

ಶಿರ್ವ: ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್), ಯುವ ರೆಡ್‌ಕ್ರಾಸ್ ಘಟಕ, ಉಡುಪಿ ಎಚ್‌ಡಿಎಫ್‌ಸಿ ಬ್ಯಾಂಕ್, ಕುಂದಾಪುರದ ಭಾರತೀಯ ರೆಡ್‌ಕ್ರಾಸ್ ಘಟಕದ ರಕ್ತ ನಿಧಿ ಕೇಂದ್ರ, ಉಡುಪಿ ರೆಡ್ ರಿಬ್ಬನ್ ಕ್ಲಬ್, ಕಾಲೇಜು ಎನ್‌ಸಿಸಿ ಘಟಕ ಸಹಯೋಗದೊಂದಿಗೆ ರಕ್ತದಾನ ಶಿಬಿರ ಇತ್ತೀಚೆಗೆ ನಡೆಯಿತು.
ಭಾರತೀಯ ರೆಡ್‌ಕ್ರಾಸ್ ಘಟಕದ ಜಯಕರ್ ಶೆಟ್ಟಿ ಉದ್ಘಾಟಿಸಿದರು. ಉಪಪ್ರಾಂಶುಪಾಲ ಡಾ.ಗಣೇಶ್ ಐತಾಳ್, ಡೀನ್ ಡಾ.ನಾಗರಾಜ್ ಭಟ್, ಉದ್ಯೋಗ ಮತ್ತು ತರಬೇತಿ ಅಧಿಕಾರಿ ಡಾ.ಮಂಜುನಾಥ್, ರಾಷ್ಟ್ರೀಯ ಸೇವಾ ಯೋಜನೆ(ಎನ್‌ಎಸ್‌ಎಸ್), ಯುವ ರೆಡ್‌ಕ್ರಾಸ್ ಘಟಕ, ರೋಟರ‌್ಯಾಕ್ಟ್ ಕ್ಲಬ್ ಸಂಯೋಜಕ ಸಚಿನ್ ಪ್ರಭು ಉಪಸ್ಥಿತರಿದ್ದರು.