ರಾಮಕುಂಜದಲ್ಲಿ ರಕ್ತದಾನ, ಕಣ್ಣಿನ ಪರೀಕ್ಷೆ

New Project (23)
Published on

ಕಡಬ: ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾ ಆಶ್ರಯದಲ್ಲಿ ರೋಟರಿ ಕ್ಯಾಂಪ್ಕೊ ಬ್ಲಡ್ ಸೆಂಟರ್ ಪುತ್ತೂರು ಮತ್ತು ರೋಟರಿ ಕ್ಲಬ್ ಪುತ್ತೂರು, ಪ್ರಸಾದ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಗಳೂರು ಸಹಯೋಗದೊಂದಿಗೆ ಜಿ.ಎಲ್.ಆಚಾರ್ಯ ಜನ್ಮ ಶತಾಬ್ಧಿ ಸ್ಮರಣಾರ್ಥ ಸ್ವಯಂಪ್ರೇರಿತ ರಕ್ತದಾನ ಮತ್ತು ಕಣ್ಣಿನ ಉಚಿತ ಪರೀಕ್ಷೆ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲಾ ಸಭಾಂಗಣದಲ್ಲಿ ನಡೆಯಿತು.

ಪುತ್ತೂರಿನ ಸ್ವರ್ಣೋದ್ಯಮಿ ಬಲರಾಮ ಆಚಾರ್ಯ ಉದ್ಘಾಟಿಸಿದರು. ಪುತ್ತೂರು ರೋಟರಿ ಕ್ಲಬ್ ಅಧ್ಯಕ್ಷ ಡಾ.ಶ್ರೀಪ್ರಕಾಶ್, ಉದ್ಯಮಿ ಕೇಶವ ಅಮೈ ಶುಭಹಾರೈಸಿದರು. ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾ ಕಾರ್ಯದರ್ಶಿ ಕೆ.ಎಸ್.ರಾಧಾಕೃಷ್ಣ ಅಧ್ಯಕ್ಷತೆ ವಹಿಸಿದ್ದರು.

ಶ್ರೀ ರಾಮಕುಂಜೇಶ್ವರ ಸಿಬಿಎಸ್‌ಇ ವಿದ್ಯಾಲಯದ ಸಂಚಾಲಕ ಶಿವಪ್ರಸಾದ್ ಇಜ್ಜಾವು, ಆಲಂಕಾರು ಜೆಸಿಐ ಅಧ್ಯಕ್ಷ ಗುರುರಾಜ್ ರೈ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಲಯ ಮೇಲ್ವಿಚಾರಕಿ ಜಯಶ್ರೀ, ಪುತ್ತೂರು ಬ್ಲಡ್ ಬ್ಯಾಂಕ್‌ನ ಡಾ.ರಾಮಕೃಷ್ಣ ರಾವ್, ಶ್ರೀ ರಾಮಕುಂಜೇಶ್ವರ ಪ.ಪೂ. ಕಾಲೇಜು ಪ್ರಾಂಶುಪಾಲ ಚಂದ್ರಶೇಖರ ಕೆ., ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆ ಮುಖ್ಯ ಶಿಕ್ಷಕ ಸತೀಶ್ ಭಟ್ ಉಪಸ್ಥಿತರಿದ್ದರು. 2025-26ನೇ ಸಾಲಿನ ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಸತೀಶ್ ಭಟ್ ಅವರನ್ನು ಸನ್ಮಾನಿಸಲಾಯಿತು. ಕೆ.ಸೇಸಪ್ಪ ರೈ ಪ್ರಸ್ತಾವನೆಗೈದರು. ಗಾಯತ್ರಿ ಸ್ವಾಗತಿಸಿದರು. ಲೋಹಿತಾ ವಂದಿಸಿದರು. ಹರೀಶ್‌ಕುಮಾರ್ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net