More

    200 ಜನರಿಂದ ಸ್ವಯಂ ಪ್ರೇರಿತ ರಕ್ತದಾನ: ಪುಲ್ವಾಮ ಹುತಾತ್ಮರಿಗೆ ಗೌರವ ಸಮರ್ಪಣೆ

    ಮಂಡ್ಯ: ಪುಲ್ವಾಮ ದಾಳಿ ವೇಳೆ ಹುತಾತ್ಮರಾದವರ ಸ್ಮರಣೆ ಅಂಗವಾಗಿ ನಗರದ ಗಾಂಧಿಭವನದಲ್ಲಿ ಆಯೋಜಿಸಿದ್ದ ಶಿಬಿರದಲ್ಲಿ 200 ಜನರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದರು.
    ಅಂತೆಯೇ ಉನ್ನತ ಶಿಕ್ಷಣ ಸಚಿವರ ಆಪ್ತ ಕಾರ್ಯದರ್ಶಿ ಬಿ.ವಿ.ಮಾರುತಿ ಪ್ರಸನ್ನ ಹಾಗೂ ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಜನ್ಮದಿನ ಹಿನ್ನೆಲೆಯಲ್ಲಿ ಜೀವಧಾರೆ ಟ್ರಸ್ಟ್‌ನಿಂದ ಶಿಬಿರ ಆಯೋಜಿಸಲಾಗಿತ್ತು. ಯುವಕ, ಯುವತಿಯರು ರಕ್ತದಾನ ಮಾಡಿದರು. ಈ ಪೈಕಿ 40ಕ್ಕೂ ಹೆಚ್ಚು ಜನ ಗೃಹರಕ್ಷಕ ದಳದವರಿದ್ದರು.
    ಕಾರ್ಯಕ್ರಮದ ಅಂಗವಾಗಿ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವವರನ್ನು ಸನ್ಮಾನಿಸಲಾಯಿತು. ನಿವೃತ್ತ ಸೈನಿಕ ಕ್ಯಾಪ್ಟನ್ ಹರೀಶ್, ರೈತ ಸಂಘದ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ, ಮದ್ದೂರು ತಾಲೂಕು ಕೆ.ಹೊನ್ನಲಗೆರೆ ಪ್ರೌಢಶಾಲೆಯ ಕನ್ನಡ ಶಿಕ್ಷಕ ನಾರಾಯಣ್ ಮತ್ತು ಮಂಡ್ಯ ತಾಲೂಕು ಹುನಗನಹಳ್ಳಿ ವೃತ್ತದ ಗ್ರಾಮಸಹಾಯಕ ಎಚ್.ಎಂ.ಶಂಕರ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಮಾತ್ರವಲ್ಲದೆ 60 ಜನ ಫಲಾನುಭವಿಗಳಿಗೆ ಜೀವಧಾರೆ ಟ್ರಸ್ಟ್ ವತಿಯಿಂದ ವಿಧವಾ ಮತ್ತು ವೃದ್ಧಾಪ್ಯ ವೇತನದ ಆದೇಶ ಪತ್ರ ವಿತರಣೆ ಮಾಡಲಾಯಿತು.
    ಶಿಬಿರಕ್ಕೆ ಚಾಲನೆ ನೀಡಿದ ಆದಿಚುಂಚನಗಿರಿ ಮಠದ ಕೊಮ್ಮೇರಹಳ್ಳಿ ಶಾಖೆಯ ಪುರುಷೋತ್ತಮಾನಂದನಾಥ ಸ್ವಾಮೀಜಿ, ಪುಲ್ವಾಮ ದಾಳಿ ವೇಳೆ ಹುತಾತ್ಮರಾದ ಸೈನಿಕರಿಗೆ ಗೌರವ ಸಲ್ಲಿಸಲು ರಕ್ತದಾನ ಶಿಬಿರ ಆಯೋಜಿಸಿರುವ ಶ್ಲಾಘನೀಯ. ದೇಶದ ಭದ್ರತೆಯಲ್ಲಿ ಸೈನಿಕರ ಪಾತ್ರ ಮಹತ್ವದ್ದಾಗಿದೆ ಎಂದರು.
    ಬಿ.ವಿ.ಮಾರುತಿ ಪ್ರಸನ್ನ, ಡಾ.ಎಚ್.ಎಲ್.ನಾಗರಾಜು, ತಹಸೀಲ್ದಾರ್ ಕುಂಞ ಅಹಮದ್, ಮಿಮ್ಸ್ ವೈದ್ಯಕೀಯ ಅಧೀಕ್ಷಕ ಡಾ.ಪಿ.ವಿ.ಶ್ರೀಧರ್, ಜಿಲ್ಲಾ ಗೃಹರಕ್ಷಕದ ದಳದ ಕಮಾಂಡೆಂಟ್ ವಿನೋದ್ ಖನ್ನಾ, ಮಂಜುಳಾ, ಜೀವಧಾರೆ ಟ್ರಸ್ಟ್ ಅಧ್ಯಕ್ಷ ನಟರಾಜು ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts