

ವಿಜಯವಾಣಿ ಸುದ್ದಿಜಾಲ ಪಡುಬಿದ್ರಿ
ದೇಶದಲ್ಲಿ ಪ್ರಸ್ತುತ ರಕ್ತದ ಕೊರತೆಯಿದೆ. ರಕ್ತದಾನದಿಂದ ಜೀವ ಉಳಿಯುವಿಕೆ ಜತೆಗೆ ಆರೋಗ್ಯ ವೃದ್ಧಿಗೂ ಸಹಕಾರಿ ಎಂದು ತಹಸೀಲ್ದಾರ್ ಪ್ರತಿಭಾ ಆರ್. ಹೇಳಿದರು.
ಉಚ್ಚಿಲ ನಾಗರಿಕ ಹೋರಾಟ ಸಮಿತಿ, ರಕ್ತನಿಧಿ ಕೇಂದ್ರ ಕೆಎಂಸಿ ಮಣಿಪಾಲ ಆಶ್ರಯದಲ್ಲಿ ಉಚ್ಚಿಲದಲ್ಲಿ ಭಾನುವಾರ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಇಪ್ಪತ್ತಕ್ಕೂ ಅಧಿಕ ಬಾರಿ ರಕ್ತದಾನ ಮಾಡಿರುವ ಪಡುಬಿದ್ರಿ ಠಾಣಾಧಿಕಾರಿ ಪ್ರಸನ್ನ ಎಂ.ಎಸ್. ಗಮನಸೆಳೆದರು. ಉಚ್ಚಿಲ ನಾಗರಿಕ ಹೋರಾಟ ಸಮಿತಿ ಅಧ್ಯಕ್ಷ ಸಿರಾಜ್ ಎನ್.ಎಚ್ ಅಧ್ಯಕ್ಷತೆ ವಹಿಸಿದ್ದರು. ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ.ರಾಜಶ್ರೀ ಕಿಣಿ, ಇಬಾದುಲ್ಲಾ, ಮಣಿಪಾಲ ಕೆಎಂಸಿಯ ವೈದ್ಯ ಡಾ.ದೀಪು, ಡಾ.ಗಂಗಾಧರ ಶೆಟ್ಟಿ, ತಾಪಂ ಮಾಜಿ ಉಪಾಧ್ಯಕ್ಷ ಶೇಖಬ್ಬ, ವೇದವ್ಯಾಸ ಬಂಗೇರ, ಉಚ್ಚಿಲ ನಾಗರಿಕ ಹೋರಾಟ ಸಮಿತಿ ಕಾರ್ಯದರ್ಶಿ ಸುಕುಮಾರ್ ಉಪಸ್ಥಿತರಿದ್ದರು. ಝುನೈದ್ ಕಾರ್ಯಕ್ರಮ ನಿರೂಪಿಸಿದರು.