ಸ್ಥಾಪಕರ ದಿನಾಚರಣೆಗೆ ರಕ್ತದಾನ ಶಿಬಿರ

Blood Donation (1)
Published on

ಸುಳ್ಯ: ಫೆಡರಲ್ ಬ್ಯಾಂಕ್ ಸ್ಥಾಪಕರ ದಿನಾಚರಣೆಯ ಅಂಗವಾಗಿ ಸುಳ್ಯದಲ್ಲಿ ರಕ್ತದಾನ ಶಿಬಿರ ಇತ್ತೀಚೆಗೆ ನಡೆಯಿತು. ಸುಳ್ಯ, ಪುತ್ತೂರು ಕಡಬ ಮತ್ತು ನೆಲ್ಯಾಡಿ ಶಾಖೆಯ ಸಿಬ್ಬಂದಿ ರಕ್ತದಾನ ಶಿಬಿರದಲ್ಲಿ ಕಾರ್ಯನಿರ್ವಹಿಸಿದರು. ಸಿಬ್ಬಂದಿ, ಸಾರ್ವಜನಿಕರು ಸೇರಿದಂತೆ ಸುಮಾರು 40 ಮಂದಿ ರಕ್ತದಾನ ಶಿಬಿರದಲ್ಲಿ ಭಾಗವಹಿಸಿದ್ದರು. ಪುತ್ತೂರಿನ ರೋಟರಿ ಕ್ಯಾಂಸ್ಕೋ ಬ್ಲಡ್ ಬ್ಯಾಂಕ್ ಪುತ್ತೂರಿನ ವೈದ್ಯಕೀಯ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net