ನೀಡಲಾಗುತ್ತಿತ್ತು. ಈ ವೇಳೆ ತೇಜಸ್ವಿ ಸೂರ್ಯ ತುರ್ತು ನಿರ್ಗಮನದ ಬಳಿ ಕುಳಿತಿದ್ದರು. ಎಲ್ಲವನ್ನೂ ಆಲಿಸಿದ ತೇಜಸ್ವಿ ಸೂರ್ಯ, ಇದಕ್ಕಿದ್ದಂತೆ ತುರ್ತು ನಿರ್ಗಮನದ ಬಾಗಿಲನ್ನು ತೆರೆದಿದ್ದಾರೆ. ತಕ್ಷಣ ಸಿಬ್ಬಂದಿಗಳು ಕೆಳಗಿಳಿಸಿ, ಬಸ್ಸಿನಲ್ಲಿ ಕುಳಿತುಕೊಳ್ಳುವಂತೆ ಸೂಚಿಸಿದರು ಎಂದಿದ್ದಾರೆ.

ಸಂಸದ ತೇಜಸ್ವಿ ಸೂರ್ಯ ವಿಮಾನದೊಳಗೆ ಮಾಡಿಕೊಂಡ ಅವಾಂತರದಿಂದ ವಿಮಾನ ಮತ್ತೆ ಹಾರಾಟ ನಡೆಸಲು ಸುಮಾರು ಎರಡು ಗಂಟೆಯಷ್ಟು ತಡವಾಗಿದೆ. ಹೀಗಾಗಿ ಲಿಖಿತ ಪತ್ರದ ಮೂಲಕ ತೇಜಸ್ವಿ ಸೂರ್ಯ ಕ್ಷಮೆಯಾಚಿಸಿದ್ದಾರೆ ಎನ್ನಲಾಗಿದೆ.

ಸದ್ಯ ತೇಜಸ್ವಿ ಸೂರ್ಯ ಮಾಡಿರುವ ಎಡವಟ್ಟನ್ನು ರಾಜ್ಯ ಕಾಂಗ್ರೆಸ್ ಲೇವಡಿ ಮಾಡಿದೆ. ಆಟ ಢುವ ಮಕ್ಕಳಿಗೆ ಯಜಮಾನಿಕೆ ಕೊಟ್ಟರೆ ಏನಾಗಲಿದೆ ಎಂಬ ಮಾತಿಗೆ ತೇಜಸ್ವಿ ಸೂರ್ಯ ನಿದರ್ಶನವಾಗಿದ್ದಾರೆ. ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟವಾಡಿದ್ದೇಕೆ ಎಂದು ಪ್ರಶ್ನಿಸಿದೆ. ಅಲ್ಲದೆ ದೋಸೆ ತಿನ್ನುವ ಚಪಲ ಹೆಚ್ಚಾಗಿ "ಎಮರ್ಜೆನ್ಸಿ ಎಕ್ಸಿಟ್" ಅಗಲು ತೇಜಸ್ವಿ ಸೂರ್ಯ ಹೊರಟಿದ್ದರೇ ಎಂದು ಕಾಲೆಳೆದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net