More

    ರಕ್ತದಾನಿಗಳ ಕೊಡುಗೆ ಅತ್ಯಂತ ಶ್ಲಾಘನೀಯ

    ಬೆಳಗಾವಿ: ಲಾಕ್‌ಡೌನ್ ಅವಧಿಯಲ್ಲಿ ರಕ್ತದ ಕೊರತೆಯಾಗಿತ್ತು. ಆದರೆ, ರಕ್ತದಾನಿಗಳು ರಕ್ತದ ಕೊರತೆ ನೀಗಿಸಿದ್ದು ಅತ್ಯಂತ ಶ್ಲಾಘನೀಯ ಎಂದು ಕೆಎಲ್‌ಇ ಸಂಸ್ಥೆ ಡಾ. ಪ್ರಭಾಕರ ಕೋರೆ ಆಸ್ಪತ್ರೆ ವೈದ್ಯಕೀಯ ನಿರ್ದೇಶಕ ಡಾ. ಎಂ.ವಿ. ಜಾಲಿ ಹೇಳಿದ್ದಾರೆ. ಡಾ.ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರ ಹಾಗೂ ರೆಡ್ ಕ್ರಾಸ್ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ ನಿಮಿತ್ತ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

    ಶಸ್ತ್ರಚಿಕಿತ್ಸೆ ನೆರವೇರಬೇಕಾದರೆ ರಕ್ತ ಅತ್ಯವಶ್ಯ. ಹೆರಿಗೆ ಸಂದರ್ಭದಲ್ಲಂತೂ ಮಹಿಳೆಯರಿಗೆ ರಕ್ತದ ಅಗತ್ಯತೆ ಹೆಚ್ಚಾಗಿರುತ್ತದೆ. ಯುವಕರು ರಕ್ತದಾನ ಮಾಡಲು ಮುಂದಾಗಬೇಕು ಎಂದರು. ಲಾಕ್‌ಡೌನ್ ಸಂದರ್ಭದಲ್ಲಿ ಅಪಘಾತಗಳು ಕಡಿಮೆ. ಆದರೂ ಕೆಲವು ತುರ್ತು ಸಂದರ್ಭದಲ್ಲಿ ರಕ್ತದ ಅವಶ್ಯಕತೆ ಇತ್ತು. ಯುವಕರು ರಕ್ತದಾನ ಮಾಡಲು ಮುಂದೆ ಬಂದರು ಎಂದು ಸ್ಮರಿಸಿದರು. ರೆಡ್‌ಕ್ರಾಸ್ ಸಂಸ್ಥೆ ಅಧ್ಯಕ್ಷ ಅಶೋಕ ಬದಾಮಿ ಮಾತನಾಡಿ, ವೈದ್ಯ ವಿಜ್ಞಾನದಲ್ಲಿ ಹಲವು ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಕಂಡು ಹಿಡಿಯಲಾಗಿದೆ. ರಕ್ತ ತಯಾರಿಸುವ ವಿಧಾನ ಮಾತ್ರ ಸಾಧ್ಯವಾಗಿಲ್ಲ ಎಂದರು. ಜೆಎನ್ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎನ್.ಎಸ್. ಮಹಾಂತಶೆಟ್ಟಿ ಮಾತನಾಡಿ, ಒಬ್ಬ ವ್ಯಕ್ತಿ ನೀಡುವ ರಕ್ತದಿಂದ ಮೂವರ ಜೀವ ಉಳಿಸಬಹುದು. ಯುವಕರು ರಕ್ತದಾನಕ್ಕೆ ಮುಂದಾಗಬೇಕು ಎಂದರು. ಡಾ. ಆರ್.ಎಸ್.ಮುಧೋಳ, ಡಾ.ರೇಖಾ ಮುಧೋಳ, ಡಾ.ಅವಿನಾಶ ಕವಿ, ಡಾ.ವಿಠ್ಠಲ ಮಾನೆ, ರಕ್ತ ಭಂಡಾರದ ಮುಖ್ಯಸ್ಥ ಡಾ. ಎಸ್.ವಿ. ವಿರಗಿ ಇದ್ದರು. 117 ಬಾರಿ ರಕ್ತದಾನ ಮಾಡಿದ ಶಿವಲಿಂಗಪ್ಪ ಕಿತ್ತೂರು ಅವರನ್ನು ಸತ್ಕರಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts