More

    ರಕ್ತದಾನದಿಂದ ಧನ್ಯತಾ ಭಾವ : ಬೆಳ್ತಂಗಡಿ ರೋಟರಿ ಕ್ಲಬ್‌ನ ನಿಯೋಜಿತ ಅಧ್ಯಕ್ಷ ಪೂರನ್ ವರ್ಮ ಅನಿಸಿಕೆ

    ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ

    ರಕ್ತದಾನ ಮಾಡುವವರು ಹಾಗೂ ತೆಗೆದುಕೊಳ್ಳುವವರು ಯಾವುದೇ ಪ್ರಚಾರದ ಬಯಕೆ ಇಲ್ಲದೆ ಮಾಡುವ ರಕ್ತದಾನವು ಇತರ ಎಲ್ಲ ದಾನಗಳಿಗಿಂತ ಶ್ರೇಷ್ಠವಾಗಿದೆ ಎಂದು ಬೆಳ್ತಂಗಡಿ ರೋಟರಿ ಕ್ಲಬ್‌ನ ನಿಯೋಜಿತ ಅಧ್ಯಕ್ಷ ಪೂರನ್ ವರ್ಮ ಹೇಳಿದರು.

    ಭಾನುವಾರ ಉಜಿರೆಯಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ಮತ್ತು ಮಂಗಳೂರಿನ ಕೆ.ಎಂ.ಸಿ. ರಕ್ತ ಕೇಂದ್ರ ಹಾಗೂ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಆಯೋಜಿಸಿದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ರಕ್ತದಾನ ಮಾಡಿದವರಿಗೆ ಆರೋಗ್ಯ ವರ್ಧನೆಯೊಂದಿಗೆ ಮಾನಸಿಕ ಶಾಂತಿ, ನೆಮ್ಮದಿ ಸಿಗುತ್ತದೆ. ಜತೆಗೆ ಧನಾತ್ಮಕ ಚಿಂತನೆಯೊಂದಿಗೆ ಧನ್ಯತಾ ಭಾವವೂ ಮೂಡಿ ಬರುತ್ತದೆ ಎಂದರು.

    ಕನ್ಯಾಡಿ ಸೇವಾಭಾರತಿಯ ಸಂಚಾಲಕ ವಿನಾಯಕ ರಾವ್ ಕನ್ಯಾಡಿ ಪ್ರಾಸ್ತಾವಿಕವಾಗಿ ಮಾತನಾಡಿ, ಕನ್ಯಾಡಿಯಲ್ಲಿ ಸೇವಾ ಭಾರತಿಗೆ ನಾಲ್ಕು ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಿಸಿ ಸೇವಾ ಕಾರ್ಯಗಳನ್ನು ವಿಸ್ತರಿಸಲಾಗುವುದು. ಈಗಾಗಲೇ ಅನೇಕ ದಾನಿಗಳು ಹಾಗೂ ಸಂಸ್ಥೆಗಳು ಉದಾರ ನೆರವಿನ ಭರವಸೆ ನೀಡಿದ್ದಾರೆ ಎಂದರು.

    ಉಜಿರೆ ಶರತ್‌ಕೃಷ್ಣ ಪಡ್ವೆಟ್ನಾಯ ಅಧ್ಯಕ್ಷತೆ ವಹಿಸಿದರು. ಒಕ್ಕಲಿಗ ಸೇವಾ ಸಂಘದ ಅಧ್ಯಕ್ಷ ಧರ್ಣಪ್ಪ ಗೌಡ, ಬಂಟರ ಸಂಘದ ಅಧ್ಯಕ್ಷೆ ವನಿತಾ ಶೆಟ್ಟಿ, ಜಯಶ್ರೀ ಪ್ರಕಾಶ್, ಶ್ಯಾಮ್ ಭಟ್ ಅತ್ತಾಜೆ, ಬೆಳ್ತಂಗಡಿ ಸಿ.ಎ.ಬ್ಯಾಂಕ್ ಅಧ್ಯಕ್ಷ ಅಜಿತ್‌ಕುಮಾರ್ ಆರಿಗ ಮತ್ತು ಜನಾರ್ದನ್ ಕಾನರ್ಪ ಉಪಸ್ಥಿತರಿದ್ದರು.
    ಕನ್ಯಾಡಿ ಸೇವಾಭಾರತಿ ಅಧ್ಯಕ್ಷ ಸ್ವರ್ಣಗೌರಿ ಸ್ವಾಗತಿಸಿ, ಮಾಧವ ಗೌಡ ವಂದಿಸಿದರು. ಡಾ.ಶ್ರೀಧರ ಭಟ್ ನಿರೂಪಿಸಿದರು. ಎಸ್.ಡಿ.ಎಂ.ಸ್ವಾಯತ್ತ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕರು ರಕ್ತದಾನ ಶಿಬಿರದ ಸಂಘಟನೆಯಲ್ಲಿ ಸಕ್ರಿಯ ಸಹಕಾರ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts