

ಕಾರ್ಕಳ: ಪ್ರಧಾನಿ ನರೇಂದ್ರ ಮೋದಿಯವರ 74ನೇ ಜನ್ಮದಿನಾಚರಣೆ ಅಂಗವಾಗಿ ಬಿಜೆಪಿ ಕಾರ್ಕಳ ಮಂಡಲ ವತಿಯಿಂದ ವಿವಿಧ ಕಾರ್ಯಕ್ರಮ ನಡೆಯಿತು.
ಮಾಹೆ ಸಂಸ್ಥೆ ಮಣಿಪಾಲ, ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ ಸಹಯೋಗದೊಂದಿಗೆ ಕಾರ್ಕಳ ಬಿಜೆಪಿ ಯುವ ಮೋರ್ಚಾದಿಂದ ರಕ್ತದಾನ ಶಿಬಿರ, ಕಾರ್ಕಳ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಆರೋಗ್ಯ ತಪಾಸಣೆ, ಕ್ಯಾನ್ಸರ್ ಜಾಗೃತಿ, ಮಾಹಿತಿ ಶಿಬಿರ ವಿಕಾಸ ಜನಸೇವಾ ಕಚೇರಿ ಸಭಾಂಗಣದಲ್ಲಿ ನಡೆಯಿತು.
ಬಿಜೆಪಿ ಮುಖಂಡ ಎಂ.ಕೆ ವಿಜಯ್ ಕುಮಾರ್ ಉದ್ಘಾಟಿಸಿದರು. ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ ಸಹಯೋಗದೊಂದಿಗೆ ಯುವ ಮೋರ್ಚಾ ಕಾರ್ಕಳ ನೇತೃತ್ವದಲ್ಲಿ ರಕ್ತದಾನ ಶಿಬಿರ ಆಯೋಜಿಸಿ 82 ಯೂನಿಟ್ ರಕ್ತವನ್ನು ದಾನಿಗಳಿಂದ ಸಂಗ್ರಹಿಸಲಾಯಿತು.
ಮಣಿಪಾಲ ರಕ್ತನಿಧಿ ಕೇಂದ್ರ ವೈದ್ಯಾಧಿಕಾರಿ ಡಾ.ಕಾರ್ತಿಕ್ ಅಯ್ಯರ್, ತಾಂತ್ರಿಕ ಸಲಹೆಗಾರ ವಿಶ್ವೇಶ್ ಆಚಾರ್ಯ, ಸಾರ್ವಜನಿಕ ಸಂಪರ್ಕ ಅಧಿಕಾರಿ ಆಶ್ಲಿನ್, ಮಂಡಲ ಅಧ್ಯಕ್ಷ ನವೀನ್ ನಾಯಕ್, ಜಿಲ್ಲಾ ಉಪಾಧ್ಯಕ್ಷ ಮಹಾವೀರ್ ಹೆಗ್ಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮ ಉದಯ್ ಶೆಟ್ಟಿ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸಂಧ್ಯಾ ರಮೇಶ್, ಮೋರ್ಚಾ ಅಧ್ಯಕ್ಷರಾದ ವಿನಯ ಡಿ.ಬಂಗೇರ, ರಾಕೇಶ್ ಶೆಟ್ಟಿ, ಪ್ರಮುಖರಾದ ರವೀಂದ್ರ ಕುಮಾರ್, ವೀಣಾ ಶೆಟ್ಟಿ, ಮಾಲಿನಿ ಶೆಟ್ಟಿ, ವಿಖ್ಯಾತ್ ಶೆಟ್ಟಿ, ಮಹಿಳಾ ಮೋರ್ಚಾ, ಯುವ ಮೋರ್ಚಾದ ತಾಲೂಕು, ಶಕ್ತಿಕೇಂದ್ರ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.