More

    ರಾಜಕೀಯ ಬಿಟ್ಟು ಜನರ ಸಂಕಷ್ಟಕ್ಕೆ ಸ್ಪಂದಿಸಿ

    ಮಾಲೂರು: ದೇಶಾದ್ಯಂತ ಕರೊನಾ ಸೋಂಕು ಹೆಚ್ಚಾಗಿದ್ದು ಜನಪ್ರತಿನಿಧಿಗಳು ರಾಜಕೀಯ ಮಾಡುವುದನ್ನು ಬಿಟ್ಟು ಪಕ್ಷಾತೀತವಾಗಿ ಜನರ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂದು ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು.

    ಪಟ್ಟಣದ ಎಚ್.ವಿ.ಆರ್.ಸಭಾಭವನದಲ್ಲಿ ಶನಿವಾರ ಬಿಜೆಪಿ ತಾಲೂಕು ಯುವಮೋರ್ಚಾ ಹಾಗೂ ರಾಷ್ಟ್ರೋತ್ತಾನ ರಕ್ತನಿಧಿ ಸಹಯೋಗದೊಂದಿಗೆ ಸ್ವಾತಂತ್ರ್ಯ ಹೋರಾಟಗಾರರ ಹಾಗೂ ಹುತಾತ್ಮರ ಯೋಧರ ನೆನಪಿನಲ್ಲಿ ಹಮ್ಮಿಕೊಂಡಿದ್ದ ಸ್ವಯಂಪ್ರೇರಿತ ರಕ್ತದಾನ ಶಿಬಿರದಲ್ಲಿ ಮಾತನಾಡಿ, ಬಿಜೆಪಿ ಮತ್ತು ರಾಷ್ಟ್ರೋತ್ತಾನ ಪರಿಷತ್ ತುರ್ತು ಪರಿಸ್ಥಿತಿಯಲ್ಲಿರುವ ಜನಸಾಮಾನ್ಯರಿಗೆ ರಕ್ತ ಒದಗಿಸುವ ಉದ್ದೇಶದಿಂದ ರಕ್ತದಾನ ಶಿಬಿರ ಏರ್ಪಡಿಸಿದ್ದು, ಶನಿವಾರ ಮಾಲೂರು ಕ್ಷೇತ್ರದ ವ್ಯಾಪ್ತಿಯಲ್ಲಿ ಶಿಬಿರ ಏರ್ಪಡಿಲಾಗಿದೆ. ಪ್ರತಿಯೊಬ್ಬ ಯುವಕರೂ ಸ್ವಯಂ ಪ್ರೇರಿತಾಗಿ ರಕ್ತದಾನ ಮಾಡಿ ದೇಶದ ಗೌರವ ಉಳಿಸಬೇಕು. ಮೊದಲು ದೇಶ ನಂತರ ರಾಜಕೀಯ. ಎಲ್ಲ ರಾಜಕೀಯ ಪಕ್ಷಗಳು ಈ ರೀತಿಯ ಕಾರ್ಯಕ್ರಮ ಮಾಡುವುದರ ಮೂಲಕ ದೇಶಾಭಿಮಾನ ಹೆಚ್ಚಿಸಿಕೊಳ್ಳಬೇಕು ಎಂದರು.
    ಶಿಬಿರದಲ್ಲಿ 185 ಮಂದಿ ರಕ್ತದಾನ ಮಾಡಿದರು.

    ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ.ವೇಣುಗೋಪಾಲ್‌ರೆಡ್ಡಿ, ಉಪಾಧ್ಯಕ್ಷ ಎಂ.ರಾಮಮೂರ್ತಿ, ಸಂಜೀವಿನಿ ಚಾರಿಟಬಲ್ ಟ್ರಸ್ಟ್‌ನ ಅಧ್ಯಕ್ಷ ಹೂಡಿ ವಿಜಯ್‌ಕುಮಾರ್, ಬಿಜೆಪಿ ರಾಜ ಪರಿಷತ್ ಸದಸ್ಯ ಎಚ್.ಕೆ.ಚಂದ್ರಪ್ಪ, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸತೀಶ್‌ಆರಾಧ್ಯ, ತಾಲೂಕು ಬಿಜೆಪಿ ಅಧ್ಯಕ್ಷ ಪುರಾನಾರಾಯಣಸ್ವಾಮಿ, ಪುರಸಭೆ ಸದಸ್ಯರಾದ ಎಂ.ವಿ.ವೇಮನ, ಭಾನುತೇಜ, ಮಾಜಿ ಶಾಸಕ ಎ.ನಾಗರಾಜ್, ತಾಲೂಕು ಯುವಮೋರ್ಚಾ ಅಧ್ಯಕ್ಷ ಪ್ರೇಮ್‌ಕುಮಾರ್, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಅಮುದಾವೇಣು, ತಾಲೂಕು ಮಹಿಳಾ ಮೋರ್ಚಾ ಅಧ್ಯಕ್ಷೆ ಪದ್ಮಾವತಿ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts