More

    ತುರ್ತು ಸಂದರ್ಭದಲ್ಲಿ ಜೀವ ಉಳಿಸುವ ಸಾಧನ ರಕ್ತ

    ಕಡೂರು: ಜೀವ ರಕ್ಷಣೆಗೆ ಕಾರಣವಾಗುವ ರಕ್ತದಾನ ಮಾಡುವ ಕಾರ್ಯದಲ್ಲಿ ಎಲ್ಲರೂ ಭಾಗಿಯಾಗುವ ಮೂಲಕ ವಿದ್ಯಾರ್ಥಿಗಳು ಸಾಮಾಜಿಕ ಕಾಳಜಿ ಬೆಳೆಸಿಕೊಳ್ಳಬೇಕು ಎಂದು ಪುರಸಭೆ ಸದಸ್ಯ ಭಂಡಾರಿ ಶ್ರೀನಿವಾಸ್ ಹೇಳಿದರು.
    ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯುವ ರೆಡ್‌ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆ, ಐಕ್ಯೂಎಸಿನಿಂದ ಸೋಮವಾರ ಆಯೋಜಿಸಿದ್ದ ರಕ್ತದಾನ ಮತ್ತು ರಕ್ತಗುಂಪು ಪರೀಕ್ಷಾ ಶಿಬಿರ ಉದ್ಘಾಟಿಸಿ ಮಾತನಾಡಿ, ಮಾನವನಿಗೆ ಆಕಸ್ಮಿಕ ಸಂದರ್ಭದಲ್ಲಿ ಅಗತ್ಯವಾಗಿ ಬೇಕಾಗುವ ರಕ್ತ ಅಮೂಲ್ಯ ಜೀವ ಉಳಿಸುವ ವಸ್ತುವಾಗಿದೆ. ಇದನ್ನು ತಿಳಿದು ಯುವಪೀಳಿಗೆ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು ಎಂದರು.
    ದಾನಗಳಲ್ಲಿ ರಕ್ತದಾನ ಮಹಾದಾನ. ಜನರ ಜೀವರಕ್ಷಣೆಗೆ ರಕ್ತ ಅತ್ಯವಶ್ಯಕವಾಗಿದೆ. ವಿದ್ಯಾರ್ಥಿಗಳು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ರಕ್ತದಾನ ಮಾಡಿದರೆ ತಮ್ಮ ದೇಹದ ಕೊಬ್ಬಿನಾಂಶ ಕಡಿಮೆಯಾಗಿ ಹೊಸ ರಕ್ತ ಉತ್ಪತ್ತಿಯಾಗಲು ಸಾಧ್ಯವಾಗಲಿದೆ. ಮಕ್ಕಳಿಗೆ ವ್ಯಾಸಂಗದ ಜತೆಗೆ ಬದುಕಿಗೆ ಪೂರಕ ಶಿಕ್ಷಣ ನೀಡುವಲ್ಲಿ ಹೆಚ್ಚಿನ ಒತ್ತು ನೀಡುತ್ತಿರುವುದು ಶ್ಲಾಘನೀಯ ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts