Friday, 14th December 2018  

Vijayavani

ಚಾಮರಾಜನಗರದಲ್ಲಿ ವಿಷವಾದ ಮಾರಮ್ಮನ ಪ್ರಸಾದ- ನಾಲ್ವರ ಸಾವು-40ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ, ಜಿಲ್ಲಾಧಿಕಾರಿ ಭೇಟಿ        ರಾಜಸ್ಥಾನ ಸಿಎಂ ಆಗಿ ಆಶೋಕ್ ಗೆಹ್ಲೋಟ್, ಯುವ ನಾಯಕ ಸಚಿನ್ ಪೈಲಟ್​​ಗೆ ಡಿಸಿಎಂ ಪಟ್ಟ- ಕಾಂಗ್ರೆಸ್​ನಿಂದ ಅಧಿಕೃತ ಘೋಷಣೆ        ಚೆನ್ನೈನ ರೇಲಾ ಆಸ್ಪತ್ರೆಗೆ ಭೇಟಿ ನೀಡಿ ಸಿದ್ಧಗಂಗಾ ಶ್ರೀಗಳ ಆರೋಗ್ಯ ವಿಚಾರಿಸಿದ ಬಿಎಸ್​ವೈ- ಸಿಎಂ ಎಚ್​ಡಿಕೆ ಚೆನ್ನೈಗೆ ಪ್ರಯಾಣ        ಭದ್ರತೆಗಾಗಿ ರಫೇಲ್ ಖರೀದಿ-ಸುಪ್ರೀಂಕೋರ್ಟ್ ತೀರ್ಪಿನಿಂದ ಭ್ರಮನಿರಸನ-ರಾಗಾ ವಿರುದ್ಧ ಹಾಲಿ ಮಾಜಿ ರಕ್ಷಣಾ ಸಚಿವರ ಕಿಡಿ        ನಾಲ್ಕು ದಿನದಲ್ಲಿ ಎಲ್ಲ ಸರಿಹೋಗುತ್ತೆ-ಪ್ರಯಾಣಿಕರಿಗೆ ಯಾವುದೇ ಆತಂಕ ಬೇಡ-ಪಿಲ್ಲರ್ ಬಿರುಕಿಗೆ BMRCL ಎಂಡಿ ಸ್ಪಷ್ಟನೆ        ನನಗೂ ಸಚಿವೆಯಾಗುವ ಆಸೆ ಇದೆ- ಅಂತರಂಗ ತೆರೆದಿಟ್ಟ ಲಕ್ಷ್ಮೀ ಹೆಬ್ಬಾಳ್ಕರ್- ಕೈ ಸಚಿವಾಕಾಂಕ್ಷಿಗಳ ಪಟ್ಟಿಗೆ ಈಗ ಹೊಸ ಸೇರ್ಪಡೆ       
Breaking News

ಹೊಂದಾಣಿಕೆ ರಾಜಕೀಯದಿಂದ ಮುಜುಗರ

Sunday, 22.07.2018, 9:44 PM       No Comments

ಅಜ್ಜಂಪುರ: ಪ್ರಸ್ತುತ ಹೊಂದಾಣಿಕೆಯ ರಾಜಕಾರಣ ಸಾಮಾಜಿಕ ಜೀವನದಲ್ಲಿ ಅತ್ಯಂತ ಮುಜುಗರಕ್ಕೆ ಕಾರಣವಾಗಿದೆ ಎಂದು ಮಾಜಿ ಸಭಾಪತಿ, ಚಿತ್ರಕಲಾ ಪರಿಷತ್ ಅಧ್ಯಕ್ಷ ಬಿ.ಎಲ್.ಶಂಕರ್ ಹೇಳಿದರು.

ಅಜ್ಜಂಪುರದಲ್ಲಿ ಭಾನುವಾರ ನೊಳಂಬ ವೀರಶೈವ ಸಮಾಜ ಆಯೋಜಿಸಿದ್ದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಮಾಜದ ಶಾಸಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರಾಜಕಾರಣ ವ್ಯಾಪಾರೀಕರಣಗೊಂಡಿದೆ. ಹಣ, ಜಾತಿ ಲೆಕ್ಕಾಚಾರವೇ ಮೇಲಾಗಿದೆ. ಹಾಗಾಗಿ ನೇರ, ನಿಷ್ಠುರ ನುಡಿಯ ರಾಜಕಾರಣಿಗಳು ತೆರೆಮರೆಗೆ ಸರಿಯುತ್ತಿದ್ದಾರೆ. ಇಂತಹ ಸಂದರ್ಭ ಪ್ರತಿಭಾನ್ವಿತ ಶಾಸಕರನ್ನು ಆಯ್ಕೆ ಮಾಡುವ ಅನಿವಾರ್ಯತೆಯಿದೆ ಎಂದರು.

ಹಳ್ಳಿಗಳು ವೃದ್ಧಾಶ್ರಮಗಳಾಗುತ್ತಿವೆ. ಯುವಕರು ಕೃಷಿಯನ್ನು ತೊರೆದು ನಗರ ಪ್ರದೇಶಗಳತ್ತ ಹೊರಡುತ್ತಿರುವುದು ಮುಂದಿನ ಹಳ್ಳಿಗಳ ಬದುಕಿಗೆ ಮಾರಕವಾಗಲಿದೆ. ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳಿಗೆ ಸಾಕಷ್ಟು ಸೌಲಭ್ಯಗಳು ಇಲ್ಲದಿದ್ದರೂ ನಗರ ಪ್ರದೇಶಗಳ ವಿದ್ಯಾರ್ಥಿಗಳಂತೆ ಉತ್ತಮ ಅಂಕ ಪಡೆಯುತ್ತಿರುವುದು ಸಂತಸದ ವಿಷಯ ಎಂದರು.

ತುಮಕೂರಿನ ಚಿಕ್ಕನಾಯಕನಹಳ್ಳಿ ಶಾಸಕ ಮಾಧುಸ್ವಾಮಿ ಮಾತನಾಡಿ, ರಾಜಕೀಯ ಸಂಪೂರ್ಣ ಹದಗೆಟ್ಟಿದೆ. ಮನುಷ್ಯನ ಉಳಿವು ಮತ್ತು ಬೆಳವಣಿಗೆಗೆ ಒಗ್ಗಟ್ಟಿನ ಜೀವನ ಅವಶ್ಯವಿದೆ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಸಮಾಜವನ್ನು ಉತ್ತಮ ದಾರಿಯಲ್ಲಿ ನಡೆಸುವಂತಾಗಬೇಕು ಎಂದು ಹೇಳಿದರು.

ಬೇಲೂರು ಶಾಸಕ ಲಿಂಗೇಶ್ ಮಾತನಾಡಿ, ಪಾಲಕರು ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡಿ ಉತ್ತಮ ಪ್ರಜೆಗಳನ್ನಾಗಿ ರೂಪಿಸಬೇಕು. ಸಮಾಜದ ಅಭಿವೃದ್ಧಿಗೆ ಶ್ರಮಿಸುವ ವ್ಯಕ್ತಿಗಳನ್ನು ಗುರುತಿಸಿ ಬೆಳೆಸಬೇಕು ಎಂದರು.

Leave a Reply

Your email address will not be published. Required fields are marked *

Back To Top