More

    ರಕ್ತದ ಅವಶ್ಯಕತೆ ಬಹಳ ಇದೆ: ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಹೇಳಿಕೆ

    ಮಂಡ್ಯ: ದೇಶದಲ್ಲಿ ದಿನಕ್ಕೆ ನೂರಾರು ಅಪಘಾತಗಳು ನಡೆಯುತ್ತಿರುತ್ತವೆ. ಅಂತಹ ಸಂದರ್ಭದಲ್ಲಿ ರಕ್ತದ ಅವಶ್ಯಕತೆ ಬಹಳ ಇರುತ್ತದೆ. ಹಾಗಾಗಿ ಎಲ್ಲರೂ ಕೂಡ ರಕ್ತದಾನ ಮಾಡಿ ಜನರ ಪ್ರಾಣವನ್ನು ಉಳಿಸಿ ಎಂದು ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಕರೆ ನೀಡಿದರು.
    ನಗರದ ಪಿಇಎಸ್ ಇಂಜಿನಿಯರಿಂಗ್ ಕಾಲೇಜಿನ ಡಾ.ಎಚ್.ಡಿ.ಚೌಡಯ್ಯ ಸಭಾಂಗಣದಲ್ಲಿ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ಯುವ ರೆಡ್‌ಕ್ರಾಸ್ ಘಟಕ, ಪಿಇಎಸ್ ಇಂಜಿನಿಯರಿಂಗ್ ಕಾಲೇಜು, ಮಿಮ್ಸ್ ರಕ್ತನಿಧಿ ಕೇಂದ್ರದ ಸಹಯೋಗದಲ್ಲಿ ರಾಷ್ಟ್ರೀಯ ಯುವದಿನ ಆಚರಣೆಯ ಅಂಗವಾಗಿ ಆಯೋಜಿಸಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ಮಾತನಾಡಿದರು.
    ರಕ್ತದಾನ ಉತ್ತಮವಾದ ಕೆಲಸ. ಅವಶ್ಯಕತೆ ಇರುವವರಿಗೆ ರಕ್ತವನ್ನು ಕೊಟ್ಟು ಪ್ರಾಣವನ್ನು ಉಳಿಸಬೇಕು. ರೆಡ್‌ಕ್ರಾಸ್ ಸಂಸ್ಥೆ ಬಹಳ ಉತ್ತಮವಾದ ಸೇವೆ ಮಾಡುತ್ತಿದೆ. ಯಾವುದೇ ವ್ಯಕ್ತಿ ಅಪಘಾತ ಅಥವಾ ಶಸ್ತ್ರಚಿಕಿತ್ಸೆ ಸಂದರ್ಭದಲ್ಲಿ ರಕ್ತದ ಅವಶ್ಯಕತೆ ಇರುತ್ತದೆ. ಮಾತ್ರವಲ್ಲದೆ ರಕ್ತದಾನ ಮಾಡುವುದರಿಂದ ನಮ್ಮ ಆರೋಗ್ಯ ಚೆನ್ನಾಗಿರುತ್ತದೆ. ಒಬ್ಬ ವ್ಯಕ್ತಿಯ ಜೀವವನ್ನು ಉಳಿಸಬಹುದು ಎಂದರು.
    ರೆಡ್‌ಕ್ರಾಸ್ ಸಂಸ್ಥೆಯ ಸಭಾಧ್ಯಕ್ಷೆ ಮೀರಾ ಶಿವಲಿಂಗಯ್ಯ ಮಾತನಾಡಿ, ರಕ್ತದಾನ ಶಿಬಿರ ಎಲ್ಲದ್ದಕಿಂತ ಬಹಳ ಮಹತ್ವದ್ದು. ಆದ್ದರಿಂದ ಯುವಜನರು ಹೆಚ್ಚು ರಕ್ತದಾನ ಮಾಡಿ. ವಿದ್ಯಾರ್ಥಿಗಳಲ್ಲಿ ರಕ್ತದಾನ ಮಾಡುವ ಆಧ್ಯಾತ್ಮಿಕತೆ, ಸಹಕಾರ ಮನೋಭಾವ ಬೆಳೆಯಲಿ. ಪಿಇಎಸ್ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳು ಪ್ರತಿ ವರ್ಷ ಶಿಬಿರ ಆಯೋಜಿಸುವುದು ಶ್ಲಾಘನೀಯ ಎಂದರು.
    ಇದೇ ವೇಳೆ ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಸೇರಿದಂತೆ ವಿದ್ಯಾರ್ಥಿಗಳು ರಕ್ತದಾನ ಮಾಡಿದರು. ರಕ್ತದಾನಿಗಳಿಗೆ ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಪ್ರಮಾಣ ಪತ್ರ ವಿತರಣೆ ಮಾಡಿದರು.
    ರಕ್ತನಿಧಿ ವೈದ್ಯಾಧಿಕಾರಿ ಡಾ.ವೈ.ಮುರಳೀಧರ್ ಭಟ್, ಯುವ ರೆಡ್‌ಕ್ರಾಸ್ ಘಟಕದ ಡಾ.ಷಣ್ಮುಖ, ಸದಸ್ಯ ರಂಗಸ್ವಾಮಿ ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts