More

    ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಚಿತ್ರಕಲಾವಿದ ಬಿ.ಕೆ.ಎಸ್​. ವರ್ಮಾ ನಿಧನ

    ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಚಿತ್ರಕಲಾವಿದ ಬಿ.ಕೆ.ಎಸ್​. ವರ್ಮಾ ಅವರು ಇಂದು (ಫೆ.6) ಕೊನೆಯುಸಿರೆಳೆದಿದ್ದಾರೆ.

    ವರ್ಮಾ ಅವರು ಕಳೆದ ಮೂರು ತಿಂಗಳಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗ್ಗೆ 8.20ಕ್ಕೆ ಹೆಬ್ಬಾಳದ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವರ್ಮಾ ಅವರಿಗೆ 76 ವರ್ಷ ವಯಸ್ಸಾಗಿತ್ತು. ಪರಿಸರ, ಸಾಮಾಜಿಕ ಸಮಸ್ಯೆಗಳ ಬಗ್ಗೆ ಚಿತ್ರ ಬರೆಯುವ ಮೂಲಕ ಎಲ್ಲರ ಗಮನಸೆಳೆದಿದ್ದರು.

    ಬಿಕೆಎಸ್ ವರ್ಮಾ ಅವರಿಗೆ ಬೆಂಗಳೂರು ವಿವಿಯಿಂದ 2011ರಲ್ಲಿ ಗೌರವ ಡಾಕ್ಟರೇಟ್ ನೀಡಲಾಗಿತ್ತು. ಅತ್ತಿಬೆಲೆ ತಾಲೂಕಿ ಕರ್ನೂರಿನಲ್ಲಿ 1949ರಲ್ಲಿ ಜನಿಸಿದರು. 6 ನೇ ವಯಸ್ಸಿಗೆ ಹವ್ಯಾಸವಾಗಿ ರೇಖಾಚಿತ್ರ ಪ್ರಾರಂಭಿಸಿದರು. ಕಲಾ ಪ್ರಪಂಚಕ್ಕೆ ವರ್ಮಾ ಎಂದು ಪರಿಚಿತರಾಗಿರುವ ಅವರ ಬಾಲ್ಯದ ಹೆಸರು, ಬುಕ್ಕಸಾಗರ ಕೃಷ್ಣಯ್ಯ ಶ್ರೀನಿವಾಸ.

    ಒಮ್ಮೆ ಮೈಸೂರಿನ ಜಗನ್ಮೋಹನ ಅರಮನೆಯಲ್ಲಿ ರಾಜಾ ರವಿವರ್ಮಾ ರವರ ಪೇಂಟಿಂಗ್ ಗಳನ್ನು ವೀಕ್ಷಿಸುತ್ತಿದ್ದಿದ್ದಾಗ ತನ್ಮಯರಾಗಿ ವರ್ಮಾ ಎಂಬ ಹೆಸರನ್ನು ತಮ್ಮ ಹೆಸರಿನ ಜೊತೆಗೆ ಸೇರಿಸಿಕೊಂಡನಂತರ ಅವರ ಜೀವನದ ದಿಶೆಯೇ ಬದಲಾಯಿತಂತೆ. ಆ ದಿನಗಳಲ್ಲಿ ಬ್ಲೇಡಿನಿಂದ, ಉಗುರಿನಿಂದ, ಎಂಬಾಸಿಂಗ್, ಥ್ರೇಡ್ ಪೇಂಟಿಂಗ್. ಮಾಡಿ ಹಣಗಳಿಸಿದ್ದರು. (ದಿಗ್ವಿಜಯ ನ್ಯೂಸ್​)

    ಬೆಂಗಳೂರು: ವಿಮಾನವೇರಲು ವಿಳಂಬವಾಯ್ತು ಅಂತಾ ಬಾಂಬ್​ ಬೆದರಿಕೆ ಹಾಕಿ ರಂಪಾಟ ಮಾಡಿದ ಮಹಿಳೆ ಜೈಲುಪಾಲು!

    ಹೆಲ್ಮೆಟ್​ ಧರಿಸದೇ ಸ್ಕೂಟರ್​ನಲ್ಲಿ ಕ್ಷೇತ್ರ ಪರ್ಯಟನೆ: ಕ್ರಮ ವಹಿಸದ ಟ್ರಾಫಿಕ್​ ಪೊಲೀಸ್​, ಸಾರ್ವಜನಿಕರ ಕಿಡಿ

    ಜಾತಿಗಳನ್ನು ಹುಟ್ಟುಹಾಕಿದ್ದು ಪೂಜಾರಿಗಳೇ ಹೊರತು ದೇವರಲ್ಲ: RSS ಮುಖ್ಯಸ್ಥ ಮೋಹನ್​ ಭಾಗವತ್ ಹೇಳಿಕೆ​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts