ಮಾನವೀಯತೆಗಿಂತ ಮಿಗಿಲಾದ ಧರ್ಮವಿಲ್ಲ : ರಕ್ತದಾನ ಶಿಬಿರ ಉದ್ಘಾಟಿಸಿ ಎನ್.ಪ್ರಕಾಶ್ ಕಾರಂತ್ ಅಭಿಮತ

New Project (28)
Published on

ಬಂಟ್ವಾಳ: ಮಾನವೀಯತೆಗಿಂತ ಮಿಗಿಲಾದ ಧರ್ಮ ಮತ್ತೊಂದಿಲ್ಲ. ಮಾನವೀಯತೆಗೆ ಪೂರಕವಾದ ಕಾರ್ಯವನ್ನು ಸೇವಾಂಜಲಿ ಸಂಸ್ಥೆ ನಡೆಸಿಕೊಂಡು ಬರುತ್ತಿದೆ ಎಂದು ರೋಟರಿ ಕ್ಲಬ್ ಪೂರ್ವ ಜಿಲ್ಲಾ ಗವರ್ನರ್ ಎನ್.ಪ್ರಕಾಶ್ ಕಾರಂತ್ ಹೇಳಿದರು.

ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಆಶ್ರಯದಲ್ಲಿ ಕೆಎಂಸಿ ಆಸ್ಪತ್ರೆ ಮಂಗಳೂರು ಸಹಯೋಗದೊಂದಿಗೆ ಫರಂಗಿಪೇಟೆಯಲ್ಲಿ 132ನೇ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಸೇವಾಂಜಲಿ ಪ್ರತಿಷ್ಠಾನ ಆಡಳಿತ ಟ್ರಸ್ಟಿ ಕೆ.ಕೃಷ್ಣಕುಮಾರ್ ಪೂಂಜ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೆಎಂಸಿ ಆಸ್ಪತ್ರೆ ಬ್ಲಡ್ ಬ್ಯಾಂಕ್ ಡಾ.ಹರ್ಷವರ್ಧನ್, ಫರಂಗಿಪೇಟೆ ಗಣೇಶೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ ಆಳ್ವ, ಫರಂಗಿಪೇಟೆ ವ್ಯವಸಾಯ ಸೇವಾ ಸಹಕಾರಿ ಸಂಘ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪುಂಚಮೆ ಉಪಸ್ಥಿತರಿದ್ದರು. ಟ್ರಸ್ಟಿ ಕೊಡ್ಮಾಣ್ ದೇವದಾಸ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಶೇಖರ ಪೂಜಾರಿ ಕಲ್ಲತಡಮೆ, ಶಿವರಾಜ್ ಸುಜೀರು, ಪ್ರಶಾಂತ್ ತುಂಬೆ, ಅರ್ಜುನ್ ಪೂಂಜ, ವಿಕ್ರಮ್ ಫರಂಗಿಪೇಟೆ, ಸಾರಮ್ಮ, ಪ್ರಸಾದ್ ಕೇಸನಮೊಗರು, ನಾರಾಯಣ ಮೇರಮಜಲು, ಗಾಯತ್ರಿ ಪ್ರಸಾದ್, ಮೋಹನ್ ಬೆಂಜನಪದವು ಮತ್ತಿತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net