More

    215 ಯೂನಿಟ್ ರಕ್ತಸಂಗ್ರಹಿಸಿದ ವಿದ್ಯಾರ್ಥಿಗಳು: ಮಾದರಿಯಾದ ಪಿಇಎಸ್ ಇಂಜಿನಿಯರಿಂಗ್ ಕಾಲೇಜು

    ಮಂಡ್ಯ: ನಗರದ ಪ್ರತಿಷ್ಠಿತ ಪಿಇಎಸ್ ಇಂಜಿನಿಯರಿಂಗ್ ಕಾಲೇಜಿನ ಡಾ.ಎಚ್.ಡಿ.ಚೌಡಯ್ಯ ಸಭಾಂಗಣದಲ್ಲಿ ವಿಶ್ವ ರೆಡ್‌ಕ್ರಾಸ್ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಶಿಬಿರದಲ್ಲಿ 215 ಯೂನಿಟ್ ರಕ್ತಸಂಗ್ರಹಿಸಲಾಯಿತು.
    ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಜಿಲ್ಲಾ ಶಾಖೆ, ಯುವ ರೆಡ್‌ಕ್ರಾಸ್ ಘಟಕ, ಪಿಇಎಸ್ ಇಂಜಿನಿಯರಿಂಗ್ ಕಾಲೇಜಿನ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಶಿಬಿರದಲ್ಲಿ ವಿದ್ಯಾರ್ಥಿಗಳು ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿ ಸ್ವಯಂಪ್ರೇರಿತ ರಕ್ತದಾನ ಮಾಡುವ ಮೂಲಕ ಮಾದರಿಯಾದರು. ಅಂತೆಯೇ ಸಂಗ್ರಹಿಸಿ ರಕ್ತವನ್ನು ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಮಿಮ್ಸ್) ರಕ್ತನಿಧಿ ಕೇಂದ್ರಕ್ಕೆ ಹಸ್ತಾಂತರಿಸಲಾಯಿತು.
    ಪಿಇಟಿ ಅಧ್ಯಕ್ಷ ಕೆ.ಎಸ್.ವಿಜಯಾನಂದ ಮಾತನಾಡಿ, ನಮ್ಮ ಸಂಸ್ಥೆಯ ವಿದ್ಯಾರ್ಥಿಗಳು ವರ್ಷದಲ್ಲಿ ಎರಡು ಬಾರಿ ರಕ್ತದಾನ ಶಿಬಿರ ಆಯೋಜಿಸುತ್ತಾರೆ. ಜಿಲ್ಲೆಯಲ್ಲಿಯೇ ನಮ್ಮ ವಿದ್ಯಾರ್ಥಿಗಳು ಹೆಚ್ಚಿನ ರಕ್ತ ಸಂಗ್ರಹಿಸುವ ಮೂಲಕ ಮಾದರಿಯಾಗುತ್ತಾರೆ. ರಕ್ತದಾನ ಬಹಳ ಮುಖ್ಯ. ಅಪಘಾತ, ಶಸ್ತ್ರಚಿಕಿತ್ಸೆ ಸಂದರ್ಭದಲ್ಲಿ ರಕ್ತದ ಅವಶ್ಯಕತೆ ಇರುತ್ತದೆ. ಯುವಕರು ಇಂತಹ ರಕ್ತದಾನ ಶಿಬಿರಗಳಲ್ಲಿ ಹೆಚ್ಚು ಪಾಲ್ಗೊಳ್ಳಬೇಕು ಎಂದು ಹೇಳಿದರು.
    ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಸಭಾಧ್ಯಕ್ಷೆ ಡಾ.ಮೀರಾ ಶಿವಲಿಂಗಯ್ಯ ಮಾತನಾಡಿ, ರಕ್ತಕ್ಕೆ ಪರ್ಯಾಯವಾದ ಯಾವುದೇ ವಸ್ತುವಿಲ್ಲ. ವಿದ್ಯಾರ್ಥಿಗಳು ರಕ್ತದಾನ ಮಾಡುತ್ತಿರುವುದರಿಂದ ಜಿಲ್ಲೆಯಲ್ಲಿ ಸಾಕಷ್ಟು ಜನರಿಗೆ ಅನುಕೂಲವಾಗುತ್ತಿದೆ ಎಂದರು.
    ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ನಿರ್ದೇಶಕ ಕೆ.ಟಿ.ಹನುಮಂತು ಮಾತನಾಡಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳು ರೆಡ್‌ಕ್ರಾಸ್ ಸಂಸ್ಥೆಯ ಸದಸ್ಯರಾಗುವ ಮೂಲಕ ಮಾನವೀಯ ಸೇವೆಯಲ್ಲಿ ತೊಡಗಿಸಿಕೊಳ್ಳಿ ಎಂದು ಸಲಹೆ ನೀಡಿದರು.
    ಪ್ರಾಂಶುಪಾಲ ಡಾ.ಎಚ್.ಎಂ.ನಂಜುಂಡಸ್ವಾಮಿ, ಉಪ ಪ್ರಾಂಶುಪಾಲ ಡಾ.ಎಸ್.ವಿನಯ್, ಯುವ ರೆಡ್‌ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿ ಡಾ.ಬಿ.ಷಣ್ಮುಖ, ರೆಡ್‌ಕ್ರಾಸ್ ಸಂಸ್ಥೆ ಗೌರವ ಕಾರ್ಯದರ್ಶಿ ಡಾ.ಕೆ.ಎಂ.ಶಿವಕುಮಾರ್, ಜಂಟಿ ಕಾರ್ಯದರ್ಶಿ ರಂಗಸ್ವಾಮಿ, ನಿರ್ದೇಶಕ ಮಂಗಲ ಎಂ.ಯೋಗೀಶ್, ರಕ್ತನಿಧಿ ಕೇಂದ್ರದ ಮುಖ್ಯಸ್ಥ ಡಾ.ಮುರಳೀಧರ್ ಭಟ್, ಪ್ರಾಧ್ಯಾಪಕರಾದ ಡಾ.ವೀಣಾ, ಅನಂತಪದ್ಮನಾಭ ಪ್ರಭು ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts