More

    ನನ್ನನ್ನು ಸಚಿವನನ್ನಾಗಿ ಮಾಡದ ಮುಖ್ಯಮಂತ್ರಿಗಳಿಗೆ ಅಭಿನಂದನೆಗಳು; ಸಿಎಂ ಸಿದ್ದರಾಮಯ್ಯ ವಿರುದ್ಧ ಬಿ.ಕೆ. ಹರಿಪ್ರಸಾದ್​ ವಾಗ್ದಾಳಿ

    ಬೆಂಗಳೂರು: ತಮನ್ನು ಸಚಿವನನ್ನಾಗಿ ಮಾಡಲಿಲ್ಲ ಎಂಬ ಕಾರಣಕ್ಕೆ ಸ್ವಪಕ್ಷ ಕಾಂಗ್ರೆಸ್​ ವಿರುದ್ದ ತೀವ್ರ ಅಸಮಾಧಾನ ಹೊಂದಿರುವ ವಿಧಾನಪರಿಷತ್​ ಸದಸ್ಯ ಬಿ.ಕೆ. ಹರಿಪ್ರಸಾದ್​ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರೇಳದೆ ಬಹಿರಂಗವಾಗಿಯೇ ವಾಗ್ದಾಳಿ ನಡೆಸಿದ್ದಾರೆ.

    ಸಮಾನ ಮನಸ್ಕರ ಪೂರ್ವಭಾವಿ ಸಭೆಯನ್ನುದ್ಧೇಶಿಸಿ ಮಾತನಾಡಿದ ಹರಿಪ್ರಸಾದ್​ ನನ್ನನ್ನು ಮಂತ್ರಿ ಮಾಡದಿದ್ದಕ್ಕೆ ಮುಖ್ಯಮಂತ್ರಿಗಳಿಗೆ ಅಭಿನಂದನೆಗಳು ಎಂದು ವ್ಯಂಗ್ಯಭರಿತವಾಗಿ ತ,ಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.

    ನಾನು ಕಾಂಗ್ರೆಸ್​ ಸರ್ಕಾರದಲ್ಲಿ ಸಚಿವನಾಗಿದ್ದರೆ ಇಂದು ಸಮುದಾಯದವರ ಜೊತೆ ಇರಲು ಸಾಧ್ಯವಾಗುತ್ತಿರಲಿಲ್ಲ. ಮುಂದಿನ ದಿನಗಳಲ್ಲಿ ನಾನು ಮುಖ್ಯಮಂತ್ರಿ ಅಥವಾ ಮಂತ್ರಿಯಾಗುತ್ತೇನೆ ಎಂದು ಸಮುದಾಯದವರು ಯಾರು ಭ್ರಮೆಯಲ್ಲಿರಬೇಡಿ. ನಮ್ಮ ಸಮುದಾಯದವರು ಕರ್ನಾಟಕದಲ್ಲಿ ಮಾತ್ರ ರಾಷ್ಟ್ರದ ಎಲ್ಲಾ ಕಡೆ ಇದ್ದಾರೆ.

    ಇದನ್ನೂ ಓದಿ: G-20 ಶೃಂಗಸಭೆ; ಭಾರತಕ್ಕೆ ಆಗಮಿಸಿದ ಜೋ ಬೈಡೆನ್​, ಪ್ರಧಾನಿ ಮೋದಿ ಜತೆ ಅತ್ಯಾಧುನಿಕ ತಂತ್ರಜ್ಞಾನಗಳ ಕುರಿತು ಚರ್ಚೆ

    ದೇವರಾಜ್​ ಅರಸು ಚಿಂತನೆ ಇರಬೇಕು

    ನಮ್ಮ ಸಮುದಾಯ ಅತಂತ್ರವಾಗಿದೆ. ಇದು ಅತಂತ್ರ ಸಮುದಾಯದ ವೇದಿಕೆ. ಚುನಾವಣೆ ಬರುವಾಗ ಘೋಷಣೆ ಮಾಡಿದ್ದೇ ಮಾಡಿದ್ದು. ಅಧಿಕಾರಕ್ಕೆ ಬರಲು ಏನೇನೋ ಭರವಸೆ ನೀಡಿದರು. ಆದರೆ ಅಧಿಕಾರಕ್ಕೆ ಬಂದ ಮೇಲೆ ಅತಿ ಹಿಂದುಳಿದ ವರ್ಗಗಳು ನೆನಪಾಗುವುದಿಲ್ಲ. ಅಧಿಕಾರ ಸಿಕ್ಕ ತಕ್ಷಣವೇ ಸಮುದಾಯಕ್ಕೆ ಕೊಡಬೇಕಾಗಿರುವುದು ಇನ್ನೂ ಸಿಕ್ಕಿಲ್ಲ. ಸಮುದಾಯದ ಶಕ್ತಿ ಏನೂ ಎನ್ನುವುದನ್ನು ನಾವೇ ಇನ್ನೂ ತಿಳಿದುಕೊಂಡಿಲ್ಲ ಎಂದು ಪರೋಕ್ಷವಾಗಿ ಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

    ಹಿಂದಿನ ಯಾವ ಮುಖ್ಯಮಂತ್ರಿಗಳೂ ಜಾತಿ ರಾಜಕಾರಣ ಮಾಡಲಿಲ್ಲ. ಕಾಗೋಡು ತಿಮ್ಮಪ್ಪ, ಬಂಗಾರಪ್ಪ ಜಾತಿ ರಾಜಕಾರಣ ಮಾಡಲಿಲ್ಲ. ಪಂಚೆ ಹಾಕಿಕೊಂಡು ವಾಚ್ ಕಟ್ಟಿಕೊಂಡು ಖಾಕಿ ಚಡ್ಡಿ ಹಾಕೊಂಡು, ಸಮಾಜವಾದಿ ಅಂತಾ ಹೇಳಿದರೆ ಆಗುವುದಿಲ್ಲ. ನಾನು ಮೂರು ಬಾರಿ ಸೋತಿರಬಹುದು, ಆದರೆ ಇನ್ನೂ ಸತ್ತಿಲ್ಲ. ಸೈಟು ಕಳ್ಳತನ ಮಾಡಿ ಮಾರುವವನು ನನ್ನ ಬಗ್ಗೆ ಮಾತನಾಡುತ್ತಾನೆ. ಆದರೆ ಸ್ವಾಭಿಮಾನ ಬಿಟ್ಟು ಸಹನೆ ಕಳೆದುಕೊಂಡವನಲ್ಲ ನಾನು. ದೇವರಾಜ ಅರಸು ಕಾರಿನಲ್ಲಿ ಕುಳಿತರೆ ದೇವರಾಜ ಅರಸು ಆಗಲ್ಲ. ದೇವರಾಜ್​ ಅರಸು ಚಿಂತನೆ ಇರಬೇಕು ಎಂದು ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts