ರಾಮನಗರ: ಕಾರೊಂದರಲ್ಲಿ ಸ್ಫೋಟ ಸಂಭವಿಸಿ ಅದು ಛಿದ್ರಗೊಂಡು ಹೊತ್ತಿ ಉರಿದಿದ್ದಲ್ಲದೆ, ಅದರಲ್ಲಿದ್ದ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಕರಕಲಾಗಿ ಮೃತಪಟ್ಟಿದ್ದಾರೆ. ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಮರಳೆ ಗವಿಮಠದ ಬಳಿ ಈ ಅನಾಹುತ ಸಂಭವಿಸಿದೆ.
ಸ್ಫೋಟದ ತೀವ್ರತೆಗೆ ಕಾರು ಸಂಪೂರ್ಣವಾಗಿ ಛಿದ್ರಗೊಂಡಿದ್ದು, ದೇಹವು ಹೊರಕ್ಕೆ ಬಿದ್ದಿದೆ. ಶವ ಕೂಡ ಛಿದ್ರಗೊಂಡ ಸ್ಥಿತಿಯಲ್ಲಿದ್ದು, ಮೃತಪಟ್ಟವರನ್ನು ಮಹೇಶ್ ಎಂಬುದಾಗಿ ಗುರುತಿಸಲಾಗಿದೆ. ಸಾವಿಗೀಡಾದವರ ಕುರಿತು ನಿಖರವಾದ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
ಕ್ರಷರ್ನಲ್ಲಿ ಕಲ್ಲು ಸ್ಫೋಟ ಮಾಡಲು ಬಳಸುವ ಜಿಲೆಟಿನ್-ಕೆಮಿಕಲ್ ತೆಗೆದುಕೊಂಡು ಹೋಗುವಾಗ ಈ ಅನಾಹುತ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಸಾತನೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಚಿತ್ರನಟಿಗೆ ಮನೆಯಲ್ಲೇ ತಾಳಿ ಕಟ್ಟಿ ಗಂಡನಂತೆ ನಟಿಸಿದ; ಬಳಿಕ ನಗ-ನಗದಿನೊಂದಿಗೆ ಪರಾರಿಯಾದ ರೌಡಿಯ ಅಣ್ಣ..