

ಗಂಗೊಳ್ಳಿ: ಗಂಗೊಳ್ಳಿ ಕೊಂಚಾಡಿ ರಾಧಾಶೆಣೈ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಅಮೃತ ಮಹೋತ್ಸವ ಸಮಿತಿ, ಹಳೇ ವಿದ್ಯಾರ್ಥಿ ಸಂಘ ಮತ್ತು ರಕ್ತ ನಿಧಿ ಕೇಂದ್ರ ಇಂಡಿಯನ್ ರೆಡ್ಕ್ರಾಸ್ ಸೊಸೈಟಿ ಕುಂದಾಪುರ ಆಶ್ರಯದಲ್ಲಿ ದಿ.ಕೊಂಚಾಡಿ ಗಣಪತಿ ಶೆಣೈ ಸ್ಮರಣಾರ್ಥ ರಕ್ತದಾನ ಶಿಬಿರ ಶನಿವಾರ ಶಾಲೆ ಸಭಾಂಗಣದಲ್ಲಿ ನಡೆಯಿತು.
ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ದಿವಾಕರ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಹಾಗೂ ಶಾಲಾಭಿಮಾನಿ ಎಚ್.ಗಣೇಶ್ ಕಾಮತ್ ಗಂಗೊಳ್ಳಿ ಶಿಬಿರ ಉದ್ಘಾಟಿಸಿದರು. ಕುಂದಾಪುರ ತಾಲೂಕು ವೈದ್ಯಾಧಿಕಾರಿ ಡಾ.ಪ್ರೇಮಾನಂದ ರಕ್ತದಾನ ಮಹತ್ವ ಕುರಿತು ಮಾಹಿತಿ ನೀಡಿದರು. ಕುಂದಾಪುರ ರಕ್ತ ನಿಧಿ ಕೇಂದ್ರ ವೈದ್ಯ ಡಾ.ಸತೀಶ್, ಎಸ್ಡಿಎಂಸಿ ಅಧ್ಯಕ್ಷ ರವಿಶಂಕರ್ ಖಾರ್ವಿ, ಹಳೇ ವಿದ್ಯಾರ್ಥಿ ಸಂಘ ಅಧ್ಯಕ್ಷ ಲಕ್ಷ್ಮಣ ಖಾರ್ವಿ, ರೆಡ್ಕ್ರಾಸ್ ಸೊಸೈಟಿ ಸಿಬ್ಬಂದಿ, ಅಮೃತ ಮಹೋತ್ಸವ ಸಮಿತಿ ಸದಸ್ಯರು, ಶಿಕ್ಷಕಿಯರು ಉಪಸ್ಥಿತರಿದ್ದರು.
ಪ್ರಭಾರ ಮುಖ್ಯ ಶಿಕ್ಷಕಿ ಯಶೋದಾ ಸ್ವಾಗತಿಸಿದರು. ಸಹಶಿಕ್ಷಕಿ ಅನುಷಾ ಸಿ.ಬಂಗೇರ ಕಾರ್ಯಕ್ರಮ ನಿರೂಪಿಸಿದರು. ಸಹಶಿಕ್ಷಕಿ ಉಷಾ ವಂದಿಸಿದರು.