ಹುಬ್ಬಳ್ಳಿ : ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಶ್ರೀ ಬಾಲಾಜಿ ನರರೋಗ ಆಸ್ಪತ್ರೆ ಮತ್ತು ತುರ್ತು ಚಿಕಿತ್ಸಾ ಕೇಂದ್ರದ ಆವರಣದಲ್ಲಿ ಆ.15 ರಂದು ಬೆಳಗ್ಗೆ ರಿಂದ ಮಧ್ಯಾಹ್ನ 1 ಗಂಟೆವರೆಗೆ ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿದೆ.
ರಾಷೊ್ಟ್ರೕತ್ಥಾನ ರಕ್ತನಿಧಿ ಸಹಯೋಗದಲ್ಲಿ ಈ ಶಿಬಿರ ಏರ್ಪಡಿಸಲಾಗಿದೆ. ರಕ್ತದಾನದ ಮಹತ್ವ ಕುರಿತು ಸಂದೇಶ ಸಾರುವ ನಿಟ್ಟಿನಲ್ಲಿ ನಡೆಯುವ ಈ ಶಿಬಿರದಲ್ಲಿ ಆಸಕ್ತರು ಪಾಲ್ಗೊಂಡು, ರಕ್ತದಾನ ಮಾಡುವಂತೆ ಕೋರಲಾಗಿದೆ.