ಗುರುದ್ವಾರದಲ್ಲಿ ಸರಣಿ ಸ್ಫೋಟ: ಭಾರತದಿಂದ ತೀವ್ರ ಖಂಡನೆ

Gurudwar
Published on

ಕಾಬೂಲ್​/ನವದೆಹಲಿ: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್​ನಲ್ಲಿರುವ ಗುರುದ್ವಾರದಲ್ಲಿ ಶನಿವಾರ ಸರಣಿ ಸ್ಫೋಟ ಸಂಭವಿಸಿದ್ದು, ಘಟನೆಯನ್ನು ಭಾರತ ತೀವ್ರ ಖಂಡಿಸಿದೆ.

ಸರಣಿ ದಾಳಿ ಜತೆಗೆ ಗುಂಡಿನ ದಾಳಿ ನಡೆಸಲಾಗಿದ್ದು, ಪರಿಸ್ಥಿತಿ ಬಗ್ಗೆ ಸೂಕ್ಷ್ಮವಾಗಿ ಭಾರತ ಗಮನಿಸುತ್ತಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

ದಾಳಿ ವೇಳೆ ಇಬ್ಬರು ಮೃತಪಟ್ಟಿದ್ದಾರೆ ಎಂದು ಅಫ್ಘಾನಿಸ್ತಾನದ ವಿದೇಶಾಂಗ ಸಚಿವಾಲಯದ ವಕ್ತಾರ ಅಬ್ದುಲ್​ ನಫಿ ಟಕೌರ್​ ಮಾಹಿತಿ ನೀಡಿದ್ದಾರೆ. ಶನಿವಾರ ಬೆಳಗ್ಗೆ ಪ್ರಾರ್ಥನೆ ಮಾಡುತ್ತಿದ್ದ ವೇಳೆ ಏಕಾಏಕಿ ದಾಳಿ ನಡೆಸಿದ್ದರಿಂದ ಈ ದುರ್ಘಟನೆ ಸಂಭವಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ದಾಳಿ ವೇಳೆ ಹಲವು ಭಕ್ತರು ಇದ್ದರು, ಕೆಲವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಿನ ಜಾವ 7 ಗಂಟೆಗೆ ದಾಳಿ ನಡೆಸಲಾಗಿದ್ದು, ಸದ್ಯಕ್ಕೆ ಯಾವುದೇ ಸಂಘಟನೆ ಹೊಣೆ ಹೊತ್ತುಕೊಂಡಿಲ್ಲ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net