

ಕಾರ್ಕಳ: ಜ್ಞಾನಸುಧಾದಲ್ಲಿ ಸಿಎಟಿಸಿ, ಟಿಎಸ್‌ಸಿಎನ್‌ಸಿಸಿ ಶಿಬಿರ ನಡೆಯುತ್ತಿದ್ದು, ರೆಡ್‌ಕ್ರಾಸ್ ಸೊಸೈಟಿ ಕಾರ್ಕಳ, ರೆಡ್‌ಕ್ರಾಸ್ ಬ್ಲಡ್‌ಬ್ಯಾಂಕ್ ಕುಂದಾಪುರ ಹಾಗೂ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಮತ್ತು 21 ಕರ್ನಾಟಕ ಬೆಟಾಲಿಯನ್ ಎನ್‌ಸಿಸಿ ಉಡುಪಿ ಸಹಯೋಗದಲ್ಲಿ ರಕ್ತದಾನ ಶಿಬಿರ ಜರುಗಿತು.
ಕಾರ್ಕಳದ ರೆಡ್‌ಕ್ರಾಸ್ ಸೊಸೈಟಿ ಅಧ್ಯಕ್ಷ ಡಾ.ಕೆ.ಆರ್.ಜೋಷಿ ಉದ್ಘಾಟಿಸಿದರು. ಎನ್‌ಸಿಸಿ ಕಮಾಂಡಿಂಗ್ ಆಫೀಸರ್ ಕರ್ನಲ್ ರಾಹುಲ್ ಚೌಹಾನ್, ಲೆಫ್ಟಿನೆಂಟ್ ಕರ್ನಲ್ ಎಂ.ಎಸ್.ರಾವತ್, ಕಾರ್ಕಳ ಜ್ಞಾನಸುಧಾ ಸಿಇಒ ಹಾಗೂ ಪ್ರಾಂಶುಪಾಲ ದಿನೇಶ್ ಎಂ.ಕೊಡವೂರ್, ಪಿಆರ್‌ಒ ಜ್ಯೋತಿ ಪದ್ಮನಾಭ ಭಂಡಿ, ಉಪಪ್ರಾಂಶುಪಾಲ ಸಾಹಿತ್ಯ ಹಾಗೂ ಎನ್‌ಸಿಸಿ ಅಧಿಕಾರಿಗಳು, ವಿವಿಧ ಜಿಲ್ಲೆಗಳ 450 ಎನ್.ಸಿ.ಸಿ. ಕೆಡೆಟ್‌ಗಳು ಭಾಗವಹಿಸಿದ್ದರು.